ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಭಾರತದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದೆ. ಇದರ ನಡುವೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ (Conrad Sangma) ಅವರು ತಮ್ಮ ಕಚೇರಿಗೆ ಪ್ರಯಾಣಿಸಲು ಎಲೆಕ್ಟ್ರಿಕ್ ವಾಹನ (ಇವಿ) ಬಳಸುವುದಾಗಿ ಹೇಳಿದ್ದಾರೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಇತರ ಇಲಾಖೆಗಳು ಮತ್ತು ನಾಗರಿಕರು ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಪ್ರಾರಂಭಿಸುವಂತೆ ಸಿಎಂ ಕೇಳಿಕೊಂಡಿದ್ದಾರೆ. ಏಕೆಂದರೆ ಇದು ಉತ್ತಮ ಪರಿಸರದ ಕಡೆಗೆ ಒಂದು ಪ್ರಮುಖ ಹೆಜ್ಜೆಯಾಗಿದೆ ಮತ್ತು ಅದೇ ಸಮಯದಲ್ಲಿ "ಪರಿಸರವನ್ನು ರಕ್ಷಿಸಲು ಮತ್ತು ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯ ಮೇಲೆ ಇಂಧನಗಳ ಪ್ರಭಾವವನ್ನು ಕಡಿಮೆ ಮಾಡಲು ನಮ್ಮ ಜವಾಬ್ದಾರಿಯನ್ನು ಪೂರೈಸಲು ನಾವು ಸಮರ್ಥರಾಗಿದ್ದೇವೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸರ್ಕಾರಿ ಇಲಾಖೆಗಳು ಮತ್ತು ರಾಜ್ಯದ ನಾಗರಿಕರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದಾಗಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಇದು ಕಚೇರಿ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಪಾತ್ರವನ್ನು ವಹಿಸುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಮಾಧ್ಯಮಗಳೊಂದಿಗೆ ಸಂವಾದದಲ್ಲಿ ಹೇಳಿದರು. 'ಇತ್ತೀಚೆಗಷ್ಟೇ ಸಿಎಂಗೆ ಎಲೆಕ್ಟ್ರಿಕ್ ವಾಹನ ನೀಡಲು ಸಿಎಂ ಸೆಕ್ರೆಟರಿಯೇಟ್ ಆರ್ಡರ್ ಮಾಡಿದ್ದು, ಶುಕ್ರವಾರ ವಿತರಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಇನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆಯು ಹೆಚ್ಚಾಗುತ್ತಿದೆ. ಅಲ್ಲದೇ ದೇಶದಲ್ಲಿ ಇಂಧನ ಬೆಲೆಯು ಕೂಡ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮೊರೆ ಹೋಗುತ್ತಿದ್ದಾರೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಇದರಿಂದ ಬಹುತೇಕ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಪ್ರಾರಂಭಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಯು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಎಲೆಕ್ಟ್ರಿಕ್ ವಾಹನಗಳ ಮಾರಾಟವು ಪ್ರತಿ ತಿಂಗಳು ಉತ್ತಮವಾಗುತ್ತಿದ. ಇತ್ತೀಚೆಗೆ, ಏಪ್ರಿಲ್ 2022 ರಲ್ಲಿ ಎಲೆಕ್ಟ್ರಿಕ್ ಕಾರುಗಳ ಅಂಕಿಅಂಶಗಳನ್ನು ಬಹಿರಂಗಪಡಿಸಲಾಗಿದೆ, ಇದರಲ್ಲಿ ಕಳೆದ ವರ್ಷದ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಈ ವರ್ಷ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಹೆಚ್ಚು ಉತ್ತಮವಾಗಿದೆ ಎಂದು ನೋಡಬಹುದು. ಈ ವರ್ಷ ಒಟ್ಟು 2,150 ಎಲೆಕ್ಟ್ರಿಕ್ ಪ್ರಯಾಣಿಕ ವಾಹನಗಳನ್ನು ಕಂಪನಿಗಳು ಮಾರಾಟ ಮಾಡಿವೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಏಪ್ರಿಲ್ 2021 ಕ್ಕೆ ಹೋಲಿಸಿದರೆ, ಕಳೆದ ವರ್ಷ ಏಪ್ರಿಲ್‌ನಲ್ಲಿ ಮಾರಾಟವಾದ 597 ಯುನಿಟ್‌ಗಳಿಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ನಲ್ಲಿ ಎಲೆಕ್ಟ್ರಿಕ್ ಪ್ಯಾಸೆಂಜರ್ ವಾಹನ ಮಾರಾಟವು 260.13 ಶೇಕಡಾ ಹೆಚ್ಚಾಗಿದೆ. ಮತ್ತೊಂದೆಡೆ, ನಾವು ತಿಂಗಳಿನಿಂದ ತಿಂಗಳ ಮಾರಾಟವನ್ನು ನೋಡಿದರೆ, ಮಾರ್ಚ್ 2022 ಕ್ಕೆ ಹೋಲಿಸಿದರೆ ಈ ವಿಭಾಗದ ಮಾರಾಟವು ಏಪ್ರಿಲ್‌ನಲ್ಲಿ 40.67 ಶೇಕಡಾ ಇಳಿಕೆಯಾಗಿದೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಡೇಟಾ ಪ್ರಕಾರ, ಮಾರ್ಚ್ 2022 ರಲ್ಲಿ ಒಟ್ಟು 3,624 ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಏಪ್ರಿಲ್ 2022 ರಲ್ಲಿ ಭಾರತದಲ್ಲಿನ ಒಟ್ಟು ಎಲೆಕ್ಟ್ರಿಕ್ ಪ್ರಯಾಣಿಕ ವಾಹನ ಮಾರಾಟದ 83.81 ಪ್ರತಿಶತವನ್ನು ಸ್ಥಳೀಯ ಕಾರು ತಯಾರಕ ಟಾಟಾ ಮೋಟಾರ್ಸ್ ಹೊಂದಿದೆ. ಟಾಟಾ ಮೋಟಾರ್ಸ್ ಏಪ್ರಿಲ್ 2021 ರಲ್ಲಿ ಒಟ್ಟು 1,802 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಈ ವರ್ಷ ಕಂಪನಿಯ ಎಲೆಕ್ಟ್ರಿಕ್ ಪ್ರಯಾಣಿಕ ವಾಹನಗಳ ಮಾರಾಟವು 320.05 ಪ್ರತಿಶತದಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮಾರ್ಚ್ 2022 ರಲ್ಲಿ ಕಂಪನಿಯು ಮಾರಾಟ ಮಾಡಿದ 3,435 ಯುನಿಟ್‌ಗಳ ವಿರುದ್ಧ ಏಪ್ರಿಲ್ 2022ರ ಮಾರಾಟವು ಶೇಕಡಾ 47.54 ರಷ್ಟು ಕಡಿಮೆಯಾಗಿದೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಟಾಟಾ ಮೋಟಾರ್ಸ್ ಭಾರತದಲ್ಲಿ ಎಲೆಕ್ಟ್ರಿಕ್ ಕಾರ್ ಮಾರುಕಟ್ಟೆಯಲ್ಲಿ ಗಮನಾರ್ಹ ಮುನ್ನಡೆಯನ್ನು ಸಾಧಿಸಿದ್ದು, ಕಂಪನಿಯ ಈ ಮಟ್ಟದ ಬೆಳವಣಿಗೆಯಲ್ಲಿ ಟಾಟಾ ನೆಕ್ಸಾನ್ EV ಮಾದರಿಯು ಪ್ರಮುಖ ಪಾತ್ರ ವಹಿಸಿದೆ. ಏಕೆಂದರೆ ಈ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ SUV ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರು ಎಂದು ಖ್ಯಾತಿ ಪಡೆದುಕೊಂಡಿದೆ. ಟಾಟಾ ಮೋಟಾರ್ಸ್‌ನ ಎಲೆಕ್ಟ್ರಿಕ್ ವಿಭಾಗದಲ್ಲಿ ನೆಕ್ಸಾನ್ಇವಿVಗಿಂತ ಇನ್ನಷ್ಟು ಹೆಚ್ಚಿನದನ್ನು ಬಯಸಿದರೆ, ಸ್ಟ್ಯಾಂಡರ್ಡ್ ಮಾಡೆಲ್ ನೀಡುವ ಶ್ರೇಣಿಯು ಸಾಕಾಗದೇ ಇದ್ದರೆ, ಅದರ ಕಾರ್ಯಕ್ಷಮತೆ ಸಮರ್ಪಕವಾಗಿಲ್ಲ ಎನ್ನುವ ಎಷ್ಟೋ ಮಂದಿಯ ಅತೃಪ್ತಿಯ ಪ್ರಶ್ನೆಗಳಿಗೆ ಟಾಟಾ ಮೋಟಾರ್ಸ್‌ನ ಇಂಜಿನಿಯರ್‌ಗಳು ತಕ್ಕ ಉತ್ತರ ನೀಡಿದ್ದಾರೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ನೆಕ್ಸಾನ್ ಇವಿಯನ್ನು ಎಲ್ಲಾ ವಿಧದಲ್ಲೂ ಗರಿಷ್ಠ ಮಟ್ಟಕ್ಕೆ ತಂದು ಟಾಟಾ ನೆಕ್ಸನ್ ಇವಿ ಮ್ಯಾಕ್ಸ್ ಎಂದು ಹೆಸರಿಸಲು ನಿರ್ಧರಿಸಿದ್ದಾರೆ. ಈ ಕಾರಿನ ಅಸ್ತಿತ್ವದ ಸಂಪೂರ್ಣ ಅಂಶವು ತುಂಬಾ ಸರಳವಾಗಿದೆ - ಎಲ್ಲವನ್ನೂ ಗರಿಷ್ಠವಾಗಿ ನೀಡುತ್ತದೆ. ಗರಿಷ್ಠ ಶ್ರೇಣಿ, ಗರಿಷ್ಠ ಕಾರ್ಯಕ್ಷಮತೆ, ಗರಿಷ್ಠ ವೈಶಿಷ್ಟ್ಯಗಳು ಮತ್ತು ಗರಿಷ್ಠ ಎಲೆಕ್ಟ್ರಿಕ್ ಮೊಬಿಲಿಟಿ ಸೇರಿ ಎಲ್ಲವನ್ನು ಗರಿಷ್ಟವಾಗಿ ನೀಡಲಾಗಿದೆ. ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

ಎಲೆಕ್ಟ್ರಿಕ್ ಕಾರು ಬಳಕೆಗೆ ಮುಂದಾದ ಮೆಘಾಲಯ ಸಿಎಂ: ಇತರರು ಎಲೆಕ್ಟ್ರಿಕ್ ವಾಹನ ಬಳಸಲು ಸಲಹೆ

ಇನ್ನು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

Most Read Articles

Kannada
English summary
Meghalaya cm conrad sangma will ride on electric vehicle suggested to other find here all details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X