Just In
- 31 min ago
ಮುಂಬರುವ ಏಪ್ರಿಲ್ನಲ್ಲಿ ಅನಾವರಣಗೊಳ್ಳಲಿದೆ ಜೀಪ್ ಹೊಸ 7 ಸೀಟರ್ ಎಸ್ಯುವಿ
- 1 hr ago
ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಡುಕಾಟಿ ಮಾನ್ಸ್ಟರ್ ಬೈಕ್ ಉತ್ಪಾದನೆ ಆರಂಭ
- 1 hr ago
ಪ್ರೀಮಿಯಂ ಹ್ಯಾಚ್ಬ್ಯಾಕ್ ಸೆಗ್'ಮೆಂಟಿನಲ್ಲಿ ಮುಂದುವರೆದ ಬಲೆನೊ ಕಾರಿನ ಅಧಿಪತ್ಯ
- 1 hr ago
ಥಾರ್ ಎಸ್ಯುವಿ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಮಹೀಂದ್ರಾ
Don't Miss!
- Lifestyle
ಮಹಾಶಿವರಾತ್ರಿ: ಶಿವನಿಗೆ ಪೂಜೆ ಸಲ್ಲಿಸುವಾಗ ಇವುಗಳನ್ನು ದೂರವಿಡಿ
- Sports
ಜಸ್ಪ್ರೀತ್ ಬೂಮ್ರಾ ಮದುವೆ ಗಾಳಿ ಸುದ್ದಿಗೆ ಪ್ರತಿಕ್ರಿಯಿದ ಅನುಪಮಾ ತಾಯಿ
- Movies
ರಾಕ್ ಲೈನ್ ನಿರ್ಮಾಣದ ಹೊಸ ಸಿನಿಮಾದಲ್ಲಿ ದರ್ಶನ್ ಪಾತ್ರ ರಿವೀಲ್
- News
ಈ ಆರು ಸಚಿವರಿಗ್ಯಾಕೆ ಒಳಗೊಳಗೆ ಢವಢವ?; ಕೆಪಿಸಿಸಿ ವಕ್ತಾರ
- Finance
Gold Rate: ಮಾರ್ಚ್ 06ರ ಚಿನ್ನದ ಬೆಲೆ ತಿಳಿದುಕೊಳ್ಳಿ
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗುತ್ತದೆ. ಅವರು ಪ್ರಯಾಣಿಸುವ ಕಾರಿನ ಮುಂದೆ ಹಾಗೂ ಹಿಂದೆ ಹಲವಾರು ಕಾರುಗಳು ಸಾಗುತ್ತವೆ.

ಮುಖೇಶ್ ಅಂಬಾನಿಯವರು ಸಾರ್ವಜನಿಕ ರಸ್ತೆಗಳಲ್ಲಿ ಸಾಗುವಾಗ ಅವರ ಭದ್ರತಾ ಪಡೆಯ ಕಾರುಗಳನ್ನು ಕಾಣಬಹುದು. ಮುಖೇಶ್ ಅಂಬಾನಿಯವರ ಭದ್ರತಾ ಪಡೆಯಲ್ಲಿ ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್, ಬಿಎಂಡಬ್ಲ್ಯು ಎಕ್ಸ್ 5, ಫೋರ್ಡ್ ಎಂಡೀವರ್, ಟೊಯೊಟಾ ಫಾರ್ಚೂನರ್, ಮಹೀಂದ್ರಾ ಸ್ಕಾರ್ಪಿಯೋ ಹಾಗೂ ಹೋಂಡಾ ಸಿಆರ್-ವಿ ಕಾರುಗಳನ್ನು ಕಾಣಬಹುದು.

ಈಗ ಇನ್ಸ್ಟಾಗ್ರಾಮ್'ನಲ್ಲಿ ಬಿಡುಗಡೆಯಾಗಿರುವ ವೀಡಿಯೊದಲ್ಲಿ ಮುಖೇಶ್ ಅಂಬಾನಿಯ ಭದ್ರತಾ ಪಡೆಯಲ್ಲಿ ಹೊಸ ಮರ್ಸಿಡಿಸ್ ಬೆಂಝ್ ಜಿ 63 ಎಎಂಜಿ ಕಾರು ಸೇರ್ಪಡೆಯಾಗಿರುವುದನ್ನು ಕಾಣಬಹುದು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ವೀಡಿಯೊದಲ್ಲಿ ಒಟ್ಟು ನಾಲ್ಕು ಮರ್ಸಿಡಿಸ್ ಬೆಂಝ್ ಜಿ 63 ಎಎಂಜಿ ಕಾರುಗಳನ್ನು ಕಾಣಬಹುದು. ದೇಶಿಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಜಿ 63 ಎಎಂಜಿ ಕಾರಿನ ಬೆಲೆ ರೂ.3 ಕೋಟಿಗಳಾಗಿದೆ.

ಮುಖೇಶ್ ಅಂಬಾನಿಯವರು ತಮ್ಮ ಭದ್ರತೆಗಾಗಿ ದುಬಾರಿ ಬೆಲೆಯ ಮರ್ಸಿಡಿಸ್ ಬೆಂಝ್ ಜಿ 63 ಎಎಂಜಿ ಕಾರ್ ಅನ್ನು ಖರೀದಿಸಿದ್ದಾರೆ. ಈ ವೀಡಿಯೊದಲ್ಲಿ ಟೊಯೊಟಾ ವೆಲ್ ಫೈರ್ ಕಾರ್ ಅನ್ನು ಸಹ ಕಾಣಬಹುದು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಮರ್ಸಿಡಿಸ್ ಬೆಂಝ್ ಜಿ 63 ಎಎಂಜಿ ಕಾರಿನಲ್ಲಿ 4.0-ಲೀಟರ್ ಟ್ವಿನ್-ಟರ್ಬೋಚಾರ್ಜ್ಡ್ ವಿ 8 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 576 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.
ಈ ಎಂಜಿನ್'ನೊಂದಿಗೆ 9-ಸ್ಪೀಡ್ ಎಎಂಜಿ ಸ್ಪೀಡ್-ಶಿಫ್ಟ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೋಡಿಸಲಾಗಿದೆ. ಈ ಕಾರು ಕೇವಲ 4.5 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಇತ್ತೀಚಿಗಷ್ಟೇ ಅಂಬಾನಿ ಕುಟುಂಬದವರು ಎರಡನೇ ರೋಲ್ಸ್ ರಾಯ್ಸ್ ಕುಲಿನನ್ ಕಾರ್ ಅನ್ನು ಖರೀದಿಸಿದ್ದರು. ಮುಂಬೈನಲ್ಲಿರುವ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ನಿಲ್ಲಿಸಿದ್ದ ಕಾರಿನ ವೀಡಿಯೊ ಇತ್ತೀಚೆಗೆ ಬಿಡುಗಡೆಯಾಗಿತ್ತು.