ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಭಾರತದಲ್ಲಿ ವಾಯುಮಾಲಿನ್ಯ ಪ್ರಮಾಣವು ತೀವ್ರವಾಗಿ ಹೆಚ್ಚಲು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಪ್ರಮುಖ ಕಾರಣವಾಗಿವೆ. ಅದರಲ್ಲೂ ವಿಶೇಷವಾಗಿ ಹಳೆಯ ಡೀಸೆಲ್ ವಾಹನಗಳಿಂದ ಪರಿಸರವು ಹದಗೆಡುತ್ತಿದೆ.

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರಣಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಪೆಟ್ರೋಲ್, ಡೀಸೆಲ್ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ. ಹಂತ ಹಂತವಾಗಿ ಪೆಟ್ರೋಲ್, ಡೀಸೆಲ್ ವಾಹನಗಳ ಬದಲು ಎಲೆಕ್ಟ್ರಿಕ್ ವಾಹನಗಳನ್ನು ಪೂರ್ತಿಯಾಗಿ ಅಳವಡಿಸಿಕೊಳ್ಳುವುದು ವಿಶ್ವದ ವಿವಿಧ ದೇಶಗಳ ಯೋಜನೆಯಾಗಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ದೆಹಲಿ ಸೇರಿದಂತೆ ಭಾರತದ ಹಲವು ನಗರಗಳು ವಾಯುಮಾಲಿನ್ಯದಿಂದ ಬಳಲುತ್ತಿವೆ.

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಚ್ಚಾ ತೈಲ ಆಮದನ್ನು ಕಡಿಮೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡುತ್ತಿವೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ನಿಟ್ಟಿನಲ್ಲಿ ಬಿಹಾರ ರಾಜ್ಯ ಸರ್ಕಾರವು ಕೈಗೊಂಡ ಕ್ರಮ ಎಲ್ಲರ ಗಮನ ಸೆಳೆಯುತ್ತಿದೆ. ಬಿಹಾರ ಸರ್ಕಾರವು ಗಯಾ ಹಾಗೂ ಮುಜಾಫರ್ ಪುರ ನಗರಗಳಲ್ಲಿ ಹೊಸ ಡೀಸೆಲ್ ವಾಹನಗಳ ನೋಂದಣಿಯನ್ನು ನಿಷೇಧಿಸಿದೆ.

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಎರಡೂ ನಗರಗಳಲ್ಲಿನ ವಾಯುಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿರುವ ಸುಶೀಲ್ ಕುಮಾರ್ ಮೋದಿ ಸೆಪ್ಟೆಂಬರ್ 23ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಎರಡು ನಗರಗಳಲ್ಲಿ ಹೊಸ ಎಲೆಕ್ಟ್ರಿಕ್ ವಾಹನಗಳ ರಿಜಿಸ್ಟ್ರೇಷನ್ ಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಹೊಸ ಪೆಟ್ರೋಲ್ ವಾಹನಗಳನ್ನು ರಿಜಿಸ್ಟರ್ ಮಾಡಲಾಗುವುದೇ ಎಂಬ ಮಾಹಿತಿ ನೀಡಿಲ್ಲ.

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಇಟಿ ಆಟೋ ಈ ಬಗ್ಗೆ ವರದಿ ಪ್ರಕಟಿಸಿದೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ವಾಯುಮಾಲಿನ್ಯದ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲು ರಾಜ್ಯ ಸರ್ಕಾರವು ದೆಹಲಿ ಐಐಟಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮುಂಬರುವ ದಿನಗಳಲ್ಲಿ ಭಾರತದಲ್ಲಿರುವ ಪೆಟ್ರೋಲ್, ಡೀಸೆಲ್ ವಾಹನಗಳು, ವಿಶೇಷವಾಗಿ ಹಳೆಯ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ.

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ವಾಹನಗಳ ರಿಜಿಸ್ಟ್ರೇಷನ್ ಕುರಿತು ಯೋಜನೆಗಳನ್ನು ರೂಪಿಸಲು ಆರಂಭಿಸಿವೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಇದರಿಂದ ಎಲೆಕ್ಟ್ರಿಕ್ ವಾಹನಗಳ ಮಾರಾಟವು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುವುದು ಖಚಿತ. ಸದ್ಯಕ್ಕೆ ಕೇಂದ್ರ ಸರ್ಕಾರ ಹಾಗೂ ದೆಹಲಿ, ಗುಜರಾತ್ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಸಬ್ಸಿಡಿ ನೀಡುತ್ತಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.

Most Read Articles

Kannada
English summary
New Diesel vehicles registration banned in Gaya and Muzaffarpur. Read in Kannada.
Story first published: Friday, September 25, 2020, 9:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X