Expressway: ಸದ್ದಿಲ್ಲದೇ ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಸಿದ್ಧತೆ.. ತ್ವರಿತ ಪ್ರಯಾಣ!
ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಕಾಮಗಾರಿ ವೇಗವಾಗಿ ನಡೆಯುತ್ತಿದೆ. 2025ರಲ್ಲಿ ಈ ಹೆದ್ದಾರಿ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ. ಸದ್ಯ, ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ (Bengaluru - Mangaluru Expressway) ನಿರ್ಮಾಣಕ್ಕೆ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಮುಂದಾಗಿದೆ. ಈ ಸಂಬಂಧ ವಿಸ್ತೃತವಾದ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸಲು ಟೆಂಡರ್ ಕರೆದಿದ್ದು, 9 ಕಂಪನಿಗಳು ಬಿಡ್ ಸಲ್ಲಿಸಿವೆ. ಹೊಸ ಎಕ್ಸ್‌ಪ್ರೆಸ್‌ವೇ ಹೇಗಿರಲಿದೆ ಎಂಬುದರ ಕುರಿತಂತೆ ಸಂಕ್ಷಿಪ್ತ ವಿವರವನ್ನು ತಿಳಿಯೋಣ.
ಕೇಂದ್ರ ಸರ್ಕಾರ ಬೆಂಗಳೂರು ಹಾಗೂ ಮಂಗಳೂರು ನಡುವೆ 335 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲು ಉದ್ದೇಶಿಸಿದೆ. ಈ ಹೆದ್ದಾರಿ 4 ರಿಂದ 6 ಪಥಗಳನ್ನು ಹೊಂದಿರಲಿದ್ದು, ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಮಾದರಿಯಲ್ಲಿಯೇ ಇದರಲ್ಲಿದೆ. ಜೊತೆಗೆ ತುಮಕೂರು (Tumakuru) ಹಾಗೂ ಹಾಸನ (Hassan) ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ವಾಹನ ಸವಾರರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದೆ. ಪ್ರಯಾಣದ ಅವಧಿಯು ಗಣನೀಯವಾಗಿ ಇಳಿಕೆಯಾಗಲಿದೆ ಎನ್ನಲಾಗಿದೆ. ಸದ್ಯ, ಬೆಂಗಳೂರಿನಿಂದ ಮಂಗಳೂರು ತಲುಪಲು 7 ರಿಂದ 8 ಗಂಟೆ ಸಮಯಾವಕಾಶ ಬೇಕಾಗುತ್ತದೆ. ಹೊಸ ರಸ್ತೆ ನಿರ್ಮಾಣದಿಂದ ಮತ್ತಷ್ಟು ತ್ವರಿತವಾಗಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.
ಹೊಸ ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, 2028ರ ಮೊದಲೇ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸಗಳು ಪ್ರಾರಂಭವಾಗಲಿದ್ದು, ಆ ನಂತರ 2-3 ವರ್ಷಗಳಲ್ಲಿ ಕಾಮಗಾರಿ ಮುಗಿದು ವಾಹನ ಸಂಚಾರಕ್ಕೂ ಅನುವು ಮಾಡಿಕೊಂಡಬಹುದು ಎಂದು ಹೇಳಲಾಗಿದೆ.

ಈ ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಕರಾವಳಿ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾಗದಲ್ಲಿ ಪ್ರವಾಸೋದ್ಯಮ, ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ವೃದ್ಧಿಯಾಗಲಿದೆ. ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಹೊಂದಲು ಸಾಧ್ಯವಾಗಲಿದೆ. ಇದರೊಟ್ಟಿಗೆ ರಿಯಲ್ ಎಸ್ಟೇಟ್ ಉದ್ಯಮ ಕೂಡ ವ್ಯಾಪಕವಾಗಿ ಬೆಳವಣಿಗೆಯಾಗಲಿದೆ.
ಅತಿ ಶೀಘ್ರದಲ್ಲೇ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಕೂಡ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ. ಇದು 262 ಕಿಲೋಮೀಟರ್ ಉದ್ದವಿದ್ದು, 4 ಪಥಗಳಲ್ಲಿ ನಿರ್ಮಾಣವಾಗುತ್ತಿದೆ. ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿಗೂ ಸಂಪರ್ಕ ಕೊಂಡಿಯಾಗಿದೆ. ನೂತನ ಹೆದ್ದಾರಿಯಿಂದ ಬೆಂಗಳೂರಿಂದ ಚೆನ್ನೈ ಮಹಾನಗರವನ್ನು ಕೇವಲ 2 ಗಂಟೆಗಳಲ್ಲಿ ತಲುಪಬಹುದು ಎನ್ನಲಾಗಿದೆ.
ಇನ್ನು, ದಕ್ಷಿಣ ಭಾರತದ ಮೊದಲ ಎಕ್ಸ್‌ಪ್ರೆಸ್‌ವೇ ಬೆಂಗಳೂರು - ಮೈಸೂರು ಹೆದ್ದಾರಿಯನ್ನು 2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದರು. 119 ಕಿಲೋಮೀಟರ್ ಉದ್ದದ ಈ ದಶಪಥ ಹೆದ್ದಾರಿ, 6 ಪಥದ ಎಕ್ಸ್‌ಪ್ರೆಸ್‌ವೇ ಮತ್ತು ತಲಾ 2 ಪಥದ ಸರ್ವಿಸ್ ರಸ್ತೆ ಒಳಗೊಂಡಿದೆ. ಈ ಎಕ್ಸ್‌ಪ್ರೆಸ್‌ವೇಯಿಂದ ಬೆಂಗಳೂರಿನಿಂದ ಸಾಂಸ್ಕೃತಿಕ ನಗರಿ ಮೈಸೂರನ್ನು ಆದಷ್ಟು ಬೇಗ ತಲುಪಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications