5-ಸ್ಟಾರ್ ಸೇಫ್ಟಿ ರೇಟಿಂಗ್‌ನ ಹೊಸ ಮಾರುತಿ ವಿಕ್ಟೋರಿಸ್ ಕಾರಿನ ಮೊದಲ ಅಪಘಾತ ವರದಿ.. ಏನಾಯ್ತೋ ಗೊತ್ತಿಲ್ಲ!

ಸೆ.16 ರಂದು ಹೊಚ್ಚ ಹೊಸ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರನ್ನು ಮಾರಾಟಕ್ಕೆ ತರಲಾಗಿತ್ತು. ಇದೊಂದು ಮಿಡ್-ಸೈಜ್ ಎಸ್‌ಯುವಿಯಾಗಿದೆ. ಗ್ಲೋಬಲ್ ಎನ್‌ಸಿಎಪಿ (Global NCAP) ಮತ್ತು ಭಾರತ್ ಎನ್‌ಸಿಎಪಿ (Bharat NCAP) ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಸದ್ಯ 'ವಿಕ್ಟೋರಿಸ್' ಕಾರು ಮೊದಲ ಬಾರಿಗೆ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಈ ಕುರಿತ ವಿಡಿಯೋ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿದೆ.

ನೂತನ 'ಮಾರುತಿ ವಿಕ್ಟೋರಿಸ್' ಅಪಘಾತಕ್ಕೆ ತುತ್ತಾಗಿದ್ದು, ಕಾರಿನ ಎಡಭಾಗದಲ್ಲಿ ತುಂಬಾ ಹಾನಿಯಾಗಿದೆ. ಆದರೆ, ಈ ಘಟನೆ ಎಲ್ಲಿ ಹಾಗೂ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಅಪಘಾತದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಬಂಪರ್, ಬಾನೆಟ್, ಹೆಡ್‌ಲ್ಯಾಂಪ್‌, ಫೆಂಡರ್‌, ಡೋರ್ ಮತ್ತು ವಿಂಡೋಗಳು ಜಖಂಗೊಂಡಿವೆ. ಹಾಗೆಯೇ ಏರ್‌ಬ್ಯಾಗ್‌ಗಳು ಕೂಡ ತೆರೆದುಕೊಂಡಿರುವುದನ್ನು ಕಾಣಬಹುದು.

New Maruti Suzuki Victoris Suv First Accident Report Here the Details

ಇದರ ಕ್ಯಾಬಿನ್ ಸುಸ್ಥಿತಿಯಲ್ಲಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಈ ಘಟನೆ ಆಧಾರಿಸಿ, ಹಲವರು 'ವಿಕ್ಟೋರಿಸ್' ಸುರಕ್ಷಿತ ಕಾರಲ್ಲ ಅಂದುಕೊಳ್ಳಬಹುದು. ಆದರೆ, ಅಪಘಾತದ ಸತ್ಯಾಸತ್ಯತೆ ಪರಿಶೀಲನೆ ಮಾಡದೆ, ನೇರವಾಗಿ ತೀರ್ಮಾನಕ್ಕೆ ಬರುವುದು ತಪ್ಪಾಗಿ ಬಿಡುತ್ತದೆ.

ಯಾವುದೇ ಕಾರು ಹೆಚ್ಚು ಸುರಕ್ಷಿತ ಎಂಬುದು ಅದರ 'ಬಾಡಿ' ಅವಲಂಭಿಸಿರುವುದಿಲ್ಲ. ಬದಲಾಗಿ, ಚಾಸಿಸ್ ಮತ್ತು ಆ ಕಾರು ಒಳಗೊಂಡಿರುವ ಏರ್‌ಬ್ಯಾಗ್‌ಗಳು ಸೇರಿದಂತೆ ಇತರೆ ರಕ್ಷಣಾತ್ಮಕ ವೈಶಿಷ್ಟ್ಯಗಳ ಆಧಾರದ ಮೇಲೆಯೂ ನಿರ್ಣಯಿಸಲಾಗುತ್ತದೆ. ಇವೆಲ್ಲ ಮಾನದಂಡಗಳನ್ನು ಪೂರೈಸಿದ ನಂತರವೇ ವಾಹನಗಳ ಸುರಕ್ಷತಾ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿನಂತಹ ಸಂಸ್ಥೆಗಳು ಸ್ಟಾರ್ ರೇಟಿಂಗ್ ಕೊಡುತ್ತವೆ.

ನೂತನ ಮಾರುತಿ ಸುಜುಕಿ ವಿಕ್ಟೋರಿಸ್ ಎಸ್‌ಯುವಿಯು 'ಗ್ಲೋಬಲ್ ಎನ್‌ಸಿಎಪಿ'ಯ ಹಲವು ಪ್ರಮಾಣೀಕೃತ ಪರೀಕ್ಷೆಗೆ ಒಳಪಟ್ಟಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 33.72 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 41 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ.

ಅದೇ ರೀತಿಯಲ್ಲಿ 'ಭಾರತ್ ಎನ್‌ಸಿಎಪಿ'ಯು ವಿಕ್ಟೋರಿಸ್ ಕಾರಿಗೆ ವಿವಿಧ ಸುರಕ್ಷತಾ ಪರೀಕ್ಷೆಗಳನ್ನು ನಡೆಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.66 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಪಡೆದಿದೆ. ಇದರೊಂದಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ ಮಾರುತಿ ವಿಕ್ಟೋರಿಸ್ ಎಸ್‌ಯುವಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ ವಿಶೇಷತೆಗಳೇನು:

ಈ ಎಸ್‌ಯುವಿಯು ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಹಾಗೂ ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನಗಳನ್ನು ಒಳಗೊಂಡಿದೆ.

ಇದು 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 21 ರಿಂದ 28.65 ಕಿ.ಮೀ ವರಗೆ ಮೈಲೇಜ್ ಕೊಡುತ್ತದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, 64 ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Monday, September 22, 2025, 13:32 [IST]
English summary
New maruti suzuki victoris suv first accident report here the details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+