ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೆಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಈ ನಡುವೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ವಿಭಿನ್ನ ಘಟನೆಯೊಂದು ನಡೆದಿದೆ. ಅಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ವಿಜೇತರಿಗೆ 5 ಲೀಟರ್ ಪೆಟ್ರೋಲ್ ನೀಡಲಾಯಿತು. ಈ ಪಂದ್ಯ ಕಳೆದ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಈ ಪಂದ್ಯದಲ್ಲಿ ಸಲಾಹುದ್ದೀನ್ ಅಬ್ಬಾಸಿ ಎಂಬುವವರು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಅವರಿಗೆ 5 ಲೀಟರ್ ಪೆಟ್ರೋಲ್ ನೀಡಲಾಗಿದೆ. ಭಾರತದಲ್ಲಿ ಇಂಧನ ಬೆಲೆಗಳು ಏರಿಕೆಯಾಗುತ್ತಿರುವುದನ್ನು ಎತ್ತಿ ತೋರಿಸುವ ಸಲುವಾಗಿ ಹಾಗೂ ಬೆಲೆಗಳ ಏರಿಕೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಭಾರತದಲ್ಲಿ ಈ ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಸಂಬಂಧಿಕರು ಹಾಗೂ ಸ್ನೇಹಿತರು ಮದುವೆ ಸಮಾರಂಭಗಳಲ್ಲಿ ನವವಿವಾಹಿತರಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಕೇಕ್ ಖರೀದಿಸಿದರೆ ಪೆಟ್ರೋಲ್ ಉಚಿತ ಎಂದು ಬೇಕರಿಗಳ ಮುಂದೆ ಬೋರ್ಡ್ ಹಾಕಿರುವ ಘಟನೆಗಳೂ ನಡೆದಿವೆ. ಇಂತಹ ಘಟನೆಗಳು ನೋಡಲು ತಮಾಷೆಯಾಗಿ ಕಂಡರೂ ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಯಿಂದಾಗಿ ವಾಹನ ಸವಾರರು ತತ್ತರಿಸುತ್ತಿರುವುದು ಸುಳ್ಳಲ್ಲ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಏರುತ್ತಿರುವ ಇಂಧನ ಬೆಲೆಗಳು ಪ್ರಮುಖ ಕಾರಣಗಳಾಗಿವೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿರುವ ಕಾರಣಕ್ಕೆ ಜನರು ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ.

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಎಲೆಕ್ಟ್ರಿಕ್ ವಾಹನಗಳು ಪರ್ಯಾಯವಾದರೂ ಸಹ ಇವುಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ವಿವಿಧ ಕೊಡುಗೆಗಳನ್ನು ನೀಡುತ್ತಿವೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ತಕ್ಷಣವೇ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಸಾಧ್ಯವಾಗದವರು ಅಸ್ತಿತ್ವದಲ್ಲಿರುವ ವಾಹನದ ಮೈಲೇಜ್ ಹೆಚ್ಚಿಸುವ ಪ್ರಯತ್ನಗಳಲ್ಲಿ ತೊಡಗಿದ್ದಾರೆ. ಇದರಿಂದಾಗಿ ಕೆಲವು ನಗರಗಳಲ್ಲಿರುವ ಗ್ಯಾರೇಜ್'ಗಳು ಹೆಚ್ಚು ಕಾರ್ಯನಿರತವಾಗಿವೆ ಎಂದು ವರದಿಯಾಗಿದೆ. ಇದರ ಜೊತೆಗೆ ಹೆಚ್ಚು ಮೈಲೇಜ್ ನೀಡುವ ಬೈಕ್‌ಗಳ ಮಾರಾಟವೂ ಹೆಚ್ಚುತ್ತಿದೆ.

ಬಹುಮಾನವಾಗಿ ಐದು ಲೀಟರ್ ಪೆಟ್ರೋಲ್ ಪಡೆದ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತ

ಇತ್ತೀಚಿಗೆ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಚಳಿಗಾಲದ ಕೊನೆಗೆ ಇಂಧನ ಬೆಲೆ ಸ್ವಲ್ಪ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ. 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಗಳು ಇಳಿಕೆಯಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Man of the match receives 5 liter petrol as prize. Read in Kannada.
Story first published: Thursday, March 4, 2021, 20:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X