ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ಏಕಾಏಕಿ ವೇಗವಾಗಿ ಹರಡುತ್ತಿದೆ. ಕೆಲವು ದಿನಗಳ ಹಿಂದೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿರುತ್ತಿದ್ದ ಹೊಸ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಈಗ ಪ್ರತಿ ದಿನ ಲಕ್ಷದ ಗಡಿ ದಾಟುತ್ತಿದೆ.

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಇದೇ ವೇಳೆ ಕರೋನಾ ವೈರಸ್'ನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯು ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 1,68,912 ಜನರು ಕರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದರೆ, ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ 904 ಜನರು ಕರೋನಾ ವೈರಸ್'ಗೆ ಮಹಾಮಾರಿಗೆ ಬಲಿಯಾಗಿದ್ದಾರೆ.

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶದ ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಕರ್ನಾಟಕದಲ್ಲಿ ಕೆಲವು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ ಪ್ರತಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಅನಿವಾರ್ಯ ಪರಿಸ್ಥಿತಿಯನ್ನು ಹೊರತು ಪಡಿಸಿ ವಿನಾ ಕಾರಣ ಮನೆಯಿಂದ ಹೊರ ಬರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.ಕರ್ನಾಟಕ ರಾಜ್ಯದ ಪ್ರಮುಖ ನಗರಗಳಲ್ಲಿ ಒಂದಾದ ಮಂಗಳೂರಿನಲ್ಲಿಯೇ 68 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ನೈಟ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಈ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ಕಾರಣಗಳೊಂದಿಗೆ ಹೊರಬರುವವರ ವಿರುದ್ಧ ಯಾವುದೇ ಕ್ರಮಗೊಳ್ಳುತ್ತಿಲ್ಲ.

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಪೊಲೀಸರು ಮಂಗಳೂರಿನಾದ್ಯಂತ 42ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ನಡೆಸುತ್ತಿದ್ದಾರೆ. ಚೆಕ್‌ಪೋಸ್ಟ್‌ವೊಂದರಲ್ಲಿ ಹಿರಿಯ ಪೊಲೀಸ್ಅಧಿಕಾರಿಯೊಬ್ಬರು ಎಲ್ಲಾ ವಾಹನಗಳನ್ನು ಒಂದೊಂದಾಗಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶ ನೀಡುತ್ತಿರುವ ವೀಡಿಯೊವನ್ನು ಇ ಮುಂಗಾರು ಚಾನೆಲ್ ಪೋಸ್ಟ್ ಮಾಡಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಇದೇ ವೇಳೆ ಸರಿಯಾದ ದಾಖಲಾತಿಗಳನ್ನು ಹೊಂದಿರುವ ವಾಹನಗಳಿಗೆ ಸೂಚನೆ ನೀಡಿ ಕಳುಹಿಸಬೇಕು ಎಂದು ಅವರು ಹೇಳುವುದನ್ನು ಈ ವೀಡಿಯೊದಲ್ಲಿ ಕಾಣಬಹುದು. ಈ ಕಾರ್ಯಾಚರಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ದ್ವಿಚಕ್ರ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಸದ್ಯಕ್ಕೆ ಕೇವಲ ದ್ವಿಚಕ್ರ ವಾಹನಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿರುವ ಬಗ್ಗೆ ಗುರುತಿನ ಚೀಟಿ ತೋರಿಸಿದ ನಂತರವೂ ಪೊಲೀಸರು ತಮ್ಮ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಈ ವಾಹನಗಳ ಮಾಲೀಕರು ದೂರಿದ್ದಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಸಂಚಾರವನ್ನು ತಡೆಯುತ್ತಿರುವ ಕಾರಣಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ ಎಂದು ಕೆಲವು ನಿವಾಸಿಗಳು ದೂರು ನೀಡಿದ್ದಾರೆ.

ಬಸ್ ಚಾಲಕರ ಮುಷ್ಕರದಿಂದಾಗಿ ಕರ್ನಾಟಕದ ಹಲವು ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದಾಗಿ ಕೆಲಸ ಮುಗಿಸಿ ಮನೆಗೆ ಮರಳುವವರು ತೊಂದರೆ ಎದುರಿಸುವಂತಾಗಿದೆ. ಪೊಲೀಸರ ಈ ಕ್ರಮದಿಂದಾಗಿ ಅಂಗಡಿಗಳ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ನೈಟ್ ಕರ್ಫ್ಯೂ: 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು

ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನವೇ ಪೊಲೀಸರು ಅಂಗಡಿಗಳನ್ನು ಮುಚ್ಚುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಅಂಗಡಿಗಳ ಮಾಲೀಕರು ದೂರಿದ್ದಾರೆ. ಪೊಲೀಸರ ಕ್ರಮದಿಂದ ದ್ವಿಚಕ್ರ ವಾಹನಗಳ ಮಾಲೀಕರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿತ್ರ ಕೃಪೆ: ಇ ಮುಂಗಾರು

Most Read Articles

Kannada
English summary
Mangaluru cops seizes more than 60 vehicles for violating night curfew norms. Read in Kannada.
Story first published: Monday, April 12, 2021, 19:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X