ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಭಾರತದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸಲು ಅವಕಾಶವಿಲ್ಲ. ಮೋಟಾರು ವಾಹನ ಕಾಯ್ದೆ ಪ್ರಕಾರ 18 ವರ್ಷ ದಾಟಿದ ವ್ಯಕ್ತಿ ಚಾಲನಾ ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡುವಂತಿಲ್ಲ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಆದರೂ ಜನ ಈ ನಿಯಮಗಳನ್ನು ಪಾಲಿಸುವುದಿಲ್ಲ. ಅಪಾಪ್ತ ವಯಸ್ಸಿನ ಬಾಲಕನೊಬ್ಬ ಬೈಕ್ ಚಾಲನೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ಕರ್ಪ್ಯೂ ನಿಯಮಗಳು ಜಾರಿಯಲ್ಲಿವೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಜನರು ಕರ್ಫ್ಯೂ ನಿಯಮಗಳನ್ನು ಪಾಲಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಗಮನಿಸಲು ಅಲ್ಲಿನ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಪೊಲೀಸರು ಗಸ್ತು ತಿರುಗುವ ವೇಳೆಯಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ಬಾಲಕ ಸಿಕ್ಕಿ ಬಿದ್ದಿದ್ದಾನೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಆ ಬಾಲಕನ ವಯಸ್ಸು 8 - 10 ವರ್ಷವಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ವಯಸ್ಸಿನವರು ಯಾವುದೇ ಮೋಟಾರು ವಾಹನವನ್ನು ಚಾಲನೆ ಮಾಡುವಂತಿಲ್ಲ. ಆ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುವಾಗ ಆತ ಅಳುವ ದೃಶ್ಯಗಳು ಈ ವೀಡಿಯೊದಲ್ಲಿವೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಬಾಲಕ ಅಳುವುದಕ್ಕೆ ಮನ ಕರಗುವ ಪೊಲೀಸರು ಆತನಿಗೆ ಯಾವುದೇ ದಂಡ ವಿಧಿಸದೇ ಬಿಟ್ಟು ಕಳುಹಿಸಿದ್ದಾರೆ. ಸೆಲ್ಫ್ ಸ್ಟಾರ್ಟ್ ಮೂಲಕ ಬೈಕ್ ಸ್ಟಾರ್ಟ್ ಮಾಡುವ ಬಾಲಕ ಕೆಲವೇ ಕ್ಷಣಗಳಲ್ಲಿ ಅಲ್ಲಿಂದ ಹೊರಟು ಹೋಗಿದ್ದಾನೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಪೊಲೀಸರು ಆತನಿಗೆ ಬೈಕ್ ಚಾಲನೆ ಮಾಡಿ ತೋರಿಸುವಂತೆ ಹೇಳುತ್ತಾರೆ. ಬಾಲಕ ಮಳೆ ನೀರು ನಿಂತಿರುವ ರಸ್ತೆಯಲ್ಲಿ ಕೆಲ ದೂರ ಸಾಗಿ ಬೈಕ್ ಚಾಲನೆ ಮಾಡುತ್ತಾನೆ. ಸ್ಥಳದಲ್ಲಿದ್ದ ಮತ್ತೊಬ್ಬ ಪೊಲೀಸ್ ಅಧಿಕಾರಿ ತಮ್ಮ ಮೊಬೈಲ್ ಫೋನ್‌ನಲ್ಲಿ ಈ ಘಟನೆಯನ್ನು ರೆಕಾರ್ಡ್ ಮಾಡಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಈ ವೀಡಿಯೊವನ್ನು ಯೂಟ್ಯೂಬ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ಆಗಿರುವ ಈ ವೀಡಿಯೊವನ್ನು ಇದುವರೆಗೂ 4 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಹಳೆ ಮೋಟಾರು ವಾಹನ ನಿಯಮಗಳ ಪ್ರಕಾರ ಮೋಟಾರು ವಾಹನ ಚಾಲನೆ ಮಾಡುವ ಅಪ್ರಾಪ್ತರಿಗೆ ರೂ.25 ಸಾವಿರ ದಂಡ ಅಥವಾ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು.

ನಂತರ ಈ ನಿಯಮದಲ್ಲಿ ಬದಲಾವಣೆ ಮಾಡಿ ಮೋಟಾರು ವಾಹನಗಳನ್ನು ಚಾಲನೆ ಮಾಡುವ ಅಪ್ರಾಪ್ತ ವಯಸ್ಕರ ಪೋಷಕರಿಗೆ ದಂಡ ವಿಧಿಸುವುದರ ಜೊತೆಗೆ ಜೈಲು ಶಿಕ್ಷೆ ನೀಡುವ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಲಾಕ್‌ಡೌನ್ ಅವಧಿಯಲ್ಲಿ ಬೈಕ್ ಚಾಲನೆ ಮಾಡಿ ಲಾಕ್ ಆದ ಬಾಲಕ

ಇದರಂತೆ ಇದುವರೆಗೂ ಹಲವಾರು ಜನರಿಗೆ ಶಿಕ್ಷೆ ವಿಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ನಡೆದ ಈ ಘಟನೆಯಲ್ಲಿ ಬಾಲಕ ನಿಜಕ್ಕೂ ಅದೃಷ್ಟಶಾಲಿ ಎಂದೇ ಹೇಳಬಹುದು. ಪೊಲೀಸರು ಆತನಿಗೆ ಯಾವುದೇ ದಂಡವನ್ನು ವಿಧಿಸಿಲ್ಲ. ಜೊತೆಗೆ ಆತನ ತಂದೆ ತಾಯಿಯ ಮೇಲೂ ಯಾವುದೇ ಕ್ರಮ ಕೈಗೊಂಡಿಲ್ಲ.

Most Read Articles

Kannada
English summary
Minor boy rides bike during lockdown in Maharashtra. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X