ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ದೇಶದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳಿಗೆ ಪ್ರಮುಖ ಕಾರಣ ವಾಹನಗಳಲ್ಲಿ ಜೋಡಿಸಲಾಗುವ ತಾಂತ್ರಿಕ ಸೌಲಭ್ಯಗಳ ಕೊರತೆ ಅಂದ್ರೆ ತಪ್ಪಾಗುವುದಿಲ್ಲ. ಯಾಕೆಂದ್ರೆ ಅಗ್ಗದ ಬೆಲೆಯ ವಾಹನಗಳಿಂದಾಗಿ ಅಮಾಯಕರ ಜೀವಗಳು ಬಲಿಯಾಗುತ್ತಿದ್ದು, ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ಸುರಕ್ಷಾ ಮಾರ್ಗಸೂಚಿಯ ಮಹತ್ವವನ್ನು ಈ ಕೆಳಗಿನ ವಿಡಿಯೋದಲ್ಲಿ ನೀವು ನೋಡಬಹುದಾಗಿದೆ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಮುಂದಿನ ತಿಂಗಳು ಏಪ್ರಿಲ್ 1ರಿಂದ 125ಸಿಸಿ ಮೇಲ್ಪಟ್ಟ ಪ್ರತಿ ವಾಹನಕ್ಕೂ ಸಿಬಿಯು(ಕಾಂಬಿ ಬ್ರೇಕಿಂಗ್ ಸಿಸ್ಟಂ) ಮತ್ತು 150 ಸಿಸಿ ಮೇಲ್ಪಟ್ಟ ವಾಹನಗಳಿಗೆ ಎಬಿಎಸ್(ಆ್ಯಂಟಿ ಬ್ರೇಕಿಂಗ್ ಸಿಸ್ಟಂ) ಸೌಲಭ್ಯವನ್ನು ಕಡ್ಡಾಯಗೊಳಿಸುತ್ತಿದ್ದು, ಇದರಿಂದ ಅಪಘಾತಗಳ ಸಂಖ್ಯೆಯನ್ನ ಗಣನೀಯವಾಗಿ ತಗ್ಗಿಸಬಹುದೆಂದು ಅಂದಾಜಿಸಲಾಗುತ್ತಿದೆ. ಹಾಗಾದ್ರೆ ಎಬಿಎಸ್‌ನಿಂದ ವಾಹನ ಸವಾರರಿಗೆ ಏನು ಪ್ರಯೋಜನ? ಇದರಿಂದ ಅಪಘಾತಗಳ ಸಂಖ್ಯೆ ಹೇಗೆ ತಗ್ಗಿಸಬಹುದು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಮೊನ್ನೆಯಷ್ಟೇ ಮಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹೀಂದ್ರಾ ಎಕ್ಸ್‌ಯುವಿ 500 ಎಸ್‌ಯುವಿ ಕಾರೊಂದು ಸುಮಾರು 120 ಕಿ.ಮಿ ವೇಗದಲ್ಲಿ ಚಲಿಸುತ್ತಿತ್ತು. ಆದ್ರೆ ಇದೇ ವೇಳೆ ಹೆದ್ದಾರಿಯಲ್ಲಿ ಅಡ್ಡಲಾಗಿ ಬಂದ ಟೊಯೊಟಾ ಇನೋವಾ ಕಾರಿಗೆ ಮಹೀಂದ್ರಾ ಎಕ್ಸ್‌ಯುವಿ ಕಾರು ಡಿಕ್ಕಿ ಪರಿಸ್ಥಿತಿ ಎದುರಾಗಿತ್ತು.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಆದ್ರೆ ಅದೃಷ್ಟವಶಾತ್ ಅಂತಹ ಯಾವುದೇ ಅವವಢಗಳು ಸಂಭವಿಸಲಿಲ್ಲ ಅಂದ್ರೆ ನೀವು ನಂಬಲೇಬೇಕು. ಇದಕ್ಕೆ ಕಾರಣ ಆ ಕಾರಿನಲ್ಲಿ ಅಳವಡಿಸಲಾಗಿದ್ದ ಎಬಿಎಸ್ ವ್ಯವಸ್ಥೆಯು ಕಾರಿನಲ್ಲಿದ್ದವರ ಪ್ರಾಣ ಉಳಿಯಲು ಸಹಕಾರಿಯಾಯ್ತು ಅನ್ನುವುದು ವಾಸ್ತವ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ವೇಗದಲ್ಲಿದ್ದ ಕಾರನ್ನು ಕೆಲವೇ ಸೇಕೆಂಡುಗಳಲ್ಲಿ ನಿಯಂತ್ರಣ ಮಾಡಿದ ಎಕ್ಸ್‌ಯುವಿ500 ಕಾರು ಚಾಲಕನು ರಸ್ತೆಯಲ್ಲಿ ಅಡ್ಡಲಾಗಿ ಬಂದ ಇನೋವಾ ಕಾರಿನ ಬಳಿಗೆ ಬಂದು ನಿಲ್ಲಿಸಿದ. ಅದೃಷ್ಟ ಚೆನ್ನಾಗಿತ್ತು ಅಂತಾ ಕಾಣುತ್ತೆ ಯಾವುದೇ ತೊಂದರೆಗಳಿಲ್ಲದೆ ಬಚಾವ್ ಆದ್ರು.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಮಂಗಳೂರು ಬಳಿಯ ಹಳ್ಳಿಯೊಂದರ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಟೊಯೊಟಾ ಇನೋವಾ ಕಾರು ಚಾಲಕನು ಸಡನ್ ಆಗಿ ರಸ್ತೆ ದಾಟಲು ಯತ್ನಿಸಿದ್ದಾನೆ. ಈ ವೇಳೆ ವೇಗದಲ್ಲಿ ಬಂದ ಮಹೀಂದ್ರಾ ಎಕ್ಸ್‌ಯುವಿ500 ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಅದು ಹೇಗೆ ಸಾಧ್ಯ ಅನ್ನುವುದಾದರೇ ಈ ವಿಡಿಯೋ ನೋಡಿ. ಎಬಿಎಸ್ ತಂತ್ರಜ್ಞಾನದ ಮಹತ್ವದ ನೀವು ಅರಿಯಬಹುದಾಗಿದೆ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಹೀಗಾಗಿ ಹೆದ್ದಾರಿಗಳಲ್ಲಿ ವಾಹನಗಳನ್ನು ಯು ಟರ್ನ್ ತೆಗೆದುಕೊಳ್ಳುವಾಗ ಮತ್ತು ಹೆದ್ದಾರಿಗಳು ದಾಟುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕಲ್ಲದೇ ಘಾಟಿ ಪ್ರದೇಶಗಳಲ್ಲಿ ರಸ್ತೆ ತಿರುವುಗಳಲ್ಲಿ ಯಾವುದೇ ಕಾರಣಕ್ಕೂ ವಾಹನಗಳ ನಿಲ್ಲಿಸುವ ದುಸ್ಸಾಹ ಮಾಡಬೇಡಿ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಇಂತಹ ಹತ್ತಾರು ಕಾರಣಗಳಿಂದಾಗಿಯೇ ಕೇಂದ್ರ ಸರ್ಕಾರವು ಏಪ್ರಿಲ್ 1ರಿಂದ ಎಬಿಎಸ್ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ಮಾರ್ಗಸೂಚಿ ಹೊರಡಿಸಲು ಸಿದ್ದಗೊಳ್ಳುತ್ತಿದ್ದು, ಒಂದು ವೇಳೆ ಪ್ರತಿಯೊಂದು ವಾಹನಗಳು ಸಹ ಎಬಿಎಸ್ ಪಡೆದುಕೊಂಡಲ್ಲಿ ಆಗಾಬಹುದಾದ ನೂರಾರು ದುರಂತಗಳಿಗೆ ಬ್ರೇಕ್ ಬಿಳಲಿದೆ ಎನ್ನಬಹುದು.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಹಾಗಾದ್ರೆ ಎಬಿಎಸ್‌ನಿಂದ ಏನು ಲಾಭ?

