ಇನ್ಮುಂದೆ ಗೋವಾ ಟ್ರಿಪ್‌ ಬಲು ಸರಳ: ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ

ದೇಶದ ನಾನಾ ಭಾಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಪ್ರೀಮಿಯಂ ಸೆಮಿ ಹೈ - ಸ್ವೀಡ್ ರೈಲಾಗಿ ಭಾರತದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದೆ. ಮಂಗಳೂರು ಮಾರ್ಗಗಳಲ್ಲಿ ಈ ರೈಲು ಓಡಾಟ ನಡೆಸುವ ಕಾಲ ಹತ್ತಿರ ಬಂದಿದ್ದು, ಕರಾವಳಿ ಜನರ ಕನಸು ಈಡೇರುತ್ತಿದೆ.

ಕರಾವಳಿ ಜನರ ನಿರೀಕ್ಷೆಯ ಮಂಗಳೂರು - ಮಡ್ಗಾಂವ್‌ ವಂದೇ ಭಾರತ್‌ ರೈಲು ಪ್ರಾಯೋಗಿಕವಾಗಿ ಸಂಚಾರ ಆರಂಭಿಸಿದೆ. ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಗಳೂರಿನಲ್ಲಿ ಓಡಾಟ ನಡೆಸಲು ಸಜ್ಜಾಗಿದೆ. ಮಂಗಳೂರು ಮತ್ತು ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಓಡಾಟಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದು ಬೆಳಗ್ಗೆ ಮಂಗಳೂರು - ಮಡ್ಗಾಂವ್‌ ವಂದೇ ಭಾರತ್‌ ರೈಲು ಸಂಚಾರ ಆರಂಭಿಸಿದೆ.

Vande Bharat express

ಇಂದು ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ರೈಲು‌ ನಿಲ್ದಾಣದಿಂದ‌ ಈ ಪ್ರಾಯೋಗಿಕ ರೈಲು ಪ್ರಯಾಣ ಆರಂಭಿಸಿ, ಮಧ್ಯಾಹ್ನ 1.45ಕ್ಕೆ ಮಡಗಾಂವ್ ತಲುಪಿತು. ಇಂದು ಪ್ರಾಯೋಗಿಕವಾಗಿ ಸಂಚಾರ ನಡೆಸುವುದಕ್ಕೂ ಮುನ್ನ ಸಂಸದ ನಳಿನ್ ಕುಮಾರ್ ಕಟೀಲ್ ಈ ರೈಲನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮಂಗಳೂರು - ಮಡ್ಗಾಂವ್‌ ವಂದೇ ಭಾರತ್‌ ರೈಲಿಗೆ ಡಿಸೆಂಬರ್‌ 30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಚಾಲನೆ ನೀಡುವುದು ಬಹುತೇಕ ಖಚಿತವಾಗಿದೆ.

ಡಿಸೆಂಬರ್‌ 30 ರಂದು ದೇಶದ 6 ಕಡೆಗಳಲ್ಲಿಆರಂಭವಾಗುವ ವಂದೇ ಭಾರತ್‌ ರೈಲಿಗೆ ಚಾಲನೆ, ಎರಡು ಕಡೆ ಅಮೃತ್‌ ಭಾರತ್‌ ರೈಲಿಗೆ ಚಾಲನೆ ಜೊತೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ ಫಾರಂನ ಉದ್ಘಾಟನೆ ಕೂಡ ನಡೆಯಲಿದೆ. ಇನ್ನು ಮಂಗಳೂರು - ಗೋವಾ ನಡುವಿನ ವಂದೇ ಭಾರತ್‌ ರೈಲಿನ ಸದ್ಯದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ.

Vande Bharat express

ಪ್ರತಿದಿನ ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮಧ್ಯಾಹ್ನ 1.05ಕ್ಕೆ ಮಡ್ಗಾಂವ್‌ ತಲುಪಲಿದೆ. ಮಡ್ಗಾಂವ್‌ನಿಂದ ಸಂಜೆ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್‌ ತಲುಪಲಿದೆ. ವಂದೇ ಭಾರತ್‌ ರೈಲಿಗೆ ಉಡುಪಿ ಮತ್ತು ಕಾರವಾರಗಳಲ್ಲಿ ಮಾತ್ರ ನಿಲುಗಡೆ ಕಲ್ಪಿಸಲಾಗಿದೆ. ಈ ರೈಲಿನ ನಿರ್ವಹಣೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯವನ್ನು ಒದಗಿಸುತ್ತವೆ. ಆರಾಮದಾಯಕ ಸೀಟುಗಳನ್ನು ಹೊಂದಿದ್ದು, ಪ್ರಯಾಣಿಕರನ್ನು ವೇಗವಾಗಿ ಗಮ್ಯ ಸ್ಥಳವನ್ನು ತಲುಪಿಸುತ್ತಿವೆ. ಆದರೆ, ಸುರಕ್ಷತೆಯ ದೃಷ್ಟಿಯಿಂದ ವೇಗವನ್ನು ಗಂಟೆಗೆ 130 ಕಿಮೀ.ಗೆ ಸೀಮಿತಗೊಳಿಸಿದೆ. ವೈಫೈ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲು, ಜೈವಿಕ ಶೌಚಾಲಯ ಹಾಗೂ ಅಗ್ನಿ ನಿರೋಧನ ಸಾಧನಗಳನ್ನು ಒಳಗೊಂಡಿದೆ.

Vande Bharat express

ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ಆರಾಮದಾಯಕ ಪ್ರಯಾಣವನ್ನು ಒದಗಿಸಲು ರೈಲ್ವೆ ಇಲಾಖೆಯು ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಫೆಬ್ರವರಿ 2024 ರೊಳಗೆ ಲೋಕಾರ್ಪಣೆಯಾಗಬಹುದು. ಇದು 823 ಬರ್ತ್‌ಗಳನ್ನು ಒಳಗೊಂಡಿರಲಿದ್ದು, ವಿಶ್ವದರ್ಜೆಯ ಸೌಕರ್ಯಗಳನ್ನು ಹೊಂದಿರಲಿದೆ. ವಾಸನೆ ಮುಕ್ತ ಶೌಚಾಲಯ, ಸ್ವಯಂ ಚಾಲಿತ ಬಾಗಿಲು ಸೇರಿದಂತೆ ಹತ್ತಾರು ಸೌಕರ್ಯಗಳನ್ನು ಪಡೆದಿರುವ ನೀರಿಕ್ಷೆಯನ್ನು ಹೊಂದಿದೆ.

ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ಆರಾಮದಾಯಕ ಪ್ರಯಾಣವನ್ನು ಒದಗಿಸಲು ರೈಲ್ವೆ ಇಲಾಖೆಯು ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಫೆಬ್ರವರಿ 2024 ರೊಳಗೆ ಲೋಕಾರ್ಪಣೆಯಾಗಬಹುದು. ಇದು 823 ಬರ್ತ್‌ಗಳನ್ನು ಒಳಗೊಂಡಿರಲಿದ್ದು, ವಿಶ್ವದರ್ಜೆಯ ಸೌಕರ್ಯಗಳನ್ನು ಹೊಂದಿರಲಿದೆ. ವಾಸನೆ ಮುಕ್ತ ಶೌಚಾಲಯ, ಸ್ವಯಂ ಚಾಲಿತ ಬಾಗಿಲು ಸೇರಿದಂತೆ ಹತ್ತಾರು ಸೌಕರ್ಯಗಳನ್ನು ಪಡೆದಿರುವ ನೀರಿಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Article Published On: Tuesday, December 26, 2023, 17:29 [IST]
English summary
Mangaluru madgaon vande bharat express train trial started details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+