Nikhat Zareen: ಚಿನ್ನದ ಹುಡುಗಿಗೆ ಪವರ್ ಫುಲ್ ಮಹೀಂದ್ರಾ ಥಾರ್ ಉಡುಗೊರೆ
ಭಾರತದ ಪ್ರಮುಖ ವಾಹನ ತಯಾರಕ ಕಂಪನಿ ಮಹೀಂದ್ರಾ (Mahindra), ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ತನ್ನ ಕಾರುಗಳನ್ನು ಉಡೊಗೊರೆಯಾಗಿ ನೀಡಿ, ಗೌರವಿಸುತ್ತದೆ. ಅಪ್ರತಿಮ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸಂಪ್ರದಾಯವನ್ನು ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದೆ. ಇದೀಗ, ಬಾಕ್ಸರ್ ನಿಖತ್ ಜರೀನ್‌ಗೆ ಥಾರ್ ಎಸ್‌ಯುವಿ ಗಿಫ್ಟ್ ನೀಡಿದೆ.
ಈ ವರ್ಷದ ಮಾರ್ಚ್‌ನಲ್ಲಿ ನಡೆದ ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ (IBA Women's World Boxing Championships 2023)ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಭಾರತದ ಬಾಕ್ಸರ್ ನಿಖತ್ ಜರೀನ್ (Nikhat Zareen) ಅವರಿಗೆ ಮಹೀಂದ್ರಾ ಕಂಪನಿ, 'ಥಾರ್' ಆಫ್-ರೋಡ್ ಎಸ್‌ಯುವಿ (Thar SUV) ಅನ್ನು ಉಡುಗೊರೆಯಾಗಿ ಕೊಟ್ಟಿದೆ.

ಜರೀನ್ ಅವರು, ಲೈಟ್ ಫ್ಲೈವೇಟ್ ವಿಭಾಗದಲ್ಲಿ ವಿಯೆಟ್ನಾಂ ಬಾಕ್ಸರ್, ನ್ಗುಯಾನ್ ಥಾಮ್ ಅವರನ್ನು 5-0 ಅಂಕಗಳ ಅಂತರದಲ್ಲಿ ಸೋಲಿಸಿ ಜಯಗಳಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಮಹೀಂದ್ರಾ, 'ಭಾರತದ ಶ್ರೇಷ್ಠ ಬಾಕ್ಸಿಂಗ್ ಚಾಂಪಿಯನ್, ದೇಶದ ಪ್ರಮುಖ ಆಫ್-ರೋಡರ್‌ಗಿಂತ ಕಡಿಮೆಯಿಲ್ಲ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದಿದ್ದಕ್ಕೆ ಹೊಚ್ಚ ಹೊಸ ಥಾರ್ ನೀಡಿ, ಗೌರವಿಸಲಾಗಿದೆ' ಎಂದು ಬರೆದುಕೊಂಡಿದೆ.
ಈ ಹಿಂದೆಯೇ, ಚಿನ್ನದ ಹುಡುಗಿ ನಿಖತ್ ಜರೀನ್ ಅವರಿಗೆ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಮಹೀಂದ್ರಾ ಘೋಷಿಸಿತ್ತು. ನಿನ್ನೆ (ಆಗಸ್ಟ್ 9) ಹೈದರಾಬಾದ್‌ನಲ್ಲಿರುವ ಮಹೀಂದ್ರಾ ಡೀಲರ್‌ಶಿಪ್‌ನಲ್ಲಿ ಜರೀನ್‌ಗೆ ಥಾರ್ ಎಸ್‌ಯುವಿಯನ್ನು ವಿತರಣೆ ಮಾಡಲಾಗಿದೆ. ಅವರಿಗೆ ಉಡುಗೊರೆಯಾಗಿ ನೀಡಲಾದ ಥಾರ್, ನಾಪೋಲಿ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಅದು ಯಾವ ರೂಪಾಂತರವೆಂದು ನಿಖರವಾಗಿ ತಿಳಿದುಬಂದಿಲ್ಲ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಥಾರ್, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 4WD (ಫೋರ್ ವೀಲ್ ಡ್ರೈವ್), RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಇದರ, 1.5 ಲೀಟರ್ ಡಿಸೇಲ್ ಎಂಜಿನ್, 117 hp ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮತ್ತೊಂದು, 2.2 - ಲೀಟರ್ ಡೀಸೆಲ್ ಎಂಜಿನ್ 128 hp ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಇನ್ನೊಂದು, 2.0 - ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 150 hp ಪವರ್ ಮತ್ತು 320 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. 15.2 kmpl ಮೈಲೇಜ್ ನೀಡುತ್ತದೆ.
ಮಹೀಂದ್ರಾ ಥಾರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕ್ರೂಸ್ ಕಂಟ್ರೋಲ್, ಎಲ್‌ಇಡಿ DRLs ಜೊತೆಯಲ್ಲಿ ಹ್ಯಾಲೊಜೆನ್ ಹೆಡ್‌ಲೈಟ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಅನ್ನು ಪಡೆದಿದೆ. ಅಕ್ವಾಮರೀನ್, ಎವರೆಸ್ಟ್ ವೈಟ್, ರೆಡ್ ರೇಜ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಸುರಕ್ಷತೆಯ ದೃಷ್ಟಿಯಿಂದ ಥಾರ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಿಲ್ ಡಿಸೆಂಟ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಬಗೆಬಗೆಯ ಸೇಫ್ಟಿ ಫೀಚರ್ಸ್ ಪಡೆದಿದೆ. ಈ ಎಸ್‌ಯುವಿಗೆ ಭಾರೀ ಬೇಡಿಕೆ ಇದ್ದು, 78 ವಾರಗಳಿಗೆ ಕಾಯುವಿಕೆ ಅವಧಿ ಹೊಂದಿದೆ. ಫೋರ್ಸ್ ಗೂರ್ಖಾ ಮತ್ತು ಮಾರುತಿ ಸುಜುಕಿ ಜಿಮ್ನಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications