ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆಯೊಂದಿಗೆ ಮಾರಾಟವಾಗುತ್ತಿರುವ ಎಂಜಿ ಹೆಕ್ಟರ್ ಕಾರಿನಲ್ಲಿ ಇತ್ತೀಚೆಗೆ ಕಂಡುಬಂದ ಕೆಲವು ತಾಂತ್ರಿಕ ದೋಷಗಳಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರ ಕೆಂಗಣ್ಣಿಗೆ ಗುರಿಯಾಗುತ್ತಿದ್ದು, ಹೊಸ ಕಾರಿನಲ್ಲಿ ಇದೀಗ ಮತ್ತೊಂದು ಗಂಭೀರ ಸಮಸ್ಯೆ ಕಂಡುಬಂದಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಹೌದು, ಎಂಜಿ ಮೋಟಾರ್ ನಿರ್ಮಾಣದ ಹೆಕ್ಟರ್ ಎಸ್‌ಯುವಿ ಕಾರು ಹಲವಾರು ವಿಶೇಷತೆಗಳೊಂದಿಗೆ ಖರೀದಿಗೆ ಲಭ್ಯವಿದ್ದರೂ ಕೆಲವು ತಾಂತ್ರಿಕ ದೋಷಗಳು ಹೊಸ ಕಾರಿನ ಗುಣಮಟ್ಟದ ಬಗೆಗೆ ಗ್ರಾಹಕರಲ್ಲಿ ಅನುಮಾನಗಳು ಶುರುವಾಗಿದ್ದು, ಹೊಸ ಕಾರಿನ ಎಂಜಿನ್‌ನಲ್ಲಿ ಇದ್ದಕ್ಕಿಂದಂತೆ ಬೆಂಕಿ ಕಾಣಿಸಿಕೊಂಡ ಪ್ರಕರಣವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಘಟನೆಗೆ ನಿಖರ ಕಾರಣ ಮಾತ್ರ ಲಭ್ಯವಾಗಿಲ್ಲ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಮಾಹಿತಿಗಳ ಪ್ರಕಾರ, ಹೆಕ್ಟರ್‌ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯು ಮುಂಬೈನ ಬಾಂದ್ರಾ ಒಂದರ ಎಂಜಿ ಶೋರೂಂ ಮುಂಭಾಗದಲ್ಲೇ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಯಲ್ಲಿ ಕಾರಿನ ಮುಂಭಾಗವು ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇದರ ಹೊರತಾಗಿ ಯಾವುದೇ ಅಹಿತಕರ ಘಟನೆ ನಡೆದಿಲ್ಲವಾದರೂ ಹೊಸ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳ ಬಗೆಗೆ ಹಲವಾರು ಅನುಮಾನಗಳು ಶುರುವಾಗಿದ್ದು, ಕಾರು ಚಾಲನೆ ವೇಳೆ ಆದ ತಪ್ಪು ಗೇರ್ ಬಳಕೆ ಅಥವಾ ಹಾಫ್ ಕ್ಲಚ್ ಬಳಕೆಯಿಂದಾಗಿ ಈ ಘಟನೆ ನಡೆದಿರಬಹುದು ಎಂದು ವಿಶ್ಲೇಷಣೆ ಮಾಡಲಾಗಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಈ ಕುರಿತಂತೆ ಹಲವಾರು ಎಂಜಿ ಹೆಕ್ಟರ್ ಕಾರು ಬಳಕೆದಾರರು ದೂರು ಸಲ್ಲಿಸಿದ್ದು, ಡೀಸೆಲ್ ಕಾರುಗಳಲ್ಲೇ ಈ ರೀತಿಯ ಸಮಸ್ಯೆಗಳು ಹೆಚ್ಚು ಎನ್ನುವ ಮಾತುಗಳು ಕೇಳಿಬರುತ್ತಿವೆ. ನಗರಪ್ರದೇಶಗಳಲ್ಲಿ ಹೆಚ್ಚಿರುವ ಟ್ರಾಫಿಕ್ ಜಾಮ್ ವೇಳೆ ಕ್ಲಚ್ ಬಳಕೆ ಮೇಲೆ ಹೆಚ್ಚಿನ ಪ್ರೆಷರ್ ಬಿದ್ದಾಗ ಈ ರೀತಿಯ ಅವಘಡಗಳು ಸಂಭವಿಸಬಹುದು ಎನ್ನಲಾಗಿದ್ದು, ಗ್ರಾಹಕರ ದೂರಿಗೆ ಎಂಜಿ ಮೋಟಾರ್ ಸಂಸ್ಥೆಯು ಯಾವುದೇ ರೀತಿಯ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇನ್ನು ಭಾರತದಲ್ಲಿ ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಭರ್ಜರಿ ಬೇಡಿಕೆಪಡೆದುಕೊಳ್ಳುತ್ತಿರುವ ಎಂಜಿ ಹೆಕ್ಟರ್ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೆಲವು ಕಾರಣಾಂತರಗಳಿಂದ ಬ್ರಾಂಡ್ ಮೌಲ್ಯಕ್ಕೆ ಹೊಡತೆ ನೀಡುವಂತಹ ಘಟನೆಗಳು ಎಂಜಿ ಕಾರಿನ ಗುಣಮಟ್ಟದ ಬಗೆಗೆ ಸಾಕಷ್ಟು ಚರ್ಚೆಗಳಾಗುತ್ತಿವೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇದಕ್ಕೆ ಕಾರಣ, ಹೊಸ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸುವುದಕ್ಕೂ ಮುನ್ನ ಹೊಸ ಕಾರಿನ ರೂಫ್ ಟಾಪ್‌ನಲ್ಲಿ ಮಳೆ ನೀರು ಸೋರುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ವಿಡಿಯೋದಲ್ಲಿನ ಮಾಹಿತಿ ಪ್ರಕಾರ ಕಾರಿನ ಮುಂಭಾಗದ ಸೀಟಿನ ಬಳಿ ರೂಫ್ ಟಾಪ್‌ನಿಂದ ಮಳೆ ನೀರು ಸೋರಿಕೆಯಾಗುತ್ತಿದ್ದು, ಕಾರು ಖರೀದಿ ಮಾಡಿ ಕೇವಲ ಎರಡೂವರೆ ತಿಂಗಳ ಅವಧಿಯಲ್ಲಿ ಇಂತಹ ಸಮಸ್ಯೆ ಎದುರಾಗಿತ್ತು.

