ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

Written By:

ಹೈದರಾಬಾದ್‌ನಲ್ಲಿ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಬಹುನಿರೀಕ್ಷಿತ ಮೊದಲ ಹಂತದ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಮಿಯಾಪುರ್‌ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮೆಟ್ರೋ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಪ್ರಧಾನಿ ಮೋದಿ ಅವರಿಂದ ಉದ್ಘಾಟಿತವಾದ ಈ ಮೆಟ್ರೋ ರೈಲು, ಹೈದರಾಬಾದ್‌ ನಗರದ ಬಹು ವರ್ಷಗಳ ನಿರೀಕ್ಷೆಯಾಗಿತ್ತು ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಈಗ ಉದ್ಘಾಟಿತವಾಗಿರುವ ಹೈದರಾಬಾದ್‌ನ ಮೊದಲ ಹಂತವು 30 ಕಿ.ಮೀ. ದೂರವನ್ನು ಒಳಗೊಂಡಿದೆ. ಇದರಲ್ಲಿ 24 ಸ್ಟೇಶನ್‌ಗಳಿವೆ ಹಾಗು ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಸಾರ್ವಜನಿಕ ಸೇವೆಗೆ ಮೆಟ್ರೋ ರೈಲು ಅಣಿಯಾಗಲಿದೆ.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಈ ಮೆಟ್ರೋ ರೈಲು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ರೈಲು ಸಂಚರಿಸಲಿದೆ. ಜನರ ಆವಶ್ಯಕತೆಯನ್ನು ಪರಿಗಣಿಸಿ ಬೆಳಗ್ಗೆ 5.30ರಿಂದ ರಾತ್ರಿ 11ರ ವರೆಗೂ ಓಡಾಟ ನಡೆಸುವ ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನರೇಂದ್ರ ಮೋದಿ ಜತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಪಾಲ ಇಎಸ್‌ಎಲ್‌ ನರಸಿಂಹನ್‌, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌, ಕೇಂದ್ರ ನಗರಾಭಿವೃದ್ಧಿ ಸಚಿವ ಹರ್‌ದೀಪ್‌ ಸಿಂಗ್‌ ಪುರಿ, ತೆಲಂಗಾಣ ಐಟಿ ಸಚಿವ ಕೆ.ಟಿ. ರಾಮರಾವ್‌ ಹಾಗೂ ರಾಜ್ಯ ಬಿಜೆಪಿ ಘಟಕ ಕೆ. ಲಕ್ಷ್ಮಣ್‌ ಹಾಜರಿದ್ದರು.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

2012ರ ಜುಲೈನಲ್ಲಿ ಮೆಟ್ರೋ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಇದೇ ಜುಲೈನಲ್ಲೇ ಮೆಟ್ರೋ ರೈಲು ಸಂಚಾರ ನಡೆಸಬೇಕಿತ್ತು. ಆದರೆ, ಭೂ ಸ್ವಾಧೀನ ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ವಿಳಂಬವಾಗಿದೆ.

ಹೈದರಾಬಾದ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಸದ್ಯ ಮೊದಲ ಹಂತದಲ್ಲಿ ನಗರದ ನಾಗೋಲ್‌ನಿಂದ ಮಿಯಾಪುರ್‌ವರೆಗೂ ಮೆಟ್ರೋ ಸಂಚಾರ ನಡೆಸಲಿದೆ. ಮುಂದಿನ ದಿನಗಳಲ್ಲಿ ಮೆಟ್ರೋ ಸಂಚಾರವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ.

Read more on metro ಮೆಟ್ರೋ
English summary
Narendra Modi launches first phase of metro train in Hyderabad.
Story first published: Tuesday, November 28, 2017, 20:25 [IST]

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark