ಡಾಕ್ಟರ್, ಎಂಜಿನಿಯರ್‌ಗಳಿಗೂ ಇಷ್ಟ ಈ ಕಾರು.. ಭಾರಿ ಸಂಖ್ಯೆಯಲ್ಲಿ ಮಾರಾಟ, 4.99 ಲಕ್ಷ.. 34 Km ಮೈಲೇಜ್, 5-ಸೀಟರ್!

ಮಾರುತಿ ಸುಜುಕಿ ಇಂಡಿಯಾ (Maruti Suzuki india) ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಸೆಲೆರಿಯೊ (Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿರುವುದರಿಂದ ಈ ಕಾರಿನ ಮಾರಾಟ ತಿಂಗಳಿನಿಂದ ತಿಂಗಳಿಗೆ ಉತ್ತಮವಾಗಿ ಬೆಳವಣಿಗೆಯಾಗುತ್ತಿದೆ. ಕಳೆದ ತಿಂಗಳು (ಸೆಪ್ಟೆಂಬರ್-2024) ಕೂಡ ಸೆಲೆರಿಯೊ ಹ್ಯಾಚ್‌ಬ್ಯಾಕ್‌ಗಳನ್ನು ಭಾರಿ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸೆಪ್ಟೆಂಬರ್‌ನಲ್ಲಿ ಬರೋಬ್ಬರಿ 3,241 ಯುನಿಟ್ ಸೆಲೆರಿಯೊ ಕಾರನ್ನು ಮಾರಾಟಗೊಳಿಸಲಾಗಿದೆ. ಆಗಸ್ಟ್‌ನಲ್ಲಿ ಮಾರಲ್ಪಟ್ಟ 3,181 ಯುನಿಟ್‌ಗೆ ಹೋಲಿಕೆ ಮಾಡಿದರೆ ತಿಂಗಳಿಂದ ತಿಂಗಳಿಗೆ (MoM) ಶೇಕಡ 2% ಪ್ರಗತಿಯಾಗಿದೆ. ಜುಲೈನಲ್ಲಿ 2,465 ಯುನಿಟ್, ಜೂನ್ ತಿಂಗಳಲ್ಲಿ 2,985 ಯುನಿಟ್ ಸೆಲೆರಿಯೊ ಹ್ಯಾಚ್‌ಬ್ಯಾಕ್‌ಗಳು ಮಾರಾಟವಾಗಿದ್ದವು. ಈ ಅಕ್ಟೋಬರ್‌ನಲ್ಲಿ ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Maruti Suzuki Celerio Sales September 2024 Good Growth Rs 4 99 Lakh Starting Price 34 Km Mileage

ದೇಶೀಯವಾಗಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio), ಮಿಡ್-ಸೈಜ್ ಹ್ಯಾಚ್‌ಬ್ಯಾಕ್‌ (Mid-Size Hatchback) ಆಗಿರುವುದರಿಂದ ಅತ್ಯಂತ ಕೈಗೆಟುಕುವ ಬೆಲೆಯನ್ನು ಹೊಂದಿದೆ. ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿರುವುದರಿಂದ ಡಾಕ್ಟರ್, ಎಂಜಿನಿಯರ್‌ಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ನೆಚ್ಚಿನ ಕಾರಾಗಿದೆ.

ಮಾರುತಿ ಸುಜುಕಿ ಸೆಲೆರಿಯೊ ಕಾರು ಪೆಟ್ರೋಲ್ & ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Maruti Suzuki Celerio Sales September 2024 Good Growth Rs 4 99 Lakh Starting Price 34 Km Mileage

ಸಿಎನ್‌ಜಿ ಚಾಲಿತ ಸೆಲೆರಿಯೊ ರೂಪಾಂತರವು (ವೇರಿಯೆಂಟ್) ಇದೇ 1-ಲೀಟರ್ ಸಾಮರ್ಥ್ಯದ ಎಂಜಿನ್‌ನ್ನು ಒಳಗೊಂಡಿದೆ. ಆದರೆ, 57 ಪಿಎಸ್ ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದೆ. ಈ ಕಾರು, 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ನೀಡುತ್ತದೆ.

ನೂತನ ಸೆಲೆರಿಯೊ ಹ್ಯಾಚ್‌ಬ್ಯಾಕ್‌ನಲ್ಲಿ 5 ಜನರು ಸುಲಭವಾಗಿ ಸಂಚರಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 313 ಲೀಟರ್‌ನ ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು), ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Maruti Suzuki Celerio Sales September 2024 Good Growth Rs 4 99 Lakh Starting Price 34 Km Mileage

ಮಾರುತಿ ಸುಜುಕಿ ಸೆಲೆರಿಯೊ ಪುಟ್ಟ ಕಾರಾಗಿದ್ದರೂ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ. ಈ ಕಾರಿಗೆ ಟಾಟಾ ಟಿಯಾಗೊ ಮತ್ತು ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 17, 2024, 10:21 [IST]
English summary
Maruti suzuki celerio sales september 2024 good growth rs 4 99 lakh starting price 34 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+