5-ಸೀಟರ್.. 27 Km ಮೈಲೇಜ್.. 11 ಲಕ್ಷ ಬೆಲೆಯ ಹೊಸ ಟೊಯೊಟಾ ಕಾರನ್ನು ಇಷ್ಟಪಟ್ಟು ಖರೀದಿಸಿದ ಜನಪ್ರಿಯ ನಟಿ!
ಸ್ನೇಹಾ ಶ್ರೀಕುಮಾರ್ (Sneha Sreekumar) ಜನಪ್ರಿಯ ನಟಿಯಾಗಿದ್ದಾರೆ. ಮಲಯಾಳಂ (Malayalam) ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದು, ನೃತ್ಯ ಕಲಾವಿದೆಯಾಗಿಯೂ ಅವರು ಖ್ಯಾತಿಗಳಿಸಿದ್ದಾರೆ. ಮೋಹಿನಿಯಾಟ್ಟಂ, ಕೂಚಿಪುಡಿ, ಕಥಕ್ಕಳಿ ಮತ್ತು ಭರತನಾಟ್ಯದಂತಹ ನೃತ್ಯ ಪ್ರಕಾರಗಳಲ್ಲಿ ಹೆಚ್ಚಿನ ಪರಿಣತಿ ಪಡೆದಿದ್ದಾರೆ. ಇತ್ತೀಚೆಗೆ, ನಟಿ ಸ್ನೇಹಾ ಶ್ರೀಕುಮಾರ್ ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder) ಎಸ್‌ಯುವಿಯನ್ನು ಖರೀದಿಸಿದ್ದಾರೆ.
ಈ ಕುರಿತಂತೆ ಸ್ವತಃ ನಟಿಯೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನೂತನ ಕಾರನ್ನು ವಿತರಣೆ ಪಡೆಯುತ್ತಿರುವ ವಿಡಿಯೋ ಹಂಚಿಕೊಂಡಿದ್ದು, 70 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದಾಗ್ಯೂ ನಟಿ ಸ್ನೇಹಾ ಶ್ರೀಕುಮಾರ್, ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಚಾಲಿತ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಕಾರಿನ ಯಾವ ರೂಪಾಂತರವನ್ನು (ವೇರಿಯೆಂಟ್) ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ರೂ.11.14 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಸ್, ಸಿ, ವಿ ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲಾಕ್, ಕೇವ್ ಬ್ಲ್ಯಾಕ್ ಮತ್ತು ಸ್ಪೀಡಿ ಬ್ಲೂ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಅರ್ಬನ್ ಕ್ರೂಸರ್ ಹೈರಿಡರ್ ಕಾರು, 1.5-ಲೀಟರ್ ಪೆಟ್ರೋಲ್ (ನಿಯೋ ಡ್ರೈವ್), ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, 2ಡಬ್ಲ್ಯೂಡಿ (ಟೂ ವೀಲ್ ಡ್ರೈವ್) ಹಾಗೂ ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 373 ಲೀಟರ್‌ನ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಹೊಚ್ಚ ಹೊಸ ಅರ್ಬನ್ ಕ್ರೂಸರ್ ಹೈರಿಡರ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯುನಿಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು. ಹೆಡ್ಸ್-ಅಪ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್‌ನ್ನು ಪಡೆದಿದೆ.
ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ .6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications