ಮಂಗಳೂರು: ಮಾರುತಿ ಆಲ್ಟೊ ಕಾರು ಮಾಲೀಕನ ಮೆಸೇಜ್.. 'ಇನ್ನು EMI ಕಟ್ಟಬೇಕು' ವಿಡಿಯೋ ವೈರಲ್!

ಇಂಟರ್‌ನೆಟ್‌ನಲ್ಲಿ ನಾನಾ - ಕಾರಣಗಳಿಗೆ ಒಂದಷ್ಟು ವಿಷಯಗಳು ಸಖತ್ ವೈರಲ್ ಆಗುತ್ತವೆ. ಸದ್ಯ, ಮಂಗಳೂರು ವ್ಯಕ್ತಿಯೊಬ್ಬರು ತಮ್ಮ 'ಮಾರುತಿ ಆಲ್ಟೊ' ಕಾರಿನ ಹಿಂದೆ ಬರೆಸಿರುವ 'ನಡುವೆ ಅಂತರವಿರಲಿ, ಇಎಂಐ ಬಾಕಿಯಿದೆ' ಎಂಬ ಸಾಲುಗಳನ್ನು ಒಳಗೊಂಡ ಸ್ಟಿಕ್ಕರ್ ತೋರಿಸುವ ವಿಡಿಯೋವೊಂದು ಫುಲ್ ಹಲ್‌ಚಲ್‌ ಸೃಷ್ಟಿಸುತ್ತಿದೆ. ನೆಟ್ಟಿಗರಿಂದಲೂ ಕೂಡ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ತರೇಹವಾರಿ ಕಾಮೆಂಟ್ ಮಾಡುತ್ತಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಮಾರುತಿ ಆಲ್ಟೊ ಕಾರು ಹೋಗುವಾಗ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. 'ಬ್ಯಾರೀಸ್ ಇನ್ ದುಬೈ' ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದು ಕೇವಲ 3 ದಿನದಲ್ಲಿ 56 ಮಿಲಿಯನ್‌ಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. 32 ಲಕ್ಷಕ್ಕೂ ಅಧಿಕ ಜನರು ಲೈಕ್‌ ಮಾಡಿದ್ದಾರೆ.

Mangaluru Maruti Alto Car Owner Message Keep distance EMI Pending Video Viral

'ನಡುವೆ ಅಂತರವಿರಲಿ, ಇಎಂಐ ಬಾಕಿಯಿದೆ' ಎಂಬ ಸಾಲುಗಳು ಹಾಸ್ಯಮಯವಾಗಿ ಕಾಣಿಸಿಕೊಳ್ಳಬಹುದು. ಆದರೆ, ಒಳಗೆ ನಾನಾರ್ಥಗಳನ್ನು ಹೊಂದಿದೆ. ಇದು ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತದೆ. ಜೊತೆಗೆ ಆ ಕಾರು ಮಾಲೀಕನ ಹಣಕಾಸಿನ ಲೆಕ್ಕಾಚಾರದ ಬಗ್ಗೆ ಬೆಳಕನ್ನು ಚೆಲ್ಲುತ್ತದೆ.

ಈ ವೈರಲ್ ಪೋಸ್ಟ್‌ಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸಹ ಹತ್ತಾರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು 'ಇದುವರೆಗಿನ ಅತ್ಯುತ್ತಮ ಘೋಷಣೆ' ಎಂದಿದ್ದಾರೆ. ಮತ್ತೊಬ್ಬರು 'ಈತ ಬಜೆಟ್ & ಕಮಿಟ್ಮೆಂಟ್ ಹೊಂದಿರುವ ವ್ಯಕ್ತಿ' ಎಂದು ಹೇಳಿದ್ದಾರೆ.

ಪ್ರಸ್ತುತ ದೇಶೀಯವಾಗಿ ಲಭ್ಯವಿರುವ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ವಿಶೇಷತೆಗಳೇನು:

ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಆಲ್ಟೊ ಕೆ10' ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲೆಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, December 23, 2025, 11:16 [IST]
English summary
Mangaluru maruti alto car owner message keep distance emi pending video viral
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+