ಅಪ್ಪ-ಅಮ್ಮನ ವಿವಾಹ ವಾರ್ಷಿಕೋತ್ಸವ: ಸ್ಕಾರ್ಪಿಯೊ-ಎನ್ ಕಾರು ವಿತರಣೆ ಪಡೆದು ಕುಣಿದು ಕುಪ್ಪಳಿಸಿದ ಕುಟುಂಬ
ಪ್ರತಿಯೊಬ್ಬರಿಗೂ ಸ್ವಂತ ಕಾರನ್ನು ಖರೀದಿಸಬೇಕೆಂಬ ಕನಸು ಇರುತ್ತದೆ. ಬಹಳ ಕಾತರದಿಂದ ಕಾಯುತ್ತಿದ್ದ ಕಾರಿನ ವಿತರಣೆ ದಿನದಂದು ಹಬ್ಬದ ರೀತಿಯ ಸಂಭ್ರಮ. ಕಾರಿನ ವಿತರಣೆ ಪಡೆಯುವ ವೇಳೆ ಕೆಲವರು ಭಾವನೆಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸುತ್ತಾನೆ. ಇತ್ತೀಚೆಗೆ ಒಂದು ಕುಟುಂಬವು ತಮ್ಮ ಹೊಚ್ಚಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ವಿತರಣೆ ವೇಳೆ ಡಾನ್ಸ್ ಮಾಡಿದ್ದಾರೆ.
ಹೊಚ್ಚಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ವಿತರಣೆ ತೆಗೆದುಕೊಳ್ಳುವಾಗ ಕುಟುಂಬವು ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಡೀಲರ್‌ಶಿಪ್‌ನ ಕೆಲವು ಜನರೊಂದಿಗೆ ಇಡೀ ಕುಟುಂಬವು ಈ ಅವಿಸ್ಮರಣೀಯ ಕ್ಷಣವನ್ನು ಸಂಭ್ರಮಿಸಿದ್ದಾರೆ. ತಮ್ಮ ಮಹೀಂದ್ರ ಸ್ಕಾರ್ಪಿಯೋ-ಎನ್ ವಿತರಣೆಯ ಸಮಯದಲ್ಲಿ ಕುಟುಂಬವು ಡ್ಯಾನ್ಸ್ ಮಾಡುವ ವೀಡಿಯೊವನ್ನು ಮನೀಶ್ ರಾಜ್ ಸಿಂಘಾನಿಯಾ ಅವರು ತಮ್ಮ ಪ್ರೊಫೈಲ್‌ನಲ್ಲಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮ ಸ್ವಂತ ವಾಹನವನ್ನು ಖರೀದಿಸುವ ಸಂತೋಷ. ಕಳೆದ 23 ವರ್ಷಗಳಲ್ಲಿ ನಾನು ನೋಡಿದ ಎಲ್ಲಾ ಡೆಲಿವರಿಗಳಲ್ಲಿ... ಇದು ನಾನು ಹೆಚ್ಚು ಇಷ್ಟಪಟ್ಟದ್ದು. ದೀನಾನಾಥ್ ಸಾಹು ಅವರು ತಮ್ಮ ಕುಟುಂಬದೊಂದಿಗೆ ತಮ್ಮ 23 ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಾರೆ. ಕಾರುಗಳು ಅಂತಹ ಉತ್ಸಾಹ. ನಮ್ಮ ಗ್ರಾಹಕರ ಕನಸುಗಳನ್ನು ಈಡೇರಿಸುವುದನ್ನು ನಾವು ಮುಂದುವರಿಸುತ್ತೇವೆ ಎಂದು ಡೀಲರ್‌ಶಿಪ್‌ನ ಮಾಲೀಕ ಮನೀಶ್ ರಾಜ್ ಸಿಂಘಾನಿಯಾ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ವರದಿಗಳ ಪ್ರಕಾರ, ಮಹೀಂದ್ರಾ ಡೀಲರ್‌ಶಿಪ್ ಛತ್ತೀಸ್‌ಗಢದ ರಾಯ್‌ಪುರದಲ್ಲಿರುವುದು. ಪೋಷಕರ 23ನೇ ವಿವಾಹ ವಾರ್ಷಿಕೋತ್ಸವದ ನೆನಪಿಗಾಗಿ ಕುಟುಂಬವು ಮಹೀಂದ್ರಾ ಕಂಪನಿಯ ಸ್ಕಾರ್ಪಿಯೋ-ಎನ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹಳೆಯ ಸೂಪರ್ ಹಿಟ್ ಭಾರತೀಯ ಹಾಡುಗಳಿಗೆ ಡ್ಯಾನ್ಸ್ ಮಾಡುವುದನ್ನು ವೀಡಿಯೊದಲ್ಲಿ ಕಾಣಬಹುದು. ಡೀಲರ್‌ಶಿಪ್ ಸಿಬ್ಬಂದಿಯೊಂದಿಗೆ ಇಡೀ ಕುಟುಂಬವು ಈ ಕ್ಷಣವನ್ನು ಸಂಭ್ರಮಿಸುತ್ತಿದ್ದಾರೆ.
