ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

2013ರಲ್ಲಿ ನಡೆದಿದ್ದ ರಸ್ತೆ ಅಪಘಾತವನ್ನು ಇತ್ತೀಚೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮರು ವಿಚಾರಣೆಗೆ ಒಳಪಡಿಸಲಾಯಿತು. ಈ ಅಪಘಾತದಲ್ಲಿ ಮಹಿಳಾ ದಂತವೈದ್ಯರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಅವರ ದೇಹದ ಸುಮಾರು 90%ನಷ್ಟು ಭಾಗ ಪಾರ್ಶ್ವವಾಯುವಿಗೆ ತುತ್ತಾಗಿತ್ತು. ಈ ಪ್ರಕರಣವನ್ನು ಮೊದಲು ವಿಚಾರಣೆ ನಡೆಸಿದ್ದ ಮೋಟಾರು ವಾಹನ ನ್ಯಾಯಮಂಡಳಿ ರೂ.18,43,908 ರೂಪಾಯಿಗಳನ್ನು ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರವಾಗಿ ನೀಡಬೇಕೆಂದು ಆದೇಶ ನೀಡಿತ್ತು.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಪರಿಹಾರದ ಮೊತ್ತ ತೀರಾ ಕಡಿಮೆಯಾಯಿತು ಎಂಬ ಕಾರಣಕ್ಕೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ಕಿರುಬಕಾರನ್ ಹಾಗೂ ಅಬ್ದುಲ್ ಕುತುಬ್ ಅವರಿದ್ದ ನ್ಯಾಯಪೀಠದ ಮುಂದೆ ಈ ಪ್ರಕರಣದ ವಿಚಾರಣೆ ನಡೆಯಿತು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ವಿಚಾರಣೆ ನಡೆಸಿದ ನ್ಯಾಯಪೀಠ ಪರಿಹಾರದ ಮೊತ್ತವನ್ನು 1 ಕೋಟಿ 49 ಲಕ್ಷ ರೂಪಾಯಿಗಳಿಗೆ ಏರಿಸಿತು. 2013ರಿಂದ ಅನ್ವಯವಾಗುವಂತೆ 7% ಬಡ್ಡಿ ಸೇರಿಸಿ 7 ವಾರಗಳಲ್ಲಿ ಪರಿಹಾರ ಮೊತ್ತವನ್ನು ಪಾವತಿಸುವಂತೆ ನ್ಯಾಯಪೀಠ ಆದೇಶ ನೀಡಿದೆ.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಈ ಪ್ರಕರಣದ ವಿಚಾರಣೆ ವೇಳೆ ರಸ್ತೆ ಅಪಘಾತಗಳಲ್ಲಿ ಸಾವು ನೋವುಗಳು ಹೆಚ್ಚಾಗಲು ವೇಗವಾಗಿ ವಾಹನ ಚಾಲನೆ ಮಾಡುವುದೇ ಕಾರಣವೆಂದು ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಇದೇ ವೇಳೆ ವಾಹನಗಳ ವೇಗದ ಮಿತಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವಂತೆ ಸರ್ಕಾರಗಳಿಗೆ ಸೂಚನೆ ನೀಡಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಕೇಂದ್ರ ಸರ್ಕಾರವು 2018ರಲ್ಲಿ ಎಕ್ಸ್‌ಪ್ರೆಸ್‌ವೇಗಳಲ್ಲಿ ಗರಿಷ್ಠ ವೇಗದ ಮಿತಿಯನ್ನು ಪ್ರತಿ ಗಂಟೆಗೆ 120 ಕಿ.ಮೀಗಳಿಗೆ ಏರಿಕೆ ಮಾಡಿದೆ. ಈ ವೇಗದ ಮಿತಿಯನ್ನುಮರುಪರಿಶೀಲಿಸುವಂತೆ ನ್ಯಾಯಪೀಠವು ಆದೇಶ ನೀಡಿದೆ.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

2009 - 2019ರ ನಡುವಿನ ಅಂಕಿ ಅಂಶಗಳಿಗೆ ಹೋಲಿಸಿದರೆ ಕಳೆದ ಹತ್ತು ವರ್ಷಗಳಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವಿನ ಸಂಖ್ಯೆ ದ್ವಿಗುಣಗೊಂಡಿದೆ ಎಂದು ನ್ಯಾಯಾಧೀಶರು ವಿಷಾದ ವ್ಯಕ್ತ ಪಡಿಸಿದರು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಪ್ರತಿ ಗಂಟೆಗೆ 6 ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ನಿಗಮ ವರದಿ ಮಾಡಿದೆ. ಈ ಅಪಘಾತಗಳಲ್ಲಿ ಭಾಗಿಯಾಗುವವರಲ್ಲಿ 70% ಜನರು 18 - 45 ವರ್ಷದೊಳಗಿನವರು ಎಂಬುದು ಗಮನಾರ್ಹ.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಇವುಗಳನ್ನು ಗಮನದಲ್ಲಿಟ್ಟುಕೊಂಡು ದ್ವಿಚಕ್ರ ವಾಹನಗಳಲ್ಲಿ ವೇಗ ಮಿತಿ ತಂತ್ರಜ್ಞಾನವನ್ನು ಅಳವಡಿಸುವಂತೆ ಡಿಚಕ್ರ ವಾಹನ ತಯಾರಕ ಕಂಪನಿಗಳಿಗೆ ಸೂಚನೆ ನೀಡುವಂತೆ ಚೆನ್ನೈ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಆಮದು ಮಾಡಿಕೊಳ್ಳುವ ವಾಹನಗಳಲ್ಲೂ ಈ ತಂತ್ರಜ್ಞಾನವನ್ನು ಕಡ್ಡಾಯಗೊಳಿಸುವಂತೆ ನ್ಯಾಯಾಧೀಶರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ದ್ವಿಚಕ್ರ ವಾಹನಗಳಲ್ಲಿ ವೇಗದ ಮಿತಿ ಅಳವಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ವೇಗದಲ್ಲಿ ಪ್ರಯಾಣಿಸುವ ವಾಹನಗಳನ್ನು ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ಬಳಸಬಹುದೆಂದು ಸಹ ನ್ಯಾಯಪೀಠವು ಸೂಚನೆ ನೀಡಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Madras High Court directs to install speed limiter in two wheelers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X