Just In
Don't Miss!
- News
ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಕೋಟಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯು ಕಾರು ಖರೀದಿಸಿದ ಜನಪ್ರಿಯ ನಟ
ಕಾರು ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಸಿನಿಮಾ ರಂಗದ ಸೆಲಬ್ರಿಟಿಗಳಿಗೆ ಈ ಕ್ರೇಜ್ ಸ್ವಲ್ಪ ಹೆಚ್ಚೆ ಇರುತ್ತೆ. ಸಿನಿಮಾ ತಾರೆಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಮಾರುಕಟ್ಟೆಗೆ ಲಗ್ಗೆ ಇಟ್ಟ ಐಷಾರಾಮಿ ಕಾರುಗಳನ್ನು ಖರೀದಿಸುವುದು ಸಿನಿಮಾ ಸೆಲಬ್ರಿಟಿಗಳಿಗೆ ಒಂದು ಟ್ರೆಂಡ್ ಆಗಿದೆ.

ಅದೇ ರೀತಿ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ದೇಶಕ ಲಾಲ್ ಅವರು ಕೂಡ ಹೆಚ್ಚು ಕಾರುಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಇನ್ನು ಮಲಯಾಳಂ ಚಲನಚಿತ್ರ ನಟ ಮತ್ತು ನಿರ್ದೇಶಕ ಲಾಲ್ ಅವರು ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಯನ್ನು ಖರೀದಿಸಿದ್ದಾರೆ. ನಿರ್ದೇಶಕ ಲಾಲ್ ಅವರು ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಯನ್ನು ವಿತರಣೆ ಪಡೆಯುವ ಚಿತ್ರಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಎಕ್ಸ್7 ಎಸ್‍ಯುವಿಯ ಡೀಸೆಲ್ ಎಂಜಿನ್ xDrive30d DPE ಸಿಗ್ನೇಚರ್ ಆವೃತ್ತಿಯಾಗಿದೆ.

ಕೇರಳದ ಕೊಚ್ಚಿಯ ಬಿಎಂಡಬ್ಲ್ಯು ವಿತರಕರಾದ EVM ಆಟೋಕ್ರಾಫ್ಟ್‌ನಿಂದ ವಾಹನವನ್ನು ಖರೀದಿಸಲಾಗಿದೆ. ಈ ವಾಹನದ ಎಕ್ಸ್ ಶೋ ರೂಂ ಬೆಲೆ ಸುಮಾರು ರೂ.1.15 ಕೋಟಿಯಾಗಿದೆ. ವಾಹನವು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿ xDrive40i ರೂಪಾಂತರದಲ್ಲಿ 3.0-ಲೀಟರ್ ಸ್ಟ್ರೈಟ್-6, ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 340 ಬಿಹೆಚ್ಪಿ ಪವರ್ ಮತ್ತು 450 ಎಮ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇವಲ 6.1 ಸೆಕೆಂಡುಗಳಲ್ಲಿ ಗಂಟೆಗೆ 0-100 ಕಿಮೀ ವೇಗವನ್ನು ಪಡೆದುಕೊಳ್ಳುತ್ತದೆ, ಈ ಕಾರು 10.54 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಇನ್ನು xDrive30d ರೂಪಾಂತರವು 3.0-ಲೀಟರ್ ಸ್ಟ್ರೈಟ್-6 ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 265 ಬಿಹೆಚ್ಪಿ ಪವರ್ ಮತ್ತು 620 ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 8-ಸ್ಪೀಡ್ ಸ್ಟೆಪ್ಟ್ರಾನಿಕ್ ಸ್ಪೋರ್ಟ್ ಟ್ರಾನ್ಸ್‌ಮಿಷನ್‌ಗೆ ಜೋಡಿಸಲಾಗಿದೆ, ವೇರಿಯಬಲ್ ಟಾರ್ಕ್ ವಿತರಣೆಯೊಂದಿಗೆ ಬಿಎಂಡಬ್ಲ್ಯುನ ಎಕ್ಸ್‌ಡ್ರೈವ್ ತಂತ್ರಜ್ಞಾನದ ಮೂಲಕ ಎಲ್ಲಾ ನಾಲ್ಕು ಟಯರುಗಳಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ.

ಹೊಸ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಯ ಮುಂಭಾಗ ಅಗ್ರೇಸಿವ್ ಲುಕ್ ಹೊಂದಿರುವ ಬಂಪರ್ ಅನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಹೊಸ ಮೆಶ್ ಗ್ರಿಲ್ನೊಂದಿಗೆ ದೊಡ್ಡ ಏರ್ ಟೇಕ್, ನವೀಕರಿಸಿದ ಫಾಗ್ ಲ್ಯಾಂಪ್, ಎಂ ಬ್ಯಾಡ್ಜ್, ಸಿರಿಯಂ ಗ್ರೇ ಒಆರ್‍ವಿಎಂ ಗಳನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಸ್ಪೋರ್ಟಿ ಎಕ್ಸಾಸ್ಟ್, 21 ಇಂಚಿನ ಎಂ-ಸ್ಟೈಲ್ ಲೈಟ್-ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿದೆ.