ಹೌದು. ಇದು ಪ್ರತಿಯೊಬ್ಬರ ಮನಸ್ಸಿನಲ್ಲೂ ಮೂಡಬಹುದಾದ ಸಹಜ ಪ್ರಶ್ನೆ. ಒಂದು ವೇಳೆ ನಿಮ್ಮ ಬೈಕ್‌ ಮತ್ತು ಕಾರುಗಳಲ್ಲಿ ಎಬಿಎಸ್ ತಂತ್ರಜ್ಞಾನ ಅಳವಡಿಕೆ ಇದ್ದಲ್ಲಿ ಅಪಘಾತಗಳ ತೀವ್ರತೆಯನ್ನು ತಡೆಯಬಹುದಾಗಿದ್ದು, ಜೊತೆಗೆ ಕೆಲವೇ ಸೇಕೆಂಡುಗಳಲ್ಲಿ ಬ್ರೇಕಿಂಗ್ ವ್ಯವಸ್ಥೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಬಹುದಾಗಿದೆ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಉದಾಹರಣೆ, ನೀವು ಎಬಿಎಸ್ ಇಲ್ಲದ ಒಂದು ಬೈಕ್ ಅಥವಾ ಕಾರಿನ ಚಾಲನೆ ಮಾಡುತ್ತಿದ್ದೀರಿ ಎಂದುಕೊಳ್ಳಿ. ಆಗ ಹಠಾತ್ ಆಗಿ ನಿಮ್ಮ ವಾಹನಕ್ಕೆ ಬೇರೆ ಯಾವುದೋ ವಾಹನವೋ ಇಲ್ಲವೇ ಯಾರಾದ್ರು ರಸ್ತೆ ದಾಟುವವರು ಸಡನ್ ಆಗಿ ಅಡ್ಡಬಂದಲ್ಲಿ ಬಹುತೇಕ ವಾಹನ ಸವಾರರು ಪೂರ್ಣ ಪ್ರಮಾಣದಲ್ಲಿ ಬ್ರೇಕ್ ಒತ್ತಲು ಪ್ರಯತ್ನ ಪಡುವುದು ಕಾಮನ್.

MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಈ ವೇಳೆ ಬ್ರೇಕ್ ಅನ್ನು ಪೂರ್ಣ ಪ್ರಮಾಣದ ಅದುಮಿದಾಗ ಕಾರಿನ ಸ್ಟೀರಿಂಗ್ ಅಥವಾ ಬೈಕಿನ ಹ್ಯಾಂಡಲ್ ಲಾಕ್ ಆಗಿ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇದ್ದು, ಇದು ಚಾಲಕರಿಗೆ ಅಪಘಾತವನ್ನು ತಪ್ಪಿಸುವ ಯಾವುದೇ ಅವಕಾಶವಿರುವುದಿಲ್ಲ. ಆದ್ರೆ ಇಂತಹ ಅವಘಡ ಸಾಧ್ಯತೆಗಳನ್ನು ತಪ್ಪಿಸುವ ಹಾಗೂ ಬ್ರೇಕಿಂಗ್ ಅಂತರವನ್ನು ಸಾಕಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಎಬಿಎಸ್ ಸಾಕಷ್ಟು ಸಹಕಾರಿಯಾಗುತ್ತೆ.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಇದರಿಂದಾಗಿ ಕೇಂದ್ರ ಸರ್ಕಾರವೇ ಎಬಿಎಸ್ ಅನ್ನು ಕಡ್ಡಾಯಗೊಳಿಸುವ ಮುನ್ನ ನಾವೇ ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯತೆಗಳಲ್ಲಿ ಒಂದಾಗಿದ್ದು, ಈ ನಿಟ್ಟಿನಲ್ಲಿ ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಪ್ರತಿ ವಾಹನಗಳಲ್ಲೂ ಸ್ವಯಂಪ್ರೇರಿತವಾಗಿ ಎಬಿಎಸ್ ಆಯ್ಕೆಯನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎನ್ನಬಹುದು.

ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಒಂದು ವೇಳೆ ನೀವು ಕೂಡಾ ನಿಮ್ಮ ವಾಹನದಲ್ಲಿ ಎಬಿಎಸ್ ಇಲ್ಲವಾದಲ್ಲಿ ಹೊಸ ಸುರಕ್ಷಾ ಸೌಲಭ್ಯವನ್ನು ಅಳವಡಿಸಿಕೊಳ್ಳುವುದು ಉತ್ತಮ ಎನ್ನುವುದು ನಮ್ಮ ಅಭಿಪ್ರಾಯ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ಹಂಚಿಕೊಳ್ಳಬಹುದು.

More from DriveSpark

Article Published On: Friday, March 1, 2019, 11:51 [IST]
English summary
Mahindra XUV500, Toyota Innova Lucky Escape From Horrific Accident: This Video Shows Importance Of ABS. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+