MOST READ: ಕಳ್ಳತನವಾಗಿದ್ದ ಕಾರು ಫಾಸ್ಟ್‌ಟ್ಯಾಗ್‌‍‍ನಿಂದಾಗಿ ವಾಪಸ್ ಸಿಕ್ಕಿದ್ದೆ ಒಂದು ರೋಚಕ

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಖರೀದಿ ಮಾಡಿದ ಕೇವಲ ಎರಡೂವರೆ ತಿಂಗಳಿನಲ್ಲಿ ಈ ರೀತಿಯ ಸಮಸ್ಯೆಯಾಗಿರುವುದು ತುಂಬಾ ವಿರಳ ಎನ್ನಬಹುದಾಗಿದ್ದು, ರೂಫ್ ಟಾಪ್‌ ಅಳವಡಿಕೆಯಲ್ಲಾದ ಲೋಪದೋಷವೇ ಇಂತಹ ಸಮಸ್ಯೆಗೆ ಕಾರಣ ಎನ್ನಲಾಗಿತ್ತು.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇದಲ್ಲದೇ ಕಳೆದ ತಿಂಗಳು ಹೊಸ ಹೆಕ್ಟರ್ ಕಾರಿನಲ್ಲಿಯೇ ಹ್ಯಾಂಡಲ್ ಸಮಸ್ಯೆಯಿಂದಾಗಿ ಬೇಸತ್ತ ಗ್ರಾಹಕನೊಬ್ಬ ಕಾರಿಗೆ ಕತ್ತೆ ಕಟ್ಟಿ ಎಳಿಸಿ ಆಕ್ರೋಶ ವ್ಯಕ್ತಪಡಿಸಿದ್ದ. ನಂತರ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಕೊನೆಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಲಾಗಿತ್ತು.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇಂಹತ ಘಟನೆಗಳು ಮಾರುಕಟ್ಟೆಯಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಹೆಕ್ಟರ್ ಕಾರಿನ ಬ್ರಾಂಡ್ ಮೌಲ್ಯಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆಗಳಿದ್ದು, ಬೆಲೆ ಕಡಿಮೆ ಮಾಡಿ ಕಾರು ಮಾರಾಟ ಮಾರಾಟ ಮಾಡುವ ಉದ್ದೇಶದಿಂದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಿರುವುದು ಮತ್ತಷ್ಟು ಸಮಸ್ಯೆಗಳಿಗೆ ಕಾರಣವಾಗಬಹುದು.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ಸ್ಕೋಡಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಎಂಜಿ ಸಂಸ್ಥೆಯ ಕಾರು ಉತ್ಪನ್ನಗಳ ಗುಣಮಟ್ಟದ ಕುರಿತಂತೆ ಮಾತನಾಡುತ್ತಾ ಎಂಜಿಗಿಂತಲೂ ಕಿಯಾ ಮೋಟಾರ್ಸ್ ಸಂಸ್ಥೆಯ ಕಾರುಗಳೇ ಬೆಸ್ಟ್ ಎನ್ನುವಂತಹ ಅಭಿಪ್ರಾಯ ಹಂಚಿಕೊಂಡಿದ್ದರು.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಎಂಜಿ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು ಈ ಕಾರಿನ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 16.68 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಹೆಕ್ಟರ್ ಕಾರಿನಲ್ಲಿ ಪೆಟ್ರೋಲ್ ಡಿಸಿಟಿ ಮಾಡೆಲ್‍ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಹ್ಯುಂಡೈ ಕ್ರೆಟಾ, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಎಂಜಿ ಹೆಕ್ಟರ್ ಬೇಡಿಕೆಗೆ ಇದೇ ಪ್ರಮಖ ಕಾರಣವಾಗಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಹೆಕ್ಟರ್ ಕಾರು 1.5 ಲೀಟರ್ ಪೆಟ್ರೋಲ್ ಎಂಜಿನ್‌ ಮತ್ತು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ ಆಯ್ಕೆ ಹೊಂದಿದ್ದು, ಇದರಲ್ಲಿ ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಜೊತೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದೆ.

ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಚ್ಚ ಹೊಸ ಎಂಜಿ ಹೆಕ್ಟರ್ ಕಾರು..!

ಸ್ಮಾರ್ಟ್ ಹೈಬ್ರಿಡ್ ಆವೃತ್ತಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದ್ದು, ಇಷ್ಟೆಲ್ಲಾ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೆಕ್ಟರ್ ಕಾರಿನಲ್ಲಿ ಆಗಾಗ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿರುವುದು ಬ್ರಾಂಡ್ ಮೌಲ್ಯಕ್ಕೆ ಹೊಡೆತ ನೀಡುವುದರಲ್ಲಿ ಅನುಮಾನವಿಲ್ಲ.

Image Courtesy: Drive and Explore _SR/YouTube

Most Read Articles

Kannada
English summary
MG Hector got fire in Mumbai. Read more in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X