ಆಕರ್ಷಕ ಬೆಲೆಯ ಲಕ್ಷುರಿ ಸೆಡಾನ್ ಕಾರು ಖರೀದಿಸಿದ ಹಾಸ್ಯ ನಟ: ಕಾರಿನ ವಿಶೇಷತೆಗಳೇನು?

ದಿನಬೆಳಗಾದರೆ ಸಾಕು, ಯಾವುದಾದರೊಂದು ಸೆಲೆಬ್ರಿಟಿ ದುಬಾರಿ ಕಾರು, ಬೈಕ್‌ಗಳನ್ನು ಖರೀದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಅದರಲ್ಲೂ ತುಂಬಾ ಚಿಕ್ಕ ಬಂಡವಾಳದ ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆಯುತ್ತಿರುವಾಗ ಮಲಯಾಳಂನ ನಟರು ಹೊಸ ಐಷಾರಾಮಿ ಕಾರುಗಳನ್ನು ಖರೀದಿಸಿ ಸುದ್ದಿಯಾಗುತ್ತಿದ್ದಾರೆ.

ಇತ್ತೀಚೆಗೆ ಮಲಯಾಳಂ ಚಿತ್ರರಂಗದ 28ರ ಹರೆಯದ ನಟ ಶೇನ್ ರೂ.3 ಕೋಟಿಯ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 ಐಷಾರಾಮಿ ಕಾರನ್ನು ಖರೀದಿಸಿದರು. ಇನ್ನು ಹಾಸ್ಯ ನಟ ರಾಜೇಶ್ ಸ್ಕೋಡಾ ಕುಶಾಕ್ ಎಸ್‍ಯುವಿಯನ್ನು ಖರೀದಿಸಿದ್ದರು. ಇದೀಗ ಮಲಯಾಳಂ ಚಿತ್ರರಂಗದ ಮತ್ತೊಂದು ಹಾಸ್ಯ ನಟ ಹರೀಶ್ ಕನರನ್ (Hareesh Kanaran) ಹೊಸ ಸ್ಕೋಡಾ ಸ್ಲಾವಿಯಾ (Skoda Slavia) ಕಾರನ್ನು ಖರೀದಿಸಿದ್ದಾರೆ.

Actor Hareesh Kanaran

ಮಲಯಾಳಂನ ಮಳೆವಿಲ್ ಮನೋರಮೆಯ ಕೋಮಡಿ ಫೆಸ್ಟಿವಲಿಲ್ ಎಂಬ ಕಾರ್ಯಕ್ರಮದ ಮೂಲಕ ಹರೀಶ್ ಕನರನ್ ಜನರ ಗಮನ ಸೆಳೆದಿದ್ದಾರೆ. ನಂತರ ಹರೀಶ್ ಕನರನ್ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಸಿನಿರಸಿಕರ ಮನಗೆದಿದ್ದರು. ಇತ್ತೀಚೆಗೆ ನಟ ಹರೀಶ್ ಕನರನ್ ಖರೀದಿಸಿದ ಸ್ಕೋಡಾ ಸ್ಲಾವಿಯಾ ಕಾರಿನ ಬಗ್ಗೆ ಹೇಳುವುದಾದರೆ, ಜೆಕ್ ಕಾರು ತಯಾರಕರು 2.0 ಯೋಜನೆಯ ಅಡಿಯಲ್ಲಿ ಬಿಡುಗಡೆಗೊಳಿಸಿದ ಸ್ಕೋಡಾದ ಎರಡನೇ ಮಾದರಿ ಸ್ಲಾವಿಯಾ ಆಗಿದೆ.

ಈ ಹೊಸ ಸ್ಲಾವಿಯಾ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ನಷ್ಟು ಬೂಟ್‌‌ಸ್ಪೆಸ್ ಹೊಂದಿದೆ. ಈ ಸ್ಕೋಡಾ ಸ್ಲಾವಿಯಾ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದೆ.

Actor Hareesh Kanaran

ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ. ಈ ಸ್ಲಾವಿಯಾ ಕಾರಿನ ಒಳಭಾಗದಲ್ಲಿ ಆಕ್ಟಿವಿಯಾ ಸೆಡಾನ್ ಮಾದರಿಯನ್ನು ನೆನಪಿಸುತ್ತದೆ.

ಇದರಲ್ಲಿ 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಸೀಟುಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಇದರೊಂದಿಗೆ ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಗಳನ್ನು ಒಳಗೊಂಡಿದೆ.

ಈ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳನ್ನು ಹೊಂದಿವೆ.

ಸ್ಲಾವಿಯಾ ಕಾರಿನಲ್ಲಿ 1.0 ಲೀಟರ್ ಮಾದರಿಯು ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಈ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, May 19, 2024, 12:50 [IST]
English summary
Malayalam actor hareesh kanaran buys skoda slavia sedan details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+