Just In
- 3 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 37 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 45 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 55 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಭಾರತದಲ್ಲಿ ವಾಯುಮಾಲಿನ್ಯ ಪ್ರಮಾಣವು ತೀವ್ರವಾಗಿ ಹೆಚ್ಚಲು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಪ್ರಮುಖ ಕಾರಣವಾಗಿವೆ. ಅದರಲ್ಲೂ ವಿಶೇಷವಾಗಿ ಹಳೆಯ ಡೀಸೆಲ್ ವಾಹನಗಳಿಂದ ಪರಿಸರವು ಹದಗೆಡುತ್ತಿದೆ.
ಈ ಕಾರಣಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಪೆಟ್ರೋಲ್, ಡೀಸೆಲ್ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ. ಹಂತ ಹಂತವಾಗಿ ಪೆಟ್ರೋಲ್, ಡೀಸೆಲ್ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳನ್ನು ಪೂರ್ತಿಯಾಗಿ ಅಳವಡಿಸಿಕೊಳ್ಳುವುದು ವಿಶ್ವದ ವಿವಿಧ ದೇಶಗಳ ಯೋಜನೆಯಾಗಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ದೆಹಲಿ ಸೇರಿದಂತೆ ಭಾರತದ ಹಲವು ನಗರಗಳು ವಾಯುಮಾಲಿನ್ಯದಿಂದ ಬಳಲುತ್ತಿವೆ.
ಕಚ್ಚಾ ತೈಲ ಆಮದನ್ನು ಕಡಿಮೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡುತ್ತಿವೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
ಈ ನಿಟ್ಟಿನಲ್ಲಿ ಬಿಹಾರ ರಾಜ್ಯ ಸರ್ಕಾರವು ಕೈಗೊಂಡ ಕ್ರಮ ಎಲ್ಲರ ಗಮನ ಸೆಳೆಯುತ್ತಿದೆ. ಬಿಹಾರ ಸರ್ಕಾರವು ಗಯಾ ಹಾಗೂ ಮುಜಾಫರ್ ಪುರ ನಗರಗಳಲ್ಲಿ ಹೊಸ ಡೀಸೆಲ್ ವಾಹನಗಳ ನೋಂದಣಿಯನ್ನು ನಿಷೇಧಿಸಿದೆ.
ಈ ಎರಡೂ ನಗರಗಳಲ್ಲಿನ ವಾಯುಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿರುವ ಸುಶೀಲ್ ಕುಮಾರ್ ಮೋದಿ ಸೆಪ್ಟೆಂಬರ್ 23ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಈ ಎರಡು ನಗರಗಳಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳ ರಿಜಿಸ್ಟ್ರೇಷನ್ ಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಹೊಸ ಪೆಟ್ರೋಲ್ ವಾಹನಗಳನ್ನು ರಿಜಿಸ್ಟರ್ ಮಾಡಲಾಗುವುದೇ ಎಂಬ ಮಾಹಿತಿ ನೀಡಿಲ್ಲ.
ಇಟಿ ಆಟೋ ಈ ಬಗ್ಗೆ ವರದಿ ಪ್ರಕಟಿಸಿದೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವಾಯುಮಾಲಿನ್ಯದ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲು ರಾಜ್ಯ ಸರ್ಕಾರವು ದೆಹಲಿ ಐಐಟಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಮುಂಬರುವ ದಿನಗಳಲ್ಲಿ ಭಾರತದಲ್ಲಿರುವ ಪೆಟ್ರೋಲ್, ಡೀಸೆಲ್ ವಾಹನಗಳು, ವಿಶೇಷವಾಗಿ ಹಳೆಯ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ.
ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ವಾಹನಗಳ ರಿಜಿಸ್ಟ್ರೇಷನ್ ಕುರಿತು ಯೋಜನೆಗಳನ್ನು ರೂಪಿಸಲು ಆರಂಭಿಸಿವೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಇದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುವುದು ಖಚಿತ. ಸದ್ಯಕ್ಕೆ ಕೇಂದ್ರ ಸರ್ಕಾರ ಹಾಗೂ ದೆಹಲಿ, ಗುಜರಾತ್ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಸಬ್ಸಿಡಿ ನೀಡುತ್ತಿವೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.