ರಣಬೇಟೆಗಾರ ಮಾರುತಿ ಜಿಮ್ನಿ ಖರೀದಿಸಿದ ಜನಪ್ರಿಯ ನಟಿ: ಈ ಎಸ್‍ಯುವಿಗೆ ಸೆಲೆಬ್ರಿಟಿಗಳು ಕೂಡ ಫಿದಾ

ಕಾರುಗಳ ಬಗ್ಗೆ ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಸಿನಿಮಾ ಸೆಲಬ್ರಿಟಿಗಳಿಗೆ ಮತ್ತು ಕ್ರಿಕೆಟಿಗರಿಗೆ ಈ ಕ್ರೇಜ್ ಸ್ವಲ್ಪ ಹೆಚ್ಚು ಇರುತ್ತದೆ. ಸಿನಿಮಾ ನಟಿಯರಿಗೂ ಕಾರುಗಳ ಮೇಲೆ ಕ್ರೇಜ್ ಇರುತ್ತದೆ. ಮಲಯಾಳಂ ಚಿತ್ರರಂಗದ ನಟಿ ಮಮಿತಾ ಬೈಜು (Mamitha Baiju) ಅವರಿಗೆ ಕೂಡ ಕಾರುಗಳ ಬಗ್ಗೆ ಹೆಚ್ಚು ಕ್ರೇಜ್ ಹೊಂದಿದ್ದಾರೆ.

ನಟಿ ಮಮಿತಾ ಬೈಜು ಮಾರುತಿ ಜಿಮ್ನಿ (Maruti Jimny) ಎಸ್‍ಯುವಿಯನ್ನು ಖರೀದಿಸಿದ್ದಾರೆ. ಈ ಜಿಮ್ನಿಯುಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಇದೀಗ ಜನಪ್ರಿಯ ಜಿಮ್ನಿ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲೂ ಕೂಡ ಬಾರೀ ಬೇಡಿಕೆಯೊಂದಿಗೆ ಹೊಸ ಕ್ರಾಂತಿ ಮಾಡುತ್ತಿದೆ. ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದ ಜಿಮ್ನಿ ಕೂಡ ಗ್ರಾಹಕರ ಮನ ಗೆದ್ದಿದೆ.

Maruti Jimny

ಇದೀಗ ಈ ಜನಪ್ರಿಯ ಮಾರುತಿ ಸುಜುಕಿ ಜಿಮ್ನಿ ಸೆಲೆಬ್ರಿಟಿಗಳ ಗಮನ ಸೆಳೆಯುತ್ತಿದೆ. ಮಲಯಾಳಂ ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಮಮಿತಾ ಬೈಜು. ಸಿನಿಮಾ, ನಟನೆ, ನೃತ್ಯದ ಹೊರತಾಗಿ ಈ ತಾರೆಗೆ ಡ್ರೈವಿಂಗ್ ಕೂಡ ಇಷ್ಟ. ಸೂಪರ್ ಶರಣ್ಯ ಮತ್ತು ಪ್ರಣಯ ವಿಲಾಸಂ ನಂತಹ ಸೂಪರ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿಯ ಬಳಿ ಫೋಕ್ಸ್‌ವ್ಯಾಗನ್ ಟೈಗನ್ ಕಾರನ್ನು ಹೊಂದಿದ್ದಾರೆ. ಈ ಕಾರಿನಲ್ಲಿ ಏಕಾಂಗಿಯಾಗಿ ಡ್ರೈವ್ ಮಾಡುವುದು ಆಗಾಗ್ಗೆ ಕಾಣಿಸಿಕೊಳ್ಳುತಾರೆ.

ನಟ ಕಳೆದ ಮೇ ತಿಂಗಳಲ್ಲಿ ಫೋಕ್ಸ್‌ವ್ಯಾಗನ್ ಟೈಕೂನ್ ಅನ್ನು ಖರೀದಿಸಿದ್ದರು. ಇದೀಗ ಜನಪ್ರಿಯ ಆಫ್ ರೋಡ್ ಮಾರುತಿ ಜಿಮ್ನಿ ಎಸ್‍ಯುವಿಯನ್ನು ಖರೀದಿಸಿದ್ದಾರೆ. ನಟಿ ಮಾರುತಿ ಜಿಮ್ನಿ ಎಸ್‍ಯುವಿ ಯಾವ ರೂಪಂತರವನ್ನು ಖರೀದಿಸಿದ್ದಾರೆ ಎಂಬುವುದರ ಬಗ್ಗೆ ಮಾಹಿತಿ ಇಲ್ಲ. ನಟಿ ಮಮಿತಾ ಬೈಜು ಅವರು ಕೈನೆಟಿಕ್ ಯೆಲ್ಲೋ ಮಾದರ್ರಿಯನ್ನು ಖರೀದಿಸಿದ್ದಾರೆ. ಮಾರುತಿ ಜಿಮ್ನಿಯ ಬೆಲೆಯು ಎಕ್ಸ್ ಶೋ ರೂಂ ಪ್ರಕಾರ ರೂ.12.74 ಲಕ್ಷದಿಂದ ಪ್ರಾರಂಭವಾಗುತ್ತದೆ.

Maruti Jimny

ಜಿಮ್ನಿ ಪ್ರಸ್ತುತ ಭಾರತದಲ್ಲಿ ಬಿಡುಗಡೆಯಾದ ಅತ್ಯಂತ ಬೇಡಿಕೆಯಲ್ಲಿರುವ ಆಫ್-ರೋಡ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಇದು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ. ಜಿಮ್ನಿ ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ, ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ. ಅದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ.

ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಅದಕ್ಕಾಗಿಯೇ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ.ಹೊಸ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ. ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ.

ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದ್ದು, ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‍ಯುವಿಯ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಈ ಎಂಜಿನ್ 6000 rpm ನಲ್ಲಿ 104.8 ಪಿಎಸ್ ಗರಿಷ್ಠ ಪವರ್ ಹಾಗೂ 4000 rpm ನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಮಾರುತಿ ಸುಜುಕಿ ಪ್ರಕಾರ, ಬ್ರ್ಯಾಂಡ್‌ನ ಪ್ರಯತ್ನಿಸಿದ ಮತ್ತು ಪರೀಕ್ಷಿಸಿದ K15B 1.5-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನಿಂದ ನಡೆಸಲ್ಪಡುವ ಐದು-ಡೋರಿನ ಜಿಮ್ನಿ, ಐದು-ವೇಗದ ಮ್ಯಾನುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ 16.94 kmpl ಮೈಲೇಜ್ ನೀಡುತ್ತದೆ.

ಇದಲ್ಲದೆ, ನಾಲ್ಕು-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮಾದರಿಯು 16.39 kmpl ಮೈಲೇಜ್ ಅನ್ನು ಒದಗಿಸುತ್ತದೆ. ಈ ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ.

More from DriveSpark

Article Published On: Sunday, September 10, 2023, 13:00 [IST]
English summary
Mamitha baiju buys new maruti jimny off road suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+