ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಭಾರತದಲ್ಲಿ ಸಂಭವಿಸುವ ಬಹುತೇಕ ಅಪಘಾತಗಳು ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿರುತ್ತವೆ ಎಂಬ ಅಘೋಷಿತ ಆರೋಪ ದೇಶಾದ್ಯಂತ ಕೇಳಿ ಬರುತ್ತಿದೆ. ದ್ವಿಚಕ್ರ ವಾಹನ ಸವಾರರು ಬೇಕಾಬಿಟ್ಟಿಯಾಗಿ ವಾಹನ ಚಾಲನೆ ಮಾಡುವುದೇ ಇದಕ್ಕೆ ಮುಖ್ಯ ಕಾರಣವೆಂದು ಹೇಳಲಾಗುತ್ತದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಬಹುತೇಕ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ನಿಯಮಗಳ ಬಗ್ಗೆ ತಿಳಿದೇ ಇಲ್ಲ. ಸಿಗ್ನಲ್ ಜಂಪ್, ಒನ್ ವೇಯಲ್ಲಿ ವಾಹನ ಚಾಲನೆ ಮಾಡುವುದು, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುವುದು - ದ್ವಿಚಕ್ರ ವಾಹನ ಸವಾರರ ಪ್ರಮುಖ ಸಂಚಾರ ನಿಯಮ ಉಲ್ಲಂಘನೆಗಳಾಗಿವೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಇದರಿಂದ ಪ್ರತಿ ದಿನ ದೇಶದ ವಿವಿಧ ಭಾಗಗಳಲ್ಲಿ ಅಪಘಾತಗಳು ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ಆಧಾರದ ಮೇಲೆ ದ್ವಿಚಕ್ರ ವಾಹನಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ದ್ವಿಚಕ್ರ ವಾಹನಗಳಲ್ಲಿ ಮಿರರ್ ಇರಲೇ ಬೇಕು ಎಂದು ಹೈ ಕೋರ್ಟ್ ಆದೇಶ ಹೊರಡಿಸಿದೆ. ಮಿರರ್ ತೆಗೆದು ಹಾಕುವವರ ವಾರಂಟಿ ರದ್ದು ಪಡಿಸುವಂತೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಟರ್ನ್ ಮಾಡುವಾಗ ನೆರವಾಗಲಿ ಎಂಬ ಕಾರಣಕ್ಕೆ ಎಲ್ಲಾ ವಾಹನಗಳಲ್ಲಿ ಮಿರರ್'ಗಳನ್ನು ಒದಗಿಸಲಾಗುತ್ತದೆ. ಆದರೆ ಕೆಲವರು ಶೋಕಿಗಾಗಿ ಮಿರರ್'ಗಳನ್ನು ತೆಗೆದು ಹಾಕುತ್ತಿದ್ದಾರೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ವಾಹನಗಳಲ್ಲಿ ಮಿರರ್'ಗಳು ಇಲ್ಲದಿದ್ದರೆ ಟರ್ನಿಂಗ್'ಗಳಲ್ಲಿ ಹಿಂದೆ ಬರುತ್ತಿರುವ ವಾಹನಗಳನ್ನು ಗಮನಿಸಲು ಸಾಧ್ಯವಾಗದ ಕಾರಣ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಲಾಗಿದೆ. ಈ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಕೋರಿ ವಕೀಲರೊಬ್ಬರು ಮದ್ರಾಸ್ ಹೈ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ದ್ವಿಚಕ್ರ ವಾಹನಗಳಲ್ಲಿ ಮಿರರ್'ಗಳನ್ನು ತೆಗೆದುಹಾಕುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಅವರು ಆರೋಪಿಸಿದ್ದರು. ಮಿರರ್'ಗಳನ್ನು ತೆಗೆದು ಹಾಕುವವರಿಗೆ ದಂಡ ವಿಧಿಸಬೇಕೆಂದು ಅವರು ಮನವಿ ಮಾಡಿದ್ದರು.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಸೆಂದಿಲ್ ಕುಮಾರ್ ರಾಮಮೂರ್ತಿ ಅವರಿದ್ದ ನ್ಯಾಯಪೀಠ, ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ತಮಿಳುನಾಡು ಸಾರಿಗೆ ಆಯುಕ್ತರಿಗೆ ನಿರ್ದೇಶನ ನೀಡಿದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ದ್ವಿಚಕ್ರ ವಾಹನಗಳಲ್ಲಿ ಮಿರರ್'ಗಳನ್ನು ತೆಗೆದುಹಾಕಿದರೆ ವಾಹನದ ವಾರಂಟಿಯನ್ನು ರದ್ದು ಪಡಿಸಲಾಗುವುದು ಎಂದು ಗ್ರಾಹಕರಿಗೆ ಎಚ್ಚರಿಕೆ ನೀಡುವಂತೆ ವಾಹನ ತಯಾರಕ ಕಂಪನಿಗಳಿಗೆ ಸೂಚಿಸುವಂತೆ ಸಾರಿಗೆ ಆಯುಕ್ತರಿಗೆ ಸೂಚನೆ ನೀಡಿದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಅಗತ್ಯವಾದರೆ ಹೊಸ ವಾರಂಟಿ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ನ್ಯಾಯಾಲಯವು ಸಲಹೆ ನೀಡಿದೆ. ಮದ್ರಾಸ್ ಹೈಕೋರ್ಟ್‌ನ ಆದೇಶವು ದ್ವಿಚಕ್ರ ವಾಹನ ಸವಾರರಿಗೆ ಆಘಾತವನ್ನುಂಟು ಮಾಡಿದೆ.

ದ್ವಿಚಕ್ರ ವಾಹನಗಳಲ್ಲಿ ಮಿರರ್ ಅಳವಡಿಕೆ ಕಡ್ಡಾಯಗೊಳಿಸಿದ ಹೈ ಕೋರ್ಟ್

ಕರೋನಾ ವೈರಸ್ ಸಾಂಕ್ರಾಮಿಕದ ಸಮಯದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದರ ಜೊತೆಗೆ, ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಈಗ ವಾಹನಗಳಲ್ಲಿ ಮಿರರ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

Most Read Articles

Kannada
English summary
Madras High Court orders to install mirrors in two wheelers. Read in Kannada.
Story first published: Thursday, July 15, 2021, 19:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X