ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತ ಪ್ರಕರಣ ಪ್ರಮಾಣವನ್ನು 50%ನಷ್ಟು ಕಡಿಮೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹೇಳಿದ್ದಾರೆ.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ರಸ್ತೆಗಳ ಗುಣಮಟ್ಟ ಹಾಗೂ ಸುರಕ್ಷತಾ ಕ್ರಮಗಳನ್ನು ಸುಧಾರಿಸುವ ಮೂಲಕ 2024ಕ್ಕಿಂತ ಮೊದಲು ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಹೊಂದಿದೆ ಎಂದು ಅವರು ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

2030ರ ವೇಳೆಗೆ ಇಲಾಖೆಯು ರಸ್ತೆ ಸುರಕ್ಷತಾ ಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ನಾವು ಅದನ್ನು ಜಾರಿಗೊಳಿಸಲು ವಿಳಂಬ ಮಾಡಿದರೆ, ಆ ವೇಳೆಗೆ 6-7 ಲಕ್ಷ ಜನರು ದೇಶದಲ್ಲಿ ಪ್ರಾಣ ಕಳೆದುಕೊಳ್ಳಲಿದ್ದಾರೆ.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ನಾವು ಈಗಾಗಲೇ ಹೊಸ ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದು, ಅವುಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದರು. ಕೈಗಾರಿಕಾ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ನಿತಿನ್ ಗಡ್ಕರಿ ಮಾತನಾಡುತ್ತಿದ್ದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಪ್ರತಿ ವರ್ಷ ದೇಶದಲ್ಲಿ ಸುಮಾರು 1.5 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. 2024ಕ್ಕಿಂತ ಮೊದಲು ರಸ್ತೆಗಳನ್ನು ಸುರಕ್ಷಿತಗೊಳಿಸುವುದು ನಮ್ಮ ಆಂತರಿಕ ಗುರಿಯಾಗಿದೆ. ಅಪಘಾತಗಳ ಸಂಖ್ಯೆಯನ್ನು 50%ನಷ್ಟು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಗಡ್ಕರಿ ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಈಗ ಭಾರತದಲ್ಲಿ ರಸ್ತೆ ಅಪಘಾತಗಳಿಂದ ಪ್ರತಿದಿನ 400ಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ವಾರ್ಷಿಕವಾಗಿ ಸಂಭವಿಸುವ ಐದು ಲಕ್ಷ ರಸ್ತೆ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಸಾವುಗಳು ದಾಖಲಾಗುತ್ತಿವೆ.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಈ ದಾಖಲೆ ಕಳೆದ ಏಳು ವರ್ಷಗಳಲ್ಲಿ ತಮ್ಮ ಇಲಾಖೆಯ ಅತಿ ದೊಡ್ಡ ವೈಫಲ್ಯವೆಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಂಖ್ಯೆಯನ್ನು ಕಡಿಮೆ ಮಾಡಲು ರಸ್ತೆ ಗುಣಮಟ್ಟ ಹಾಗೂ ಸುರಕ್ಷತಾ ಕ್ರಮಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಗಡ್ಕರಿ ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ರಸ್ತೆಗಳನ್ನು ಸುರಕ್ಷಿತವಾಗಿಸಲು ಸಾರಿಗೆ ಇಲಾಖೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಸುಮಾರು 50%ನಷ್ಟು ರಸ್ತೆ ಅಪಘಾತಗಳು ರಸ್ತೆಎಂಜಿನಿಯರಿಂಗ್ ಸಮಸ್ಯೆಗಳಿಂದ ಉಂಟಾಗುತ್ತಿವೆ ಎಂದು ಅವರು ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಎಂಜಿನಿಯರಿಂಗ್ (ರಸ್ತೆ ಹಾಗೂ ಆಟೋಮೊಬೈಲ್ ಎಂಜಿನಿಯರಿಂಗ್ ಸೇರಿದಂತೆ), ಆರ್ಥಿಕತೆ, ಜಾರಿ ಹಾಗೂ ಶಿಕ್ಷಣದ ನಾಲ್ಕು ಅಂಶಗಳನ್ನು ಪುನರ್ರಚಿಸುವ ಹಾಗೂ ಬಲಪಡಿಸುವ ಮೂಲಕ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ತಮ್ಮ ಇಲಾಖೆ ಶ್ರಮಿಸುತ್ತಿದೆ ಎಂದು ಗಡ್ಕರಿ ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವು ನೋವುಗಳನ್ನು ಕಡಿಮೆ ಮಾಡಲು ವಿಮಾ ಕಂಪನಿಗಳು ಸಾರಿಗೆ ಇಲಾಖೆಗೆ ಸಹಾಯ ಮಾಡಲು ಮುಂದೆ ಬರಬೇಕು ಎಂದು ನಿತಿನ್ ಗಡ್ಕರಿ ಹೇಳಿದರು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ವಿಮಾ ಕಂಪನಿಗಳು ಉಳಿದ ಜೀವಗಳ ನೇರ ಫಲಾನುಭವಿಗಳು ಎಂದು ಅವರು ಹೇಳಿದರು. ಈ ಕಾರಣಕ್ಕೆ ವಿಮಾ ಕಂಪನಿಗಳು ವಿವಿಧ ರಸ್ತೆ ಸುರಕ್ಷತಾ ಚಟುವಟಿಕೆಗಳಿಗೆ ತಮ್ಮ ಸಹಕಾರವನ್ನು ಹೆಚ್ಚಿಸಬೇಕು.

ರಸ್ತೆ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ಮುಂದಾದ ಸಾರಿಗೆ ಇಲಾಖೆ

ಆದರೆ ವಿಮಾ ಕಂಪನಿಗಳ ಸಹಕಾರ ತೀರಾ ಕಡಿಮೆಯಾಗಿದ್ದು, ಸರ್ಕಾರಿ ವಿಮಾ ಕಂಪನಿಗಳ ಸಹಕಾರ ಶೂನ್ಯವಾಗಿದೆ. ದೇಶಾದ್ಯಂತ 22 ಲಕ್ಷ ಚಾಲಕರ ಕೊರತೆ ಎದುರಾಗಿದೆ ಎಂದು ಗಡ್ಕರಿ ಹೇಳಿದರು. ಚಾಲಕರ ಕೊರತೆಯನ್ನು ನೀಗಿಸಲು ಹಿಂದುಳಿದ ಜಿಲ್ಲೆಗಳಲ್ಲಿ 2,000 ಚಾಲನಾ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
MORTH decides to reduce road accidents by 50 percent by 2025. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X