ಹೊಸ ಥಾರ್ ರಾಕ್ಸ್ ಖರೀದಿಸಿದ ಸಂಭ್ರಮದಲ್ಲಿ ಗೂಂಡಾಗಿರಿ.. ನೆಟ್ಟಿಗರು ಕೆಂಡಾಮಂಡಲ, ವಿಡಿಯೋ!

ಪ್ರತಿಯೊಬ್ಬರಿಗೂ ಹೊಸ ಕಾರು ತೆಗೆದುಕೊಳ್ಳಬೇಕು ಎಂಬುದು ಜೀವನದ ಬಹುದೊಡ್ಡ ಕನಸಾಗಿರುತ್ತದೆ. ಆ ಕಾರನ್ನು ಖರೀದಿಸಿದ ಬಳಿಕ, ಶೋರೂಂನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸುವುದು.. ಕುಟುಂಬದೊಂದಿಗೆ ಕೀ ಪಡೆಯುವುದು ಹಾಗೂ ತಮ್ಮಿಷ್ಟದ ದೇಗುಲಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ನೂತನ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ವಿತರಣೆ ಪಡೆಯುವಾಗ ಗುಂಡಾ ವರ್ತನೆ ತೋರಿಸಿದ್ದಾನೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿಯೂ ಭಾರಿ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ.

ಮಧ್ಯಪ್ರದೇಶದ ಮಹೀಂದ್ರಾ ಕಂಪನಿಯ ಡೀಲರ್‌ಶಿಪ್‌ವೊಂದರಲ್ಲಿ ವ್ಯಕ್ತಿಯೊಬ್ಬ ಹೊಚ್ಚ ಹೊಸ 'ಥಾರ್ ರಾಕ್ಸ್' ಎಸ್‌ಯುವಿಯನ್ನು ಡೆಲಿವರಿ ತೆಗೆದುಕೊಂಡಿದ್ದಾನೆ. ಸಾಮಾನ್ಯರಂತೆ ಸುಮ್ಮನೆ ಬಂದು ಕಾರನ್ನು ಮನೆಗೆ ತೆಗದುಕೊಂಡು ಹೋಗದೆ, ರೈಫಲ್‌ನಿಂದ ಗುಂಡನ್ನು ಹಾರಿಸಿ ಅತಿರೇಖವಾಗಿ ವರ್ತಿಸಿದ್ದಾನೆ. ನವೆಂಬರ್ 18ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

New Mahindra Thar Roxx Buying Celebration Man Gun Fire Shots In Air Video Viral

ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಲ್‌ಚಲ್ ಸೃಷ್ಟಿಸಿದೆ. ಆ ವ್ಯಕ್ತಿ ಮಾಡಿದ ಕೆಲಸವನ್ನು ಕಂಡು ನೆಟ್ಟಿಗರು ಕೆಂಡಕಾರಿದ್ದಾರೆ. ಸಾಮಾಜಿಕ ಜಾಲತಾಣ ಬಳಕೆದಾರನೊಬ್ಬರು, 'ಇದು ಅಪರಾಧ. ಆತನನ್ನು ಪೊಲೀಸರು ಬಂಧಿಸಬೇಕು. ಆರ್‌ಟಿಒ ಆ ವ್ಯಕ್ತಿಯ ಚಾಲನಾ ಪರವಾನಿಗೆಯನ್ನು ಶಾಶ್ವತವಾಗಿ ರದ್ದುಪಡಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಇನ್ನೊಬ್ಬರು, 'ಈ ವ್ಯಕ್ತಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಆತ ತನ್ನನ್ನು ತಾನು ರಾಜ ಅಂದುಕೊಂಡಿದ್ದಾನೆ' ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, 'ಇದೆಲ್ಲ ರೀಲ್ಸ್ ಮಾಡಲು.. ನಮ್ಮ ದೇಶ ಯಾವ ದಿಕ್ಕಿನತ್ತ ಸಾಗುತ್ತಿದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಬಹುತೇಕ ನೆಟ್ಟಿಗರು ಈ ವಿಡಿಯೋವನ್ನು ಮಧ್ಯಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಈತನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

New Mahindra Thar Roxx Buying Celebration Man Gun Fire Shots In Air Video Viral

ಮಹೀಂದ್ರಾ ಥಾರ್ ರಾಕ್ಸ್ ವಿಶೇಷತೆಗಳೇನು: ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಈ ಕಾರು, ರೂ.12.99 ಲಕ್ಷದಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈಗಾಗಲೇ 'ಥಾರ್ ರಾಕ್ಸ್' ಭಾರಿ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ದಾಖಲೆಯನ್ನೇ ನಿರ್ಮಿಸಿದೆ. ಕೇವಲ ಒಂದು ಗಂಟೆಯಲ್ಲಿ 1.76 ಲಕ್ಷಕ್ಕೂ ಅಧಿಕ ಗ್ರಾಹಕರು ಆರ್ಡರ್ ಮಾಡಿದ್ದರು.

ಈ ಎಸ್‌ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನ್ನು ಹೊಂದಿದೆ. 12.4 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 447 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಮಹೀಂದ್ರಾ ಥಾರ್ ರಾಕ್ಸ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್‌ ಬೆಲ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, November 22, 2024, 15:41 [IST]
English summary
New mahindra thar roxx buying celebration man gun fire shots in air video viral
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+