ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್ ಹಿಟ್... ದುಬಾರಿ ಕಾರು ಖರೀದಿಸಿದ ನಟ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

ತುಂಬಾ ಚಿಕ್ಕ ಬಂಡವಾಳದ ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆಯುತ್ತಿದೆ. ಇತ್ತೀಚಿನ ಕೆಲವು ಮಲಯಾಳಂ ಸಿನಿಮಾಗಳು ನಿರೀಕ್ಷೆಯನ್ನೂ ಮೀರಿ ಲಾಭ ಮಾಡಿವೆ. ಕರ್ನಾಟಕದಲ್ಲೂ ಮಲಯಾಳಂ ಸಿನಿಮಾಗಳು ದೊಡ್ಡ ಕಲೆಕ್ಷನ್ ಮಾಡುತ್ತಿದೆ. ಈ ನಡುವೆ ಮಳೆಯಾಳಂ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಯುವ ನಟರಲ್ಲಿ ಒಬ್ಬರಾದ ಶೇನ್ ನಿಗಮ್ (Shane Nigam) ಐಷಾರಾಮಿ ಕಾರು ಖರೀದಿಸಿದ್ದಾರೆ.

ಮಲಯಾಳಂನ ನೀಲಾಕಾಶಂ ಪಚ್ಚಕದ ಆದಿ ಭೂಮಿ ಧಾರಾವಾಹಿ ಮೂಲಕ ಬೆಳ್ಳಿತೆರೆಗೆ ಬಂದ ನಟ ಶೇನ್. ನಂತರ ಕಿಸ್ಮತ್, ಪರವ, ಕುಂಬಳಂಗಿ ನೈಟ್ಸ್, ಇಷ್ಕ್ ಮತ್ತು ಭೂತಕಾಲಂ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆದರು. ಕಳೆದ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಮಲಯಾಳಂ ಚಲನಚಿತ್ರಗಳಲ್ಲಿ ಒಂದಾದ ಆರ್‌ಡಿಎಕ್ಸ್‌ನಲ್ಲಿ ಮುಖ್ಯ ಪಾತ್ರಗಳಲ್ಲಿ ಒಬ್ಬರಾದ ರಾಬರ್ಟ್ ಪಾತ್ರವನ್ನು ಶೇನ್ ನಿರ್ವಹಿಸಿದರು. ಕೈಯಲ್ಲಿ ಬೆರಳೆಣಿಕೆಯಷ್ಟು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಶೇನ್ ಕಾಲಿವುಡ್‌ಗೂ ಪಾದಾರ್ಪಣೆ ಮಾಡಲಿದ್ದಾರೆ.

Shane Nigam

ಮದ್ರಾಸ್ಕರನ್ ಎಂಬ ಆಕ್ಷನ್ ಚಿತ್ರದ ಮೂಲಕ ನಟ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ವಾಲಿ ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಕಲೈಯರಸನ್ ಮತ್ತು ನಿಹಾರಿಕಾ ಕೊನಿಡೇಲಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಇಂಡಸ್ಟ್ರಿಗೆ ಮಾತ್ರ ಸೀಮಿತವಾಗದೆ ವಿದೇಶಿ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿರುವ 28ರ ಹರೆಯದ ನಟ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 ಐಷಾರಾಮಿ ಕಾರನ್ನು ಖರೀದಿಸಿದ್ದಾರೆ.

ಲುಲು ಗ್ರೂಪ್ ಮಾಲೀಕ ಯೂಸಫಾಲಿ ಮತ್ತು ನಟ ಮಮ್ಮುಟ್ಟಿ ಈಗಾಗಲೇ ಜಿಎಲ್‌ಎಸ್ 600 ಎಸ್‌ಯುವಿಯನ್ನು ಹೊಂದಿದ್ದಾರೆ. ನಟ ತನ್ನ ಹೊಸ ಅತಿಥಿಯನ್ನು ಗ್ಯಾರೇಜ್‌ಗೆ ಕರೆತಂದಿರುವ ಮಾಹಿತಿಯನ್ನು ಮರ್ಸಿಡಿಸ್ ಕಾರು ಮಾರಾಟಗಾರರಾದ ಬ್ರಿಡ್ಜ್‌ವೇ ಮೋಟಾರ್ಸ್ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ. ಮರ್ಸಿಡಿಸ್-ಮೇಬ್ಯಾಕ್ GLS 600 (Mercedes-Maybach GLS600) ಇತ್ತೀಚೆಗೆ ಸಿನಿಮಾ ನಟ-ನಟಿಯರಿಗೂ ಅತ್ಯಂತ ಜನಪ್ರಿಯ ಆಯ್ಕೆಯಾಗಿದೆ.

