ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಹೆಲ್ಮೆಟ್ ಇಲ್ಲದೇ ಬೈಕ್ ಸವಾರಿ ಮಾಡುವವರ ವಿರುದ್ಧ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸಹ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇವೆ. ಹೀಗಾಗಿ ಮದ್ರಾಸ್ ಹೈಕೋರ್ಟ್ ಈ ಕುರಿತಂತೆ ಮತ್ತಷ್ಟು ಕಠಿಣ ಕ್ರಮಕೈಗೊಳ್ಳಲು ತಮಿಳುನಾಡು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ದಂಡದ ಜೊತೆಗೆ ಮತ್ತಷ್ಟು ಹೊಸ ಕ್ರಮ ಜಾರಿಗೆ ಬರುವುದು ಖಚಿತವಾಗಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ದೇಶಾದ್ಯಂತ ಪ್ರತಿ ತಿಂಗಳು ಸಾವಿರಾರರು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆಯೇ ಅಪಘಾತಗಳಲ್ಲಿ ಪ್ರಾಣಕಳೆದುಕೊಳ್ಳುತ್ತಿದ್ದು, ಪಕ್ಕದ ರಾಜ್ಯ ತಮಿಳುನಾಡಿನಲ್ಲೂ ಕಳೆದ ಕೆಲ ವರ್ಷಗಳಲ್ಲಿ ಲಕ್ಷಾಂತರ ಜನ ಬೈಕ್ ಸವಾರರು ಅಪಘಾತಗಳ ಸಂದರ್ಭದಲ್ಲಿ ಹೆಲ್ಮೆಟ್ ಇಲ್ಲದೆಯೇ ಜೀವ ಕಳೆದುಕೊಂಡಿದ್ದಾರೆ. ಇದೀಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಹೆಲ್ಮೆಟ್ ಇಲ್ಲದ ಬೈಕ್ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ದುಬಾರಿ ದಂಡಗಳ ಹೊರತಾಗಿಯೂ ದೇಶಾದ್ಯಂತ ಬಹುತೇಕ ವಾಹನ ಸವಾರರು ಒಂದಿಲ್ಲಾ ಒಂದು ರೀತಿಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇರುತ್ತಾರೆ. ಇದರಿಂದಲೇ ಶೇ.90 ರಷ್ಟು ಅಪಘಾತಗಳು ಹೆಚ್ಚುತ್ತಿದ್ದು, ದಂಡದ ಬದಲಾಗಿ ಹೊಸ ಕ್ರಮ ಜರಗಿಸುವಂತೆ ಮದ್ರಾಸ್ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ, ಸಿಲ್ಟ್ ಬೆಲ್ಟ್ ಧರಿಸದೇ ಕಾರು ಚಾಲನೆ, ಸಿಗ್ನಲ್ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದಿರುವುದು, ಕುಡಿದು ವಾಹನ ಚಾಲನೆ ಮಾಡುವುದು, ಓವರ್ ಸ್ಪೀಡಿಂಗ್, ಮೊಬೈಲ್ ಬಳಕೆ ಪ್ರಕರಣಗಳೇ ಹೆಚ್ಚಿನ ಮಟ್ಟದಲ್ಲಿ ಸಾವು-ನೋವುಗಳಿಗೆ ಕಾರಣವಾಗಿದ್ದು, ಇದೇ ಕಾರಣಕ್ಕೆ ಮದ್ರಾಸ್ ಹೈಕೋರ್ಟ್ ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹತ್ವದ ಸೂಚನೆ ನೀಡಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಮದ್ರಾಸ್ ಹೈಕೋರ್ಟ್ ಸೂಚನೆಯೆಂತೆ ಈಗಾಗಲೇ ಕಠಿಣ ಕ್ರಮ ತೆಗೆದುಕೊಂಡಿರುವ ತಮಿಳುನಾಡು ಪೊಲೀಸರು ಚೆನ್ನೈ ಸೇರಿದಂತೆ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲೂ ಸಹ ಸಾವಿರಾರು ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದ್ದು, ಮತ್ತೆ ಮತ್ತೆ ಹೆಲ್ಮೆಟ್ ಇಲ್ಲದೆಯೇ ಸಿಕ್ಕಿಬಿದ್ದಲ್ಲಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗುತ್ತಿದೆ.