ಈ ಹೊಸ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿ ಮಾದರಿಯಲ್ಲಿ 12.3-ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋನೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಗಾಗಿ ಪ್ರತ್ಯೇಕ ಡಿಸ್ ಪ್ಲೇಯನ್ನು ಹೊಂದಿದೆ.

ಇನ್ನು ಈ ಹೊಸ ಎಸ್‌ಯುವಿಯಲ್ಲಿ ವಾಯ್ಸ್, ಟಚ್ ಮತ್ತು ಕೈಬಹಗಳನ್ನು ಗ್ರಹಿಸುವ ಸಾಫ್ಟ್‌ವೇರ್‌ನೊಂದಿಗೆ ಬಿಎಂಡಬ್ಲ್ಯು ಐಡ್ರೈವ್ ಸಿಸ್ಟಂ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಂ50ಡಿ ಎಸ್‍ಯುವಿಯಲ್ಲಿ 16-ಸ್ಪೀಕರ್ ಹಾರ್ಮನ್ ಕಾರ್ಡನ್ ಸಿಸ್ಟಂ , ವೈರ್‌ಲೆಸ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.

ಹೊಸ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿ ಮಾದರಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಫೀಚರ್ ಗಳನ್ನು ಅಳವಡಿಸಲಾಗಿದೆ. ಇದರಲ್ಲಿ 9 ಏರ್‌ಬ್ಯಾಗ್‌ಗಳು, ಡೈನಾಮಿಕ್ ಬ್ರೇಕ್ ಕಂಟ್ರೋಲ್, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಸ್ಟೆಬಿಲಿಟಿ ಕಂಟ್ರೋಲ್, ಟ್ರ್ಯಾಕ್ಷನ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು 'ಎಂ ಲೋಗೊ' ಹೊಂದಿರುವ ನೀಲಿ-ಬಣ್ಣದ ಕಾಲಿಪರ್‌ಗಳನ್ನು ಹೊಂದಿರುವ ಎಂ ಸ್ಪೋರ್ಟ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಇನ್ನು ಬಿಎಂಡಬ್ಲ್ಯು ತನ್ನ 2022ರ ಎಕ್ಸ್3 ಎಸ್‍ಯುವಿಯ ಎರಡು ಪೆಟ್ರೋಲ್ ಆವೃತ್ತಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯ ಡೀಸೆಲ್ ವೆರಿಯೆಂಟ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ಬಿಎಂಡಬ್ಲ್ಯು ಎಕ್ಸ್3 ಡೀಸೆಲ್ ವೆರಿಯೆಂಟ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.65.50 ಲಕ್ಷವಾಗಿದೆ. ಸ್ಥಳೀಯವಾಗಿ ಉತ್ಪಾದಿಸಲಾದ X3 xDrive20d ಐಷಾರಾಮಿ ವೆರಿಯೆಂಟ್ ರಿಫ್ರೆಶ್ ಮಾಡಿದ ಎಕ್ಸ್3 ಸರಣಿಯನ್ನು ಸೇರುತ್ತದ.

ಡೀಸೆಲ್ ವೆರಿಯೆಂಟ್ ನಲ್ಲಿ ಎಂಜಿನ್ ಬದಲಾವಣೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿಲ್ಲ, ನವೀಕರಿಸಿದ ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು ಹೆಚ್ಚು ಸ್ಪೋರ್ಟಿಯರ್ ಲುಕ್ ಅನ್ನು ಹೊಂದಿದೆ. 2022ರ ಬಿಎಂಡಬ್ಲ್ಯು ಎಕ್ಸ್3 ಡೀಸೆಲ್ ರೂಪಾಂತರದದಲ್ಲಿ 2.0-ಲೀಟರ್ ನಾಲ್ಕು-ಸಿಲಿಂಡರ್, ಟ್ವಿನ್ ಟರ್ಬೂ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಸ್‍ಯುವಿ ಕೇವಲ 7.9 ಸೆಕೆಂಡ್‌ಗಳಲ್ಲಿ ಗಂಟೆಗೆ 0 -100 ಕಿಮೀ ವೇಗವನ್ನು ಪಡೆಯುತ್ತದೆ ಇನ್ನು ಈ ಎಸ್‍ಯುವಿ 213 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಇನ್ನು ಹೊಸ ಬಿಎಂಡಬ್ಲ್ಯು ಎಕ್ಸ್7 ಎಸ್‌ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಜ್ ಜಿಎಲ್ಎಸ್ ಮತ್ತು ಆಡಿ ಕ್ಯೂ8 ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ. ಬಿಎಂಡಬ್ಲ್ಯು ಎಕ್ಸ್7 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.