Shane Nigam

ಈ ಐಷಾರಾಮಿ ಮರ್ಸಿಡಿಸ್ ಕಾರನ್ನು ನೀತು ಕಪೂರ್, ಕೃತಿ ಸನೋನ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಸಿಂಗ್ ಅವರಂತಹ ನಟರು ಸಹ GLS60 ಅನ್ನು ಹೊಂದಿದ್ದಾರೆ. ಈ ಮರ್ಸಿಡಿಸ್-ಮೇಬ್ಯಾಕ್ GLS 600 ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.96 ಕೋಟಿಯಾಗಿದ್ದು, ಇನ್ನು ಆನ್-ರೋಡ್ ಬೆಲೆಯು ರೂ.3.37 ಕೋಟಿಯಾಗಿದೆ. ಗ್ರಾಹಕರ ಬೇಡಿಕೆಯೆಂತೆ 4 ಸೀಟರ್ ಅಥವಾ 5 ಸೀಟರ್ ಮಾದರಿಯೊಂದಿಗೆ ಖರೀದಿ ಮಾಡಬಹುದಾಗಿದೆ.

ಇದು ಸುಧಾರಿತ ತಂತ್ರಜ್ಞಾನ ಮತ್ತು ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿದೆ. ಈ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ. ಈ ಕಾರಿನಲ್ಲಿ ಬಳಸಲಾಗಿರುವ ಲೆದರ್ ಕೂಡಾ ಮೇಬ್ಯಾಕ್ ಎಕ್ಸ್‌ಕ್ಲೂಸಿವ್ ನಪ್ಪಾ ಲೆದರ್ ಮಾದರಿಯಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಕೇವಲ ನಾಲ್ಕು ಆಸನಗಳ ಸೌಲಭ್ಯವಿದೆ. ವಿಸ್ತರಿತವಾಗಿ ಸೆಂಟರ್ ಕನ್ಸೊಲ್ ಹಿಂಬದಿಯ ಸವಾರಿಗೆ ಹೆಚ್ಚಿನ ಮಟ್ಟದ ಸವಾರಿ ಅನುಭವ ನೀಡಲು ಇದನ್ನು ಅಭಿವೃದ್ದಿಗೊಳಿಸಲಾಗಿದೆ.

Shane Nigam

ಇದರೊಂದಿಗೆ ಹೊಸ ಕಾರಿನಲ್ಲಿ ಅಡಾಪ್ಟಿವ್ ಡಿಜಿಟಲ್ ಎಲ್ಇಡಿ ಹೆಡ್‌ಲೈಟ್ಸ್, ಹಿಂತೆಗೆದುಕೊಳ್ಳಬಹುದಾದ ಡೋರ್ ಹ್ಯಾಂಡಲ್‌, ಫಿಂಗರ್‌ಪ್ರಿಂಟ್ ರೀಡರ್ ಮತ್ತು ಪನೋರಮಿಕ್ ಸನ್‌ರೂಫ್ ಹೊಂದಿದೆ. ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ.

ಈ Mercedes Maybach GLS600 ಕಾರಿ ಹಿಂಭಾಗದಲ್ಲಿ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದೆ. ಈ ಐಷಾರಾಮಿ ಎಸ್‍ಯುವಿಯಲ್ಲಿ 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9 ಜಿ-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 542 ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದೆ.

Shane Nigam

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, May 19, 2024, 10:00 [IST]
English summary
Malayalam actor shane nigam buys new mercedes maybach gls details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+