ಇನ್ನು ಈ ಕುಟುಂಬ ಖರೀದಿಸಿದ ಮಹೀಂದ್ರಾ ಸ್ಕಾರ್ಪಿಯೊ ಬಗ್ಗೆ ಹೇಳುವುದಾದರೆ, ಸ್ವದೇಶಿ ಮಹೀಂದ್ರಾ ಕಂಪನಿಯ ಗೇಮ್ ಚೇಂಜರ್ ಎಸ್‍ಯುವಿ ಸ್ಕಾರ್ಪಿಯೋ ಎರಡೂ ದಶಕಗಳಿಂದ ಬ್ರ್ಯಾಂಡ್‌ನ ಅತ್ಯಂತ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಕಂಪನಿಯ ಎಸ್‍ಯುವಿಗಳ ಸರಣೆಯಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ, ಮಾರಾಟದಲ್ಲಿ ಮಹೀಂದ್ರಾ ಕಂಪನಿಗೆ ಇಂದಿಗೂ ಹೆಚ್ಚಿನ ಕೊಡುಗೆಯನ್ನು ನೀಡುವುದನ್ನು ಮುಂದುವರೆಸಿರುವುದು ವಿಶೇಷ.
ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ಹಳೆಯ ತಲೆಮಾರಿನ ನವೀಕೃತ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯನ್ನು ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಎಸ್‍ಯುವಿಯನ್ನು ನ್ಯೂ ಜನರೇಷನ್ ಸ್ಕಾರ್ಪಿಯೋ-ಎನ್ ಜೊತೆಗೆ ಮಾರಾಟ ಮಾಡಲಾಗುತ್ತದೆ, ಈ ಎರಡೂ ಎಸ್‍ಯುವಿಗಳು ಭರ್ಜರಿಯಾಗಿ ಮಾರಾಟವಾಗುತ್ತಿದೆ, ಎಲ್ಲಾ ಎಸ್‍ಯುವಿಗಳ ಬಿಗ್ ಡ್ಯಾಡಿ ಸ್ಕಾರ್ಪಿಯೋ ಬೇಡಿಕೆ ಹೆಚ್ಚಾಗಿರುವುದರಿಂದ ಇದರ ಕಾಯುವ ಅವಧಿ ಕೂಡ ಹೆಚ್ಚಾಗಿದೆ.
ಇನ್ನು ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಮಹೀಂದ್ರಾ ಸ್ಕಾರ್ಪಿಯೊ-ಎನ್ ಎಸ್‍ಯುವಿಯ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ. ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಹೊಂದಿದೆ.
ಇದರೊಂದಿಗೆ ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ನೊಂದಿಗೆ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ. ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.


Click it and Unblock the Notifications