ಪೊಲೀಸರಿಗೆ ತಲೆನೋವು ತಂದಿಟ್ಟ ಸೀಜ್ ಆದ ವಾಹನಗಳು

ಭಾರತದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಮಾರ್ಚ್ 24ರಂದು ಲಾಕ್ ಡೌನ್ ಜಾರಿಗೊಳಿಸಲಾಯಿತು. ಲಾಕ್ ಡೌನ್ ಅವಧಿಯಲ್ಲಿ ಬಸ್ಸು, ಆಟೋ ಹಾಗೂ ಟ್ಯಾಕ್ಸಿ ಸೇರಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸೇವೆಗಳನ್ನು ನಿಷೇಧಿಸಲಾಯಿತು.

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಖಾಸಗಿ ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರದ ಮೇಲೂ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಉಲ್ಲಂಘಿಸಿ ಸಂಚರಿಸುವ ಅನಗತ್ಯವಾಗಿ ಚಲಿಸುವ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕಾರಣದಿಂದಾಗಿ ಲಾಕ್ ಡೌನ್ ಅವಧಿಯಲ್ಲಿ ರಸ್ತೆಗಳು ನಿರ್ಜನವಾಗಿದ್ದವು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಸಿದವು.

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಇದರಿಂದ ವಾಹನಗಳ ಸಂಚಾರವು ಸಹಜ ಸ್ಥಿತಿಗೆ ಮರಳಿತು. ಆದರೆ ಕರೋನಾ ವೈರಸ್ ಆರ್ಭಟವಾಗಿರುವ ಪ್ರದೇಶಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದೆ. ಇಂತಹ ಪ್ರದೇಶಗಳಲ್ಲಿ ಮುಂಬೈ ಸಹ ಸೇರಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಕರೋನಾ ವೈರಸ್ ನ ಹಾಟ್ ಸ್ಪಾಟ್ ಆಗಿ ಹೊರಹೊಮ್ಮಿರುವ ಮುಂಬೈನಲ್ಲಿ ಅನಗತ್ಯವಾಗಿ ಹೊರಬರುತ್ತಿರುವ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರು ವಿನಾ ಕಾರಣ ಯಾವುದೇ ವ್ಯಕ್ತಿ 2 ಕಿ.ಮಿಗಳಿಗಿಂತ ಹೆಚ್ಚು ದೂರ ಸಂಚರಿಸುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತಂದಿದ್ದರು.

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಈ ನಿಯಮವನ್ನು ಉಲ್ಲಂಘಿಸಿರುವವರ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ಆದರೆ ಕಚೇರಿಗೆ ತೆರಳುವವರಿಗೆ ಹಾಗೂ ಅಗತ್ಯ ಸೇವೆಗಳನ್ನು ನಿಡುವವರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಮುಂಬೈ ಪೊಲೀಸರು ಈ ನಿಯಮ ಉಲ್ಲಂಘಿಸಿದವರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಕೇವಲ ನಾಲ್ಕು ದಿನಗಳಲ್ಲಿ ಮುಂಬೈ ಪೊಲೀಸರು 34 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಮುಂಬೈ ಪೊಲೀಸರಿಗೆ ಈಗ ಹೊಸ ತಲೆನೋವು ಎದುರಾಗಿದೆ.

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ವಶಪಡಿಸಿಕೊಂಡ ವಾಹನಗಳ ನಿಲುಗಡೆಗೆ ಸಾಕಷ್ಟು ಸ್ಥಳಾವಕಾಶವಿಲ್ಲದಿರುವುದೇ ಇದಕ್ಕೆ ಕಾರಣ. ಪೊಲೀಸರು ವಶಪಡಿಸಿಕೊಂಡಿರುವ ವಾಹನಗಳಲ್ಲಿ ಐಷಾರಾಮಿ ವಾಹನಗಳು ಸೇರಿವೆ. ಈ ವಾಹನಗಳು ಕಳ್ಳತನವಾಗಬಹುದೆಂಬ ಭಯದಿಂದ ಪೊಲೀಸರು ಆ ವಾಹನಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸಲು ಮುಂದಾಗಿದ್ದಾರೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಈ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡ ವಾಹನಗಳು ಕಳ್ಳತನವಾಗುವ ಅಥವಾ ಹಾನಿಯಾಗುವ ಸಾಧ್ಯತೆಗಳಿವೆ. ವಾಹನ ಮಾಲೀಕರು ಅವುಗಳ ಸ್ಥಿತಿಯ ಬಗ್ಗೆ ದೂರು ನೀಡುವುದು ನಮಗೆ ಇಷ್ಟವಿಲ್ಲ. ಈ ಕಾರಣಕ್ಕೆ ಅವುಗಳನ್ನು ಅವುಗಳ ಮಾಲೀಕರಿಗೆ ಹಿಂದಿರುಗಿಸಲಾಗುವುದು ಎಂದು ಹೇಳಿದ್ದಾರೆ.

ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳನ್ನು ಸುಲಭವಾಗಿ ಪಡೆಯಬಹುದು ಎಂಬ ಕಾರಣಕ್ಕೆ ಅನಗತ್ಯವಾಗಿ ಮನೆಯಿಂದ ಹೊರ ಬರದಿರಿ. ಪೊಲೀಸರ ಕ್ರಮಗಳು ಆಯಾ ಪ್ರದೇಶಗಳಿಗೆ ತಕ್ಕಂತೆ ಬದಲಾಗಬಹುದು. ಕರೋನಾ ಸಮಸ್ಯೆ ಮುಗಿಯುವವರೆಗೂ ಅನಗತ್ಯ ಪ್ರಯಾಣವನ್ನು ಕೈಗೊಳ್ಳದಿರುವುದು ಒಳಿತು.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
Mumbai police returning seized vehicles to owners. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X