MLA Lasya nanditha: ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಸಕಿ 'ಲಾಸ್ಯ ನಂದಿತಾ' ಸಾವು!
ತೆಲಂಗಾಣ ರಾಜ್ಯದ ಸಿಕಂದರಾಬಾದ್ ಕಂಟೋನ್ಮೆಂಟ್ BRS (ಭಾರತ ರಾಷ್ಟ್ರ ಸಮಿತಿ) ಶಾಸಕಿ 'ಲಾಸ್ಯ ನಂದಿತಾ' (Lasya Nandita) ಅವರು ಪ್ರಯಾಣಿಸುತ್ತಿದ್ದ ಕಾರು, ಇಲ್ಲಿನ ಹೊರ ವರ್ತುಲ ರಸ್ತೆ (ORR)ಯಲ್ಲಿ ಅಪಘಾತಕ್ಕೆ ಗುರಿಯಾಗಿದ್ದು, ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ. ಕಾರು ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಬಿಆರ್ಎಸ್ ಶಾಸಕಿ ಜಿ.ಲಾಸ್ಯಾ ನಂದಿತಾ (BRS MLA G. Lasya Nanditha (33 ವರ್ಷ) ಅವರು ಶುಕ್ರವಾರ ಮುಂಜಾನೆ ಹೈದರಾಬಾದ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಲ್ಲಿನ ಪಟಾಂಚೇರು ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಾಸಕರ ಚಾಲಕ ಹಾಗೂ ಪಿ.ಎ ಗಾಯಗೊಂಡಿದ್ದಾರೆ.

ಲಾಸ್ಯಾ ನಂದಿತಾ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂದಿತಾ ಅವರ ತಂದೆ ಜಿ.ಸಾಯಣ್ಣ ಅವರು ಸಿಕಂದರಾಬಾದ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಇವರು ಕೂಡ ಅನಾರೋಗ್ಯದಿಂದ ಫೆಬ್ರವರಿ 19, 2023 ರಂದು ನಿಧನರಾಗಿದ್ದರು. ನವೆಂಬರ್ 30 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಆರ್ಎಸ್ ಪಕ್ಷವು ಲಾಸ್ಯಾ ನಂದಿತಾರನ್ನು ಕಣಕ್ಕಿಳಿಸಿತ್ತು.
ಸಣ್ಣ ವಯಸ್ಸಿನಲ್ಲಿಯೇ ಶಾಸಕರಾಗಿದ್ದ ಲಾಸ್ಯಾ ಅವರ ದುರಂತ ಸಾವಿನಿಂದ ಆಘಾತವಾಗಿದೆ. ಅವರ ಕುಟುಂಬಕ್ಕೆ ನಮ್ಮ ಸಂತಾಪವನ್ನು ತಿಳಿಸುತ್ತಿದ್ದೇವೆ, ಬಿಆರ್ಎಸ್ ಪಕ್ಷ ಅವರೊಂದಿಗೆ ನಿಲ್ಲುತ್ತದೆ ಎಂದು ಮಾಜಿ ಸಿಎಂ ಕೆಸಿಆರ್ ಭರವಸೆ ನೀಡಿದ್ದಾರೆ. ಬಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಕೂಡ ಶಾಸಕರ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಅಪಘಾತವಾಗಿತ್ತು: ಇದಕ್ಕೂ ಮುನ್ನ ಶಾಸಕಿ ಲಾಸ್ಯ ನಂದಿತಾ ಅವರು ನಲ್ಗೊಂಡ ಬಿಆರ್‌ಎಸ್ ಸಾರ್ವಜನಿಕ ಸಭೆಗೆ ತೆರಳುತ್ತಿದ್ದಾಗ ಅವರ ಕಾರಿಗೆ ಆಟೋ ಡಿಕ್ಕಿ ಹೊಡೆದಿತ್ತು. ಆಗ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದ ಶಾಸಕಿ ಲಾಸ್ಯ ನಂದಿತಾ ಅವರು, ಇಂದು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತಕ್ಕೆ ಕಾರಣ: ಇಂದು ಮುಂಜಾನೆ 6:30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ನಿದ್ದೆಯ ಮಂಪರಿನಲ್ಲಿ ಅತಿವೇಗದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಲಾಸ್ಯ ನಂದಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪಿಎ ಪ್ರಕಾಶ್ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಹಿಂದೆ ಅಪಘಾತವಾದ ಬಳಿಕ ಶಾಸಕಿ ಲಾಸ್ಯ ನಂದಿತಾ ಅವರು ಮಾರುತಿ ಎಕ್ಸ್‌ಎಲ್6 ಕಾರನ್ನು ಖರೀದಿಸಿದ್ದರಂತೆ. ಇದೇ ಕಾರಿನಲ್ಲಿ ಇಂದು ಪ್ರಯಾಣಿಸುವಾಗ ಶಾಸಕಿ ಸೀಟ್ ಬೆಲ್ಟ್ ಧರಿಸಿರಲಿಲ್ಲ, ಹಠಾತ್ ಬ್ರೇಕ್ ಹಾಕಿದ್ದರಿಂದ ಮುಂದಿನ ಸೀಟಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಅಪಘಾತ ಸಂಭವಿಸಿದಾಗ ಚಾಲಕನನ್ನು ಬದಲಾಯಿಸಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂಬುದು ಹಲವರ ಅಭಿಪ್ರಾಯ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications