ಇನ್ಸ್ಟಾಗ್ರಾಂ ರೀಲ್ಸ್‌ಗಾಗಿ ಬಂಕ್‌ನಲ್ಲಿಯೇ ಡೀಸೆಲ್ ಚೆಲ್ಲಿದ ಯುವಕ: ಯುವಕ ಹುಚ್ಚಾಟಕ್ಕೆ ಪೊಲೀಸರು ಮಾಡಿದ್ದೇನು?
ಭಾರತದಲ್ಲಿ ಇತ್ತೀಚೆಗೆ ಇನ್ಸ್ಟಾಗ್ರಾಂ ಶೋಕಿ ವಿಪರೀತವಾಗಿ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಸಹ ಒಂದಿಲ್ಲೊಂದು ರೀತಿಯಲ್ಲಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡುತ್ತಾ ಆ ಮೂಲಕವಾಗಿ ವ್ಯೂವ್ಸ್ ಮತ್ತು ಲೈಕ್ಸ್ ಪಡೆದುಕೊಂಡು ವೈರಲ್ ಆಗಲು ಪ್ರಯತ್ನಿಸುತ್ತಲೇ ಇರುತ್ತಾರೆ. ಇಂತಹ ಸಂಧರ್ಭದಲ್ಲಿ ವರಿಗೆ ಅವರಿವಿಲ್ಲದಂತೆಯೇ ಅವರನ್ನು ಮತ್ತು ಇತರರನ್ನು ಅಪಾಯಕ್ಕೆ ಎಳೆಯುವ ಸಾಧ್ಯತೆಗಳು ಸಾಕಷ್ಟಿರುತ್ತವೆ. ಇದೇ ರೀತಿಯ ಘಟನೆಯೊಂದು ಇಲ್ಲೊಂದು ಕಡೆ ಸಂಭವಿಸಿದ್ದು, ಇದೀಗ ಈತ ಪೊಲೀಸರ ಅತಿಥಿಯಾಗಿದ್ದಾನೆ. ಹಾಗಾದರೆ ನಾವಿಂದು ಆ ಘಟನೆಯ ಕುರಿತಾಗಿ ನೋಡೋಣ ಬನ್ನಿ.
ರಾಜಸ್ಥಾನದಲ್ಲೊಂದು ಕಡೆ ವ್ಯಕ್ತಿಯೊಬ್ಬ ತಾನೇ ತನ್ನ ಮಹೀಂದ್ರಾ ಸ್ಕಾರ್ಪಿಯೊ ಎನ್ (Mahindra Scorpio N) ಕಾರಿಗೆ ಡೀಸೆಲ್ ಹಾಕುತ್ತಾ ಇರುವುದನ್ನು ವಿಡಿಯೋ ಮಾಡಿ ಹರಿ ಬಿಟ್ಟಿದ್ದಾನೆ. ಆದರೆ ಈ ವಿಡಿಯೋದಲ್ಲಿ ನಾವೆಲ್ಲರೂ ಗಮನಿಸಬೇಕಾದ ಅಂಶವೇನೆಂದರೆ ಈ ಕಾರಿನ ಡೀಸೆಲ್ ಟ್ಯಾಂಕ್ ಫುಲ್ ಆಗಿ ಹೊರ ಬರುತ್ತಿದ್ದರೂ ಆತ ಅದನ್ನು ಆಫ್ ಮಾಡದೇ ಶೋಕಿ ಮಾಡುತ್ತಾ ವಿಡಿಯೋ ಮಾಡಿದ್ದಾನೆ.

