ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಕರೋನಾ ವೈರಸ್ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶಾದ್ಯಂತ ಪ್ರತಿದಿನ 3 ಲಕ್ಷದಿಂದ 4 ಲಕ್ಷ ಜನರಿಗೆ ಹೊಸದಾಗಿ ಸೋಂಕು ತಗಲುತ್ತಿದೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಒಂದೇ ದಿನ 30,000ಕ್ಕೂ ಹೆಚ್ಚು ಜನರು ಕರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಇದರಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ವೈದ್ಯಕೀಯ ಸಲಕರಣೆಗಳ ಕೊರತೆ ಎದುರಾಗಿದೆ. ಇದರ ಜೊತೆಗೆ ಆಂಬುಲೆನ್ಸ್‌ಗಳ ಕೊರತೆಯೂ ಹೆಚ್ಚುತ್ತಿದೆ. ಚೆನ್ನೈ ನಗರದ ಕೆಲವೆಡೆ ಆಂಬುಲೆನ್ಸ್‌ಗಳಿಗೆ ಕರೆ ಮಾಡಿದರೂ ಅವುಗಳ ಸೇವೆ ದೊರೆಯುತ್ತಿಲ್ಲವೆಂಬ ದೂರುಗಳು ಕೇಳಿಬಂದಿವೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಆಂಬುಲೆನ್ಸ್‌ಗಳ ಕೊರತೆಯನ್ನು ಪರಿಹರಿಸಲು ಚೆನ್ನೈ ಮಹಾನಗರ ಪಾಲಿಕೆ ಮುಂದಾಗಿದೆ. ಹೊಸದಾಗಿ ಚೆನ್ನೈ ಮಹಾನಗರದ ಆಯುಕ್ತರಾಗಿ ನೇಮಕಗೊಂಡಿರುವ ಗಗನ್ ದೀಪ್ ಸಿಂಗ್ ಬೇಡಿರವರು ಕಾರುಗಳನ್ನು ಆಂಬ್ಯುಲೆನ್ಸ್‌ಗಳಾಗಿ ಪರಿವರ್ತಿಸಲು ಆದೇಶ ಹೊರಡಿಸಿದ್ದಾರೆ.

MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಸೋಂಕಿತರನ್ನು ಸಾಗಿಸಲು ಆಂಬುಲೆನ್ಸ್‌ಗಳ ಕೊರತೆ ಎದುರಾಗಿರುವುದನ್ನು ಅರಿತಿರುವ ಅವರು ಈ ಆದೇಶ ಹೊರಡಿಸಿದ್ದಾರೆ. ನಗರದ ಕೆಲವು ಪ್ರಮುಖ ಆಸ್ಪತ್ರೆಗಳು ಅಸಮರ್ಪಕ ಹಾಸಿಗೆಗಳನ್ನು ಹೊಂದಿವೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಇದರಿಂದಾಗಿ ಆಂಬುಲೆನ್ಸ್‌ಗಳು ರೋಗಿಗಳೊಂದಿಗೆ ಆಸ್ಪತ್ರೆಯ ಗೇಟ್‌ಗಳಲ್ಲಿ ಗಂಟೆಗಟ್ಟಲೇ ಕಾಯುವಂತಾಗಿದೆ. ಇದರಿಂದ ಹಲವು ಆಂಬ್ಯುಲೆನ್ಸ್‌ಗಳು ಒಂದೇ ಸ್ಥಳದಲ್ಲಿ ಸಿಕ್ಕಿಹಾಕಿಕೊಳ್ಳುವಂತಾಗಿದೆ.

MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ತಮಿಳುನಾಡಿನ ಹಲವು ಭಾಗಗಳಲ್ಲಿ ಆಂಬ್ಯುಲೆನ್ಸ್ ಕೊರತೆ ಎದುರಾಗಲು ಇದು ಪ್ರಮುಖ ಕಾರಣವಾಗಿದೆ. ಇದಕ್ಕೆ ಪರಿಹಾರ ನೀಡಲು ಮಹಾನಗರ ಪಾಲಿಕೆ ಆಯುಕ್ತರು ಕಾರುಗಳನ್ನು ಆಂಬುಲೆನ್ಸ್‌ಗಳಾಗಿ ಬದಲಿಸಲು ಸೂಚಿಸಿದ್ದಾರೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಇದುವರೆಗೆ ಸುಮಾರು 250 ಕಾರುಗಳನ್ನು ಆಂಬ್ಯುಲೆನ್ಸ್‌ಗಳಾಗಿ ಬದಲಿಸಲಾಗಿದೆ ಎಂದು ವರದಿಯಾಗಿದೆ. ಈ ಆಂಬುಲೆನ್ಸ್‌ಗಳು ಸರ್ಕಾರಿ ವೈದ್ಯಕೀಯ ವಿಶೇಷ ತುರ್ತು ವಾಹನ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಈ ತಾತ್ಕಾಲಿಕ ವಿಶೇಷ ಆಂಬ್ಯುಲೆನ್ಸ್‌ಗಳಲ್ಲಿ ವೆಂಟಿಲೇಟರ್‌, ಆಕ್ಸಿಜನ್ ಸಿಲಿಂಡರ್‌ ಸೇರಿದಂತೆ ಪ್ರಮುಖ ವೈದ್ಯಕೀಯ ಉಪಕರಣಗಳನ್ನು ಇಡಲಾಗಿದೆ. ಈ ಮೂಲಕ ಈ ಆಂಬ್ಯುಲೆನ್ಸ್‌ಗಳು, ಆಂಬುಲೆನ್ಸ್‌ಗಳಿಗೆ ಸಮಾನಾಂತರವಾಗಿ ಕಾರ್ಯನಿರ್ವಹಿಸುತ್ತವೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಆಂಬುಲೆನ್ಸ್‌ಗಳ ಕೊರತೆಯನ್ನು ಕಡಿಮೆ ಮಾಡಲು ಈ ಆಂಬ್ಯುಲೆನ್ಸ್‌ಗಳನ್ನು 15 ವಲಯಗಳಲ್ಲಿ ನಿಯೋಜಿಸಲಾಗಿದೆ. ಈ ಆಂಬ್ಯುಲೆನ್ಸ್‌ಗಳಲ್ಲಿ ಕೆಲವು ಸಣ್ಣ ಪುಟ್ಟಬದಲಾವಣೆಗಳನ್ನು ಮಾಡಲಾಗಿದೆ.

MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಈ ಆಂಬ್ಯುಲೆನ್ಸ್‌ಗಳಲ್ಲಿ ರೋಗಿಯು ಮಲಗುವ ಆಸನವನ್ನು ಮಡಚಲಾಗುತ್ತದೆ. ಆಕ್ಸಿಜನ್ ಸಿಲಿಂಡರ್'ನಂತಹ ಪ್ರಮುಖ ವೈದ್ಯಕೀಯ ಸಾಧನಗಳನ್ನು ಅದರ ಮೇಲೆ ಇರಿಸಲಾಗಿದೆ. ಆಂಬ್ಯುಲೆನ್ಸ್‌ಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಡೆ ಈ ವಾಹನಗಳನ್ನು ನಿಯೋಜಿಸಲಾಗಿದೆ.

ವಿಶೇಷ ಕಾರ್ ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತ

ಮಧ್ಯಪ್ರದೇಶದ ಯುವ ಉದ್ಯಮಿಯೊಬ್ಬರು ಇತ್ತೀಚೆಗೆ ತಮ್ಮ ಬಳಿ ಇದ್ದ ಎಲ್ಲಾ ಕಾರುಗಳನ್ನು ಆಂಬುಲೆನ್ಸ್‌ಗಳಾಗಿ ಬದಲಿಸಿ ಬಡ ಜನರಿಗೆ ನೆರವಾಗುತ್ತಿದ್ದಾರೆ ಎಂಬುದು ಗಮನಾರ್ಹ.

Most Read Articles

Kannada
English summary
Municipal Commissioner starts special car ambulance service in Chennai. Read in Kannada.
Story first published: Friday, May 14, 2021, 17:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X