Just In
- 46 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 47 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- News
ಸುಳ್ಳು ಹೇಳಿದ್ದು ಸಾಬೀತಾದರೆ ಮೋದಿ ಬಸ್ಕಿ ಹೊಡೆಯಬೇಕು; ಮಮತಾ ಬ್ಯಾನರ್ಜಿ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Movies
'ಅಮಿತಾಭ್ ಮಗಳ ಪಾತ್ರ ಮಾಡ್ತಿದ್ದೇನೆ' ಎಂದಾಗ ರಶ್ಮಿಕಾ ಪೋಷಕರ ಪ್ರತಿಕ್ರಿಯೆ ಹೇಗಿತ್ತು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರಿನ ಟೈರ್ ಬದಲಿಸಿ ಗಮನ ಸೆಳೆದ ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಸರಳ ಸಜ್ಜನಿಕೆಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಆಡಳಿತ ವೈಖರಿ ಮತ್ತು ಸರಳ ವ್ಯಕ್ತಿತ್ವದ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ತಮ್ಮ ಕಾರಿನ ಟೈರ್ ಬದಲಾಯಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಪಂಚರ್ ಆಗಿತ್ತು. ಹೀಗಾಗಿ ತಾವೇ ಕಾರಿನ ಟೈರ್ ಕಳಚಿ ಬದಲಾಯಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆದರೆ ಕೆಲವರು ಇದು ರೋಹಿಣಿ ಸಿಂಧೂರಿಯೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕಾರಿನ ಟೈರ್ ಕಳಚುವ ವೇಳೆ ಸಾರ್ವಜನಿಕರು ವೀಡಿಯೋ ಮಾಡಿದ್ದಾರೆ. ವೀಡಿಯೋದಲ್ಲಿ ಸಾರ್ವಜನಿಕರು ತಾವು ರೋಹಿಣಿ ಸಿಂಧೂರಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ನಕ್ಕು ಸುಮ್ಮನಾಗಿದ್ದಾರೆ. ಆದರೆ ಡಿಸಿ ರೋಹಿಣಿ ಸಿಂಧೂರಿ, ಅವರು ಕಾರಿನ ಟೈಯರ್ ಬದಲಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡಿದೆ.
MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸರಳತೆ ಹಲವರು ಮೆಚ್ಚು ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಕಾರಿನ ಸೈಡ್ ಪ್ರೊಫೈಲ್ ಮಾತ್ರ ಕಾಣಿಸುತ್ತದೆ. ಅದರಂತೆ ಇದು ಟೊಯೊಟಾ ಫಾರ್ಚೂನರ್ ಎಸ್ಯುವಿ ಎಂದು ನಿರೀಕ್ಷಿಸುತ್ತೇವೆ. ಟೊಯೊಟಾ ಫಾರ್ಚೂನರ್ ಬಾರಿ ಗಾತ್ರದ ಎಸ್ಯುವಿಯಾಗಿದೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್
ಟೊಯೊಟಾ ಫಾರ್ಚೂನರ್ ಭಾರತದಲ್ಲಿ ಜನಪ್ರಿಯ ಎಸ್ಯುವಿಗಳಲ್ಲಿ ಒಂದಾಗಿದೆ. ಈ ಬೃಹತ್ ಆಕಾರದ ಎಸ್ಯುವಿಯ ಟೈರ್ ಬದಲಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಚ್ಚರಿ ಮೂಡಿಸಿದ್ದಾರೆ.

ಕೆಲವು ಉನ್ನತ ಅಧಿಕಾರಿಗಳು ತಮ್ಮ ವೈಯಕ್ತಿಕ ಕೆಲಸಗಳಿಗೂ ಅಧಿಕಾರಿಗಳನ್ನು ಬಳಿಸಿಕೊಂಡ ಉದಾಹರಣೆಗಳಿವೆ. ಆದರೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಉನ್ನತ ಅಧಿಕಾರಿಯಾಗಿ ಯಾವುದೇ ರೀತಿ ಕೀಳರಿಮೆ ಅಥವಾ ಸಂಕೋಚವಿಲ್ಲದೆ ತಮ್ಮ ಕಾರಿನ ಟೈರ್ ಅನ್ನು ತಾವೇ ಬದಲಿಸಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಆನೇಕ ಕಡೆ ಕೆಲಸ ನಿರ್ವಹಿಸಿದ ಅನುಭವವಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ರೋಹಿಣಿ ಸಿಂಧೂರಿ ಮೈಸೂರಿಗೆ ವರ್ಗಾವಣೆಯಾಗಿದ್ದರು. ಕೊರೊನಾ ನಿಯಂತ್ರಿಸುವಲ್ಲಿಯೂ ರೋಹಿಣಿ ಸಿಂಧೂರಿ ಅವರು ಸಾಕಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇನ್ನು ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಾಠ ಮಾಡಿ ಅವರು ಗಮನ ಸೆಳೆದಿದ್ದರು.