ಈ ವಿಡಿಯೋವನ್ನು ನಿಶಾಂತ್ ಶರ್ಮಾ ತಮ್ಮ ಎಕ್ಸ್ ಪ್ರೊಫೈಲ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ, ನಾವು ಮಹೀಂದ್ರ ಸ್ಕಾರ್ಪಿಯೊ-ಎನ್ ಎಸ್ಯುವಿಯನ್ನು ಇಂಧನ ಪಂಪ್‌ನಲ್ಲಿ ನೋಡುತ್ತೇವೆ. ಚಾಲಕ, ಬಹುಶಃ SUV ಯ ಮಾಲೀಕರಾಗಿರಬಹುದು, ಇಂಧನ ವಿತರಕದೊಂದಿಗೆ SUV ಪಕ್ಕದಲ್ಲಿ ನಿಂತಿರುವಂತೆ ಕಂಡು ಬರುತ್ತದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಿದ ಕೂಡಲೇ ಪೊಲೀಸರು ಈತನ ಮೇಲೆ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಪೆಟ್ರೋಲ್ ಬಂಕ್‌ನಂತಹ ಜಾಗದಲ್ಲಿ ಈ ರೀತಿಯಾದ ಅಪಾಯಕಾರಿ ಕೆಲಸ ಮಾಡಿದ್ದಕ್ಕಾಗಿ ಆತನ ಮೇಲೆ ಕ್ರಮ ಕೈಗೊಂಡಿದ್ದು ಮಾತ್ರವಲ್ಲದೇ, ಆ ವಾಹನವನ್ನೂ ಸೀಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಭಂಧಿಸಿದ ಮಹೀದ್ರಾ ಸ್ಕಾರ್ಪಿಯೋ ಎನ್ ಬಗ್ಗೆ ನೋಡುವುದಾದರೆ, ಇದು ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 bhp ಗರಿಷ್ಠ ಪವರ್ ಹಾಗೂ 380 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 ಸ್ವೀಡ್ ಆಟೋಮೆಟಿಕ್ ಅಥವಾ 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ.
ಮಹೀಂದ್ರಾ ಸ್ಕಾರ್ಪಿಯೋ ಎನ್ ಯಾವೆಲ್ಲ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ನೋಡುವುದಾದರೆ, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸೆಮಿ ಡಿಜಿಟಲ್ ಇನ್ಸ್ರುಮೆಂಟಲ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಭಾರತದ ಗ್ರಾಹಕರನ್ನು ತನ್ನತ್ತ ಆಕರ್ಷಿಸುವ ಭರಪೂರ ವೈಶಿಷ್ಟ್ಯಗಳನ್ನು ಹೊಂದಿದೆ.

ಇನ್ನು 2022 ರಲ್ಲಿ ಸ್ಕಾರ್ಪಿಯೋ ಎನ್ (Mahindra Scorpio N) ಅನ್ನು ಮಾರುಕಟ್ಟೆಗೆ ತಂದಾಗ ಜನರಿಂದ ಭಾರೀ ಸ್ಪಂದನೆ ದೊರಕಿತ್ತು. ಈ ಮೂಲಕ ಭಾರತೀಯ ಎಸ್‌ಯುವಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಭಾರೀ ಅಲೆಯನ್ನು ಎಬ್ಬಿಸಿದೆ. ಸದ್ಯ ಭಾರತದಲ್ಲಿ ಸ್ಕಾರ್ಪಿಯೋ ಎನ್ ಮತ್ತು ಸ್ಕಾರ್ಪಿಯೋ ಕ್ಲಾಸಿಕ್ ಮಾಡೆಲ್‌ಗಳು ಮಾರಾಟಕ್ಕೆ ಲಭ್ಯವಿದೆ.
ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿ, ಬಿಡುಗಡೆಯಾದಾಗಿನಿಂದಲೂ ದೊಡ್ಡ ಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದಿರುವುದರಿಂದ ಗರಿಷ್ಠ ಕಾಯುವಿಕೆ ಅವಧಿಯನ್ನು ಹೊಂದಿದೆ. ಕೆಲವೊಂದು ರೂಪಾಂತರಗಳಿಗೆ ಇವತ್ತು ಬುಕ್ ಮಾಡಿದರೂ ಕನಿಷ್ಠವೆಂದರೂ 60 ವಾರಗಳು ಕಾಯಬೇಕು. ಇತ್ತೀಚೆಗೆ ಕಂಪನಿಯು Z6 ರೂಪಾಂತರದ ವಿತರಣೆಯನ್ನು ಪ್ರಾರಂಭಿಸಿದೆ. ಇದು ರೂ.16.05 ಲಕ್ಷ ಬೆಲೆಯನ್ನು ಹೊಂದಿದ್ದು, ಮ್ಯಾನುವಲ್ ಆವೃತ್ತಿ ಬೆಲೆ ರೂ.18.01 ಲಕ್ಷವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