ಇನ್ನು ದೇಶಾದ್ಯಂತ ಬಹುತೇಕ ನಗರಗಳಲ್ಲಿ ದಿನದಿಂದ ದಿನಕ್ಕೆ ಸಂಚಾರಿ ನಿಯಮ ಉಲ್ಲಂಘಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ಕಾರಣಕ್ಕೆ ಮೋಟಾರ್ ವೆಹಿಕಲ್ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರವು ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳಿಗೆ ಈ ಹಿಂದಿನ ದಂಡಗಳಿಗಿಂತ ದುಪ್ಪಟ್ಟು ದಂಡವನ್ನು ವಿಧಿಸಲು ಅನುಮತಿ ನೀಡಲಾಗಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಈ ಹಿಂದೆ ಇದ್ದ ಬಹುತೇಕ ಸಂಚಾರಿ ನಿಯಮಗಳ ದಂಡಗಳ ಮೊತ್ತವು ರೂ.100ರಿಂದ ಕನಿಷ್ಠ ರೂ. 500ಕ್ಕೆ ಏರಿಕೆಯಾಗಿದ್ದಲ್ಲಿ ಆಂಬ್ಯುಲೆನ್ಸ್ ಮತ್ತು ಯೋಗ್ಯತಾ ಪ್ರಮಾಣ ಪತ್ರವಿಲ್ಲದೆ ಸಾರ್ವಜನಿಕ ರಸ್ತೆಯ ಮೇಲೆ ಸಾರಿಗೆ ವಾಹನವನ್ನು ನಡೆಸುವುದು ಅಥವಾ ನಡೆಸಲು ಅನುಮತಿಸುವುದಕ್ಕೆ ರೂ. 3 ಸಾವಿರದಿಂದ ರೂ. 10 ಸಾವಿರ ತನಕ ದಂಡ ವಿಧಿಸಲು ಅನುಮತಿಸಲಾಗಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಜೊತೆಗೆ ಕುಡಿದು ವಾಹನ ಚಾಲನೆ ಮಾಡುವ ವಾಹನ ಸವಾರರಿಗೂ ಭಾರೀ ಪ್ರಮಾಣದ ದಂಡದ ಜೊತೆಗೆ ಜೈಲು ಶಿಕ್ಷೆಯನ್ನು ಸಹ ವಿಧಿಸಲಾಗುತ್ತಿದ್ದು, ಲೈಸೆನ್ಸ್ ರದ್ದುಪಡಿಸುವ ಮೂಲಕ ಕೆಲಸ ಮಾಡುವ ಸ್ಥಳದಲ್ಲೂ ಕುಡಿದು ವಾಹನ ಚಾಲನೆ ಮಾಡುವ ಬಗ್ಗೆ ಮಾಹಿತಿ ರವಾನೆ ಮಾಡಲಾಗುತ್ತಿದೆ.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಒಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳು ಜಾರಿಗೆ ಬರಲಿದ್ದು, ಇದರಿಂದ ಪ್ರತಿಯೊಬ್ಬ ವಾಹನ ಸವಾರರು ಕೂಡಾ ತಪ್ಪು ಮಾಡುವುದಕ್ಕೂ ಮುನ್ನ ಮತ್ತೆ ಮತ್ತೆ ಯೋಚಿಸುವುದು ಒಳಿತು.

ಹೆಲ್ಮೆಟ್ ಇಲ್ಲದ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಮದ್ರಾಸ್ ಹೈಕೋರ್ಟ್

ಇಲ್ಲವಾದರೆ ಸಂಚಾರಿ ನಿಯಮ ಉಲ್ಲಂಘಿಸಿದ ತಪ್ಪಿಗೆ ದಂಡವಷ್ಟೇ ಅಲ್ಲದೇ ಜೈಲು ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಬಹುದಾಗಿದ್ದು, ಕೆಲವೊಮ್ಮೆ ಸಂಚಾರಿ ನಿಯಮಗಳ ಉಲ್ಲಂಘನೆಯು ನಿಮ್ಮ ಪ್ರಾಣಕ್ಕೂ ಕುತ್ತುತರಬಹುದಾದ ಪರಿಸ್ಥಿತಿ ಬರಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಸುರಕ್ಷತೆಯಿಂದ ಚಾಲನೆ ಮಾಡಿದರೆ ನಿಮಗೂ ಒಳ್ಳೆಯದು, ಇತರರಿಗೂ ಒಳ್ಳೆಯದು...

Most Read Articles

Kannada
English summary
After Madras High Court Warns, Tamil Nadu Cops Taking Strict Action Against Helmetless Riders. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more