ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದ ಟಾಟಾ ಎಲೆಕ್ಟ್ರಿಕ್ ಕಾರುಗಳು

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (MIA) ತನ್ನ ಇಂಜಿನಿಯರಿಂಗ್, ನಿರ್ವಹಣೆ ಮತ್ತು ಲ್ಯಾಂಡ್‌ಸೈಡ್ ಕಾರ್ಯಾಚರಣೆ ತಂಡಕ್ಕಾಗಿ ವಿಮಾನ ನಿಲ್ದಾಣದಲ್ಲಿ ದಿನನಿತ್ಯದ ಕೆಲಸವನ್ನು ನಿರ್ವಹಿಸಲು ಎರಡೂ ಟಾಟಾ ನೆಕ್ಸನ್ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಹಣಕಾಸು ವರ್ಷದ ಅಂತ್ಯದ ವೇಳೆಗೆ ಮತ್ತೊಂದು ಎಲೆಕ್ಟ್ರಿಕ್ ಎಸ್‌ಯುವಿ ಅಥವಾ ಬಸ್ ಅನ್ನು ತನ್ನ ಫ್ಲೀಟ್‌ಗೆ ಸೇರಿಸಲು ಯೋಜಿಸಿದೆ. ಈ ಸಂದರ್ಭದಲ್ಲಿ, ಪಾರ್ಕಿಂಗ್ ಸ್ಥಳದಲ್ಲಿ ಎರಡು ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಘೋಷಿಸಿದರು. ಈಗಾಗಲೇ 60kW DC, CCS2 ಫಾಸ್ಟ್ ಚಾರ್ಜರ್ ಅನ್ನು ಫ್ಲ್ಯಾಗ್ ಪೋಸ್ಟ್ ಬಳಿ ಐಸ್ ಲ್ಯಾಂಡ್ ನಂ.4 ನಲ್ಲಿ ಸ್ಥಾಪಿಸಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಎಲೆಕ್ಟ್ರಿಕ್ ಕಾರ್ ಫ್ಲೀಟ್ ಅನ್ನು ಚಾರ್ಜ್ ಮಾಡಲು ಈ ಚಾರ್ಜಿಂಗ್ ಪಾಯಿಂಟ್ ಅನ್ನು ಬಳಸಿಕೊಳ್ಳುತ್ತದೆ ಮತ್ತು ಸಾರ್ವಜನಿಕ ಮತ್ತು ಕಮರ್ಷಿಯಲ್ ಫ್ಲೀಟ್ ಆಪರೇಟರ್‌ಗಳು ತಮ್ಮ ಇವಿಗಳನ್ನು ಚಾರ್ಜ್ ಮಾಡಲು ಅನುಮತಿಸುತ್ತದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು ನಿಗ್ರಹಿಸುತ್ತದೆ, ಇದರ ಪರಿಣಾಮವಾಗಿ ವಿಮಾನ ನಿಲ್ದಾಣದ ಸೌಲಭ್ಯದಿಂದ ಹೊರಸೂಸುವ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡುತ್ತದೆ ಎಂದು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ಅಧಿಕಾರಿಗಳು ಹೇಳಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ನಿವ್ವಳ ಶೂನ್ಯ ಮತ್ತು ಗೋ ಗ್ರೀನ್ ಕಾರ್ಯಕ್ರಮದ ಅನುಗುಣವಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಎಲ್ಲಾ ಇಂಧನ ಚಾಲಿತ ವಾಹನಗಳನ್ನು ಮಾರ್ಚ್ 2025 ರೊಳಗೆ ಎಲೆಕ್ಟ್ರಿಕ್ ವಾಹನಗಳೊಂದಿಗೆ ಬದಲಾಯಿಸುತ್ತದೆ. ಮತ್ತು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಖ್ಯ ಗುರಿ 2029ರ ವೇಳೆಗೆ ಇಂಗಾಲದ ತಟಸ್ಥತೆಯನ್ನು ಸಾಧಿಸುವುದು ಎಂದು ಹೇಳಿದೆ,

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಈ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳುವುದಾದರೆ, ಟಾಟಾ ಕಂಪನಿಯು 2020ರ ಜನವರಿಯಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಪರಿಚಯಿಸಿದರು. ಈ ನೆಕ್ಸಾನ್ ಎಲೆಕ್ಟ್ರಿಕ್ ಭಾರತದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕರ ಎಲೆಕ್ಟ್ರಿಕ್ ಕಾರು ಆಗಿದೆ. ಅಲ್ಲದೇ ಇದು ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದ ಮೊದಲ ವಾಹನವಾಗಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಈ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಲಾ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ ಅಂಡ್ ಗೋ, ಕೂಲ್ಡ್ ಗ್ಲೋವ್ ಬಾಕ್ಸ್, ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ,

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದೆ. ಇದಕ್ಕಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಮ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಅನ್ನು ನೀಡಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಫೇಸ್‌ಲಿಫ್ಟ್ ಮಾದರಿಯಾದ ನೆಕ್ಸಾನ್ ಇವಿ ಮ್ಯಾಕ್ಸ್ ಆವೃತ್ತಿಯನ್ನು ಈ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಇವಿ ಕಾರು ಮಾದರಿಯು ವಿಸ್ತರಿತ ಬ್ಯಾಟರಿ ರೇಂಜ್ ಜೊತೆಗೆ ಹಲವಾರು ಹೊಸ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿತು. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಈ ಕಾರು ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ. ಈ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ. 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಇನ್ನು 3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ. ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಸೌಲಭ್ಯವು ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ರೇಂಜ್ ನೀಡುತ್ತದೆ, ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದೆ.

ಮಂಗಳೂರಿನ ವಿಮಾನ ನಿಲ್ದಾಣ ಸೇರಿದ ಎಲೆಕ್ಟ್ರಿಕ್ ಕಾರುಗಳು

ಇನ್ನು ಭಾರತದಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಇದರಿಂದ ಪಾರಾಗಲು ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಹೆಚ್ಚಾಗುತ್ತಿದೆ. ಇದರ ನಡುವೆ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿದೆ. ಈ ನಡುವೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (MIA) ಎರಡೂ ಟಾಟಾ ನೆಕ್ಸನ್ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿದೆ.

Most Read Articles

Kannada
English summary
Mangaluru international airport acquires two tata nexon ev details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X