ಹೀರೋಯಿಸಂ ತೋರಲು ಮಾರುತಿ ಕಾರ್ ಮೇಲೆ ಮಲಗಿ ಸಾಹಸ ಪ್ರದರ್ಶನ: ಬಿತ್ತು ಭಾರೀ ದಂಡ

ಜನರು ವಾಹನಗಳನ್ನು ಕೇವಲ ಪ್ರಯಾಣಕ್ಕೆ ಮಾತ್ರ ಬಳಸದೇ, ಕೆಲವು ಜನರು ಅದರಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುತ್ತಾರೆ. ಕೆಲವರು ಅಪಾಯಕಾರಿ ಸಾಹಸಗಳನ್ನು ಮಾಡಿ ಅಪಘಾತಗಳು ಸಂಭವಿಸಿದ ಅನೇಕ ಘಟನೆಗಳು ಆಗಾಗ್ಗೆ ನೋಡುತ್ತೇವೆ. ಇನ್ನು ಕಾನೂನು ಉಲ್ಲಂಘಿಸಿ ಅಪಾಯಕಾರಿ ಸಾಹಸಗಳನ್ನು ಮಾಡುವರಿಗೆ ಪೊಲೀಸರು ದಂಡ ವಿಧಿಸಿದ ಘಟನೆಗಳು ಆಗಾಗ್ಗೆ ವರದಿಯಾಗುತ್ತದೆ.

ವಾಹನಗಳಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವಾಗ ಕೇವಲ ತಮ್ಮ ಜೀವನವನ್ನು ಅಪಾಯಕ್ಕೆ ಸಿಲುಕಿಸುವುದಲ್ಲದೇ, ಇತರರಿಗೂ ತೊಂದರೆಯಾಗುತ್ತದೆ. ಇದೇ ರೀತಿ ಚಲಿಸುತ್ತಿರುವ ಕಾರಿನ ರೂಫ್ ಮೇಲೆ ಮಲಗಿ ಸಾಹಸ ಪ್ರದರ್ಶಿಸುವ ವೀಡಿಯೊಂದು ಭಾರೀ ವೈರಲ್ ಆಗಿದೆ. ಈ ಘಟನೆಯು ನೋಯ್ಡಾದಲ್ಲಿ ನಡೆದಿದೆ. ಈ ವೀಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರು ಈ ಹುಚ್ಚು ಸಾಹಸಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Car

ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಲಾದ ವೀಡಿಯೊವು ದೆಹಲಿ ನಂಬರ್ ಪ್ಲೇಟ್ ಅನ್ನು ಹೊಂದಿರುವ ಚಲಿಸುವ ಬಿಳಿ ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಕಾರಿನ ರೂಫ್ ಮೇಲೆ ಮಲಗಿರುವ ವ್ಯಕ್ತಿಯನ್ನು ಕಾಣಬಹುದು. ಕಾರು (car) ಜನದಟ್ಟಣೆಯ ರಸ್ತೆಯ ಮೂಲಕ ಚಲಿಸುತ್ತಿರುವುದು ಕಂಡುಬರುತ್ತದೆ. ಮಾರುತಿ ಸ್ವಿಫ್ಟ್ ಡ್ರೈವರ್ ಸಾಕಾಷ್ಟು ವೇಗವಾಗಿ ಇತರ ವಾಹನಗಳನ್ನು ಓವರ್ ಟೇಕ್ ಮಾಡಿ ಅಪಾಯಕಾರಿಯಾಗಿ ಮುನ್ನುಗುತ್ತಿರುವುದು ವೀಡಿಯೊದಲ್ಲಿ ನೋಡಬಹುದು.

ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆದ ಬಳಿಕ, ನೋಯ್ಡಾ ಪೊಲೀಸರು ಬುಧವಾರ ಈ ವ್ಯಕ್ತಿ ಸಾಹಸ ಪ್ರದರ್ಶಿಸುತ್ತಿದ್ದ ಮಾರು ಸ್ವಿಫ್ಟ್ ಕಾರಿನ ಮಾಲೀಕರಿಗೆ ರೂ.26,000 ದಂಡವನ್ನು ವಿಧಿಸಿದ್ದಾರೆ ಎಂದು ವರದಿಯಾಗಿದೆ. ನಗರದ ಅತ್ಯಂತ ಜನನಿಬಿಡ ವಲಯಗಳಲ್ಲಿ ಒಂದಾದ ನೋಯ್ಡಾದ ಸೆಕ್ಟರ್ 18 ಪ್ರದೇಶದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Car

ಈ ವೀಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರುವುದರಿಂದ ಪೊಲೀಸ್ ಇಲಾಖೆಗೆ ಕ್ರಮ ಕೈಗೊಳ್ಳುವಂತೆ ಕಾಮೆಂಟ್ ಮಾಡಿದ್ದರು. ಬಳಿಕ ನೋಯ್ಡಾ ಪೊಲೀಸರು ನಿರ್ದಿಷ್ಟ ವಾಹನದ ಮಾಲೀಕರಿಗೆ ರೂ.26,000 ಇ-ಚಲನ್ ವಿಧಿಸುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ನಿಯಮಾನುಸಾರ ಇ-ಚಲನ್ (ದಂಡ ರೂ. 26000/-) ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಸಂಬಂಧಪಟ್ಟ ವಾಹನದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದಿರುವುದು ಇದೊಂದೇ ಅಲ್ಲ. ಕಳೆದ ವಾರ ಇದೇ ರೀತಿಯ ಘಟನೆಯಲ್ಲಿ, ಇಬ್ಬರು ಯುವಕರು ಚಲಿಸುತ್ತಿರುವ ವಾಹನದ ಮೇಲೆ ಹತ್ತುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆದ ನಂತರ ನೋಯ್ಡಾ ಪೊಲೀಸರು ಕಾರು ಮಾಲೀಕರ ವಿರುದ್ಧ ರೂ.23,500 ದಂಡವನ್ನು ವಿಧಿಸಿದರು. ಹಲವು ಕಡೆಗಳಿಗೆ ಇಂತ ಅಪಾಯಕಾರಿ ಸಾಹಸಗಳನ್ನು ಮಾಡಿದವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಹೇಳುವುದಾದರೆ, ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸುಜುಕಿ ಸ್ವಿಫ್ಟ್ ಕಳೆದ 15 ವರ್ಷಕ್ಕೂ ಹೆಚ್ಚು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ. ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯು ಕೂಡ ಸುಜುಕಿ ಸ್ವಿಫ್ಟ್ ಕಾರು ಉತ್ತಮವಾಗಿ ಮಾರಾಟವಾಗುತ್ತಿದೆ.

ಪ್ರಸ್ತುತ ತಲೆಮಾರಿನ ಸುಜುಕಿ ಸ್ವಿಫ್ಟ್ ಕಾರನ್ನು ಸುಜುಕಿ ಕಂಪನಿಯು 2017 ರಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನು 2018 ರಲ್ಲಿ ಆರಂಭದಲ್ಲಿ ಇದನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಮಾರುತಿ ಸ್ವಿಫ್ಟ್ ಕಾರಿನಲ್ಲಿ 1.2 ಎಲ್ ಡ್ಯುಯಲ್‌ಜೆಟ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Article Published On: Friday, August 18, 2023, 16:36 [IST]
English summary
Man lying on maruti swift car roof in noida fine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+