Scorpio: ಹೊಲ ಉಳಲು ದುಬಾರಿ ಬೆಲೆಯ ಮಹೀಂದ್ರಾ ಸ್ಕಾರ್ಪಿಯೋ ಬಳಕೆ.. ವಿಡಿಯೋ ಸಖತ್ ವೈರಲ್

ಮಹೀಂದ್ರಾ ಸ್ಕಾರ್ಪಿಯೋ-ಎನ್ (Mahindra Scorpio N) ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿರುವ ಎಸ್‌ಯುವಿಯಾಗಿದೆ. ಭಾರೀ ಬೇಡಿಕೆಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಈ ಕಾರನ್ನು ಹೊಲ ಉಳಲು ಬಳಕೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಭಾರತದಂತಹ ಕೃಷಿ ಪ್ರಧಾನ ದೇಶದಲ್ಲಿ ರೈತರು, ತಮ್ಮ ಜಮೀನುಗಳಲ್ಲಿ ಉಳುಮೆ ಮಾಡಲು ಬಹುತೇಕ ಎತ್ತುಗಳು ಅಥವಾ ಟ್ರಾಕ್ಟರ್ ಉಪಯೋಗ ಮಾಡುವುದು ಸರ್ವೇ ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಕ್ತಿ ದುಬಾರಿ ಬೆಲೆಯ ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಳಸಿರುವುದು ಹಲವರಿಗೆ ವಿಚಿತ್ರವಾಗಿ ಕಂಡಿದೆ. ಅಷ್ಟಕ್ಕೂ ಈತ ಕಾರಿನಲ್ಲಿ ನಿಜವಾಗಿಯೂ ಉಳುವೆ ಮಾಡಿಲ್ಲ. ಬದಲಾಗಿ ರೀಲ್ಸ್ ಮಾಡುವ ಉದ್ದೇಶದಿಂದ ಅದರ ಸಾಮರ್ಥ್ಯವನ್ನು ಪರೀಕ್ಷಿಸುತ್ತಿರುವಂತೆ ತೋರುತ್ತಿದೆ.

Mahindra Scorpio N Car Using For Farming Video Full Viral

ರಾಹುಲ್ ರಾವ್ ಸಾಹೇಬ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿಯನ್ನು ಟೆಸ್ಟ್ ಮಾಡುತ್ತಿರುವ ವಿವಿಧ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ. ಅವುಗಳಲ್ಲಿ ಈ ಕಾರಿನ ಹಿಂಭಾಗದ ಬಂಪರ್‌ಗೆ ನೇಗಿಲನ್ನು ಕಟ್ಟಿ ಜಮೀನನ್ನು ಉಳುತ್ತಿರುವುದನ್ನು ನೋಡಬಹುದು. ಜೊತೆಗೆ ಮಹೀಂದ್ರಾ ಟ್ರಾಕ್ಟರ್‌ ಮತ್ತು ಸ್ಕಾರ್ಪಿಯೋ ಕಾರನ್ನು ಒಂದಕ್ಕೊಂದನ್ನು ಹಗ್ಗದಿಂದ ಬಿಗಿದು ಎಳೆಯುವ ಹಲವು ವಿಡಿಯೋಗಳನ್ನು ಕೂಡ ಕಾಣಬಹುದು.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿ ರೂ.13.60 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಹಾಗೂ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Mahindra Scorpio N Car Using For Farming Video Full Viral

ಈ ಕಾರು 2 ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 2.2 - ಲೀಟರ್ ಡೀಸೆಲ್ ಮತ್ತು 2 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6 - ಸ್ಪೀಡ್ ಮ್ಯಾನುವಲ್/ 6 - ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 2WD (ಟೂ ವೀಲ್ ಡ್ರೈವ್) ಮತ್ತು 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಕಾರು 6 ಅಥವಾ 7 ಆಸನ ವ್ಯವಸ್ಥೆಯನ್ನು ಪಡೆದಿದ್ದು, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಸ್ಕಾರ್ಪಿಯೋ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್‌, ಫ್ರಂಟ್ (ಮುಂಭಾಗ) ಹಾಗೂ ರೇರ್ (ಹಿಂಭಾಗ) ಕ್ಯಾಮೆರಾಗಳು, ಹಿಲ್ - ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್)ವನ್ನು ಪಡೆದಿದೆ. ಈ ಕಾರಿಗೆ ಟಾಟಾ ಹ್ಯಾರಿಯರ್, ಸಫಾರಿ ಮತ್ತು ಹ್ಯುಂಡೈ ಕ್ರೆಟಾ ಮಾದರಿಗಳು ಪ್ರಬಲ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 8, 2024, 18:39 [IST]
English summary
Mahindra scorpio n car using for farming video full viral
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+