Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫ್ಲೈಓವರ್ ಮೇಲೆ ಅಪಾಯಕಾರಿ ಸ್ಟಂಟ್ ಮಾಡಿದ ಕಾರುಗಳನ್ನು ವಶಕ್ಕೆ ಪಡೆದ ಪೊಲೀಸರು
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ಸ್ಟಂಟ್'ಗಳನ್ನು ಪ್ರದರ್ಶಿಸುವುದು ಆ ವಾಹನದ ಚಾಲಕನಿಗೆ ಮಾತ್ರವಲ್ಲದೇ ಆ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುವ ಇತರರಿಗೂ ಅಪಾಯವನ್ನುಂಟು ಮಾಡುತ್ತದೆ. ಎಷ್ಟೇ ಕಟ್ಟು ನಿಟ್ಟಿನ ನಿಯಮಗಳಿದ್ದರೂ ಜನರು ರಸ್ತೆಗಳಲ್ಲಿ ಅಪಾಯಕಾರಿ ಸ್ಟಂಟ್'ಗಳನ್ನು ಪ್ರದರ್ಶಿಸುವುದನ್ನು ಮುಂದುವರೆಸಿದ್ದಾರೆ.

ಇತ್ತೀಚಿಗೆ 4 ಕಾರುಗಳು ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್ ಮಾಡುತ್ತಿದ್ದ ವೀಡಿಯೊವೊಂದು ಬಿಡುಗಡೆಯಾಗಿದೆ. ಈ ವೀಡಿಯೊವನ್ನು ನಾಗ್ಪುರ್ ಇನ್ಫೋ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಈ ಘಟನೆ ನಡೆದಿರುವುದು ಇತ್ತೀಚೆಗೆ ಸಾರ್ವಜನಿಕರಿಗಾಗಿ ಉದ್ಘಾಟನೆಗೊಂಡ ಮಹಾರಾಷ್ಟ್ರದ ನಾಗ್ಪುರ್'ನ ವಂಜರಿ ನಗರ ಫ್ಲೈಓವರ್ ಮೇಲೆ.

ಅಪಾಯಕಾರಿ ಸ್ಟಂಟ್‌ನಲ್ಲಿ ಭಾಗಿಯಾಗಿದ್ದ ನಾಲ್ಕು ಕಾರುಗಳನ್ನು ನಾಗ್ಪುರ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ ಎಂದು ತಿಳಿದು ಬಂದಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಕಾರಿನಲ್ಲಿದ್ದ ಯುವಕರು ಅಜಾಗರೂಕತೆಯಿಂದ ಕಾರುಗಳನ್ನು ಚಾಲನೆ ಮಾಡಿದ್ದಾರೆ. ಇದು ಅವರಿಗೆ ಮಾತ್ರವಲ್ಲದೆ ಸಾರ್ವಜನಿಕರಿಗೂ ಹಾನಿಯನ್ನುಂಟುಮಾಡುತ್ತದೆ. ಈ ದೇಶದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಅಪಾಯಕಾರಿ ಸ್ಟಂಟ್‌ನಲ್ಲಿ ಭಾಗಿಯಾಗಿದ್ದ ಯುವಕರನ್ನು ಸೆರೆಹಿಡಿಯಲು ನೆರವಾಗಿವೆ.

ಈ ಸ್ಟಂಟ್‌ನಲ್ಲಿ ಹೋಂಡಾ ಸಿಟಿ, ಹ್ಯುಂಡೈ ವರ್ನಾ, ಹ್ಯುಂಡೈ ಕ್ರೆಟಾ ಹಾಗೂ ಶೆವ್ರೊಲೆಟ್ ಕ್ರೂಜ್ ಎಂಬ ನಾಲ್ಕು ಕಾರುಗಳು ಭಾಗಿಯಾಗಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು. ಈ ನಾಲ್ಕು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತದ ರಾಷ್ಟ್ರ ಧ್ವಜವನ್ನು ಹೊಂದಿರುವ ಕಾರು ಸ್ಟಂಟ್‌ನಲ್ಲಿ ಭಾಗಿಯಾಗಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಅಪಾಯಕಾರಿಯಾಗಿ ವಾಹನ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಈ ಕಾರುಗಳ ಮಾಲೀಕರಿಗೆ ಮೋಟಾರು ವಾಹನ ಕಾಯ್ದೆಯಡಿದಂಡ ವಿಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಈ ಕಾರುಗಳ ಮಾಲೀಕರಿಗೆ ಫ್ಯಾನ್ಸಿ ನಂಬರ್ ಪ್ಲೇಟ್‌ಗಳ ಅಳವಡಿಕೆ, ಅಗತ್ಯ ದಾಖಲೆಗಳಿಲ್ಲದೆ ವಾಹನ ಚಾಲನೆ ಮಾಡುವುದು, ಪರವಾನಗಿ ಇಲ್ಲದೆ ವಾಹನ ಚಾಲನೆ ಮಾಡಿರುವುದು, ವಾಹನಗಳನ್ನು ಮಾರ್ಪಾಡು ಮಾಡಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ದಂಡ ವಿಧಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಪೊಲೀಸರು ಈ ಕಾರುಗಳ ಮಾಲೀಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ. ಈ ಕಾರುಗಳ ಮಾಲೀಕರು 19 - 25 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಈ ಕಾರಣಕ್ಕೆ ಪೊಲೀಸರು ಯುವಕರ ಪೋಷಕರನ್ನು ಕೌನ್ಸೆಲಿಂಗ್‌ಗಾಗಿ ಕರೆದಿದ್ದಾರೆ.

ಸಾರ್ವಜನಿಕ ರಸ್ತೆಗಳಲ್ಲಿ ಸ್ಟಂಟ್'ಗಳಲ್ಲಿ ತೊಡಗುವ ದ್ವಿಚಕ್ರ ವಾಹನಗಳ ವಿರುದ್ಧ ಪೊಲೀಸರು ಶೀಘ್ರದಲ್ಲೇ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಸಾರ್ವಜನಿಕ ರಸ್ತೆಗಳಲ್ಲಿ ಸ್ಟಂಟ್'ಗಳಲ್ಲಿ ತೊಡಗುವ ಯುವಕರು ಇನ್ನಾದರೂ ಅದರಿಂದಾಗುವ ಅಪಾಯಗಳನ್ನು ಅರಿತುಕೊಳ್ಳಬೇಕು.