ಅಪಘಾತಕ್ಕೆ ತುತ್ತಾದ ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್, ಗುದ್ದಿದ್