ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಿದ ಮೊದಲ ಭಾರತೀಯ ಮೂಲದ ವಾಹನ ತಯಾರಕ ಕಂಪನಿ ಮಹೀಂದ್ರಾ ಅಂಡ್ ಮಹೀಂದ್ರಾ. ಕಂಪನಿಯು ಇದುವರೆಗೂ ಇ ವೆರಿಟೊ, ಇ 2 ಒ ಪ್ಲಸ್ ಸೇರಿದಂತೆ ಎರಡು ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಚಾರ್ಜಿಂಗ್ ಮೂಲಸೌಕರ್ಯಗಳ ಕೊರತೆಯಿರುವುದರಿಂದ ಈ ಎರಡೂ ಕಾರುಗಳು ನಿರೀಕ್ಷಿತ ಮಟ್ಟದಲ್ಲಿ ಜನಪ್ರಿಯವಾಗಲಿಲ್ಲ. ಈ ಕಾರಣಕ್ಕೆ ಕಂಪನಿಯು ಈ ಕಾರುಗಳನ್ನು ಸ್ಥಗಿತಗೊಳಿಸಿತು. ಈ ಕಾರುಗಳ ಕಡಿಮೆ ವ್ಯಾಪ್ತಿಯು ಸಹ ಇವುಗಳ ವೈಫಲ್ಯಕ್ಕೆ ಪ್ರಮುಖ ಕಾರಣವೆಂದು ಹೇಳಲಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಎರಡೂ ಕಾರುಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ 100-110 ಕಿ.ಮೀಗಳವರೆಗೆ ಚಲಿಸುತ್ತವೆ. ಬೇರೆ ಕಂಪನಿಯ ಕಾರುಗಳಿಗೆ ಹೋಲಿಸಿದರೆ ಈ ವ್ಯಾಪ್ತಿ ಸಾಕಷ್ಟು ಕಡಿಮೆಯಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಈಗ ಪುಣೆ ಮೂಲದ ಕಂಪನಿಯೊಂದು ಮಹೀಂದ್ರಾ ಇ 2 ಒ ಪ್ಲಸ್ ಕಾರಿನ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಯತ್ನಿಸಿದೆ. ಈ ಕಾರಿನಲ್ಲಿರುವ ಬ್ಯಾಟರಿ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಮಹೀಂದ್ರಾ ಇ 2 ಒ ಪ್ಲಸ್ ಕಾರಿನಲ್ಲಿ 11 ಕಿ.ವ್ಯಾ ಹಾಗೂ 14 ಕಿ.ವ್ಯಾ ಬ್ಯಾಟರಿಗಳನ್ನು ಅಳವಡಿಸಲಾಗಿದೆ. ಈ ಬ್ಯಾಟರಿಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ ಕ್ರಮವಾಗಿ 110 ಕಿ.ಮೀ ಹಾಗೂ 140 ಕಿ.ಮೀಗಳವರೆಗೆ ಚಲಿಸುತ್ತವೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಈಗ ಕಾರಿನ ಬ್ಯಾಟರಿ ಸಾಮರ್ಥ್ಯವನ್ನು 28 ಕಿ.ವ್ಯಾಗೆ ಹೆಚ್ಚಿಸಲಾಗಿದೆ. ಇದರಿಂದ ಈ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ. ಬ್ಯಾಟರಿ ಸಾಮರ್ಥ್ಯವನ್ನು ಹೆಚ್ಚಿಸಲು, ಕಾರಿನಲ್ಲಿ ಪ್ರತ್ಯೇಕವಾದ 17 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಹೊಸ ಬ್ಯಾಟರಿಯನ್ನು ಅಳವಡಿಸಿದ ನಂತರ ಕಾರಿನ ವ್ಯಾಪ್ತಿಯನ್ನು ತೋರಿಸಲು ಬ್ಯಾಟರಿಯನ್ನು 100% ಚಾರ್ಜ್‌ನಿಂದ 4% ಚಾರ್ಜ್‌ವರೆಗೂ ಚಾಲನೆ ಮಾಡಲಾಗಿದೆ. ಕಾರಿನಲ್ಲಿ ಕೇವಲ 4%ನಷ್ಟು ಬ್ಯಾಟರಿ ಉಳಿದಿರುವಾಗ ಕಾರು 350 ಕಿ.ಮೀಗಳವರೆಗೆ ಚಲಿಸಿದೆ ಎಂಬುದನ್ನು ಈ ವೀಡಿಯೊದಲ್ಲಿ ತೋರಿಸಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಮಹೀಂದ್ರಾ ಇ 2 ಒ ಪ್ಲಸ್ ಕಾರಿನಲ್ಲಿ ಇಂಡಕ್ಷನ್ ಮೋಟರ್ ಬಳಸಲಾಗಿದೆ. ಈ ಮೋಟರ್ 26 ಬಿಹೆಚ್‌ಪಿ ಪವರ್ ಹಾಗೂ 70 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 80 ಕಿ.ಮೀಗಳಾಗಿದೆ.

ಮಹೀಂದ್ರಾ ಇ 2 ಒ ಪ್ಲಸ್ ಕಾರು 7 ಗಂಟೆ 20 ನಿಮಿಷಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗುತ್ತದೆ. ಇ 2 ಒ ಪ್ಲಸ್ ಕಾರ್ ಅನ್ನು ಮಹೀಂದ್ರಾ ಕಂಪನಿಯು 2016ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೂರ್ತಿಯಾಗಿ ಚಾರ್ಜ್ ಆದ ನಂತರ 350 ಕಿ.ಮೀಗಳವರೆಗೆ ಚಲಿಸುತ್ತದೆ ಈ ಎಲೆಕ್ಟ್ರಿಕ್ ಕಾರು

ಈ ಕಾರಿನ ಆರಂಭಿಕ ಬೆಲೆ ರೂ.5.46 ಲಕ್ಷಗಳಾಗಿದೆ. 4 ಸೀಟುಗಳ ಈ ಹ್ಯಾಚ್‌ಬ್ಯಾಕ್ ಕಾರು ಹೆಚ್ಚು ಕಾಂಪ್ಯಾಕ್ಟ್ ಆಗಿದೆ. ಕಡಿಮೆ ಸಂಖ್ಯೆಯಲ್ಲಿ ಮಾರಾಟವಾದ ಕಾರಣಕ್ಕೆ ಮಹೀಂದ್ರಾ ಕಂಪನಿಯು ಈ ಕಾರಿನ ಉತ್ಪಾದನೆಯನ್ನು 2019ರಲ್ಲಿ ನಿಲ್ಲಿಸಿತು.

Most Read Articles

Kannada
English summary
Mahindra e2o plus travels 350 kms after full charge. Read in Kannada.
Story first published: Thursday, April 22, 2021, 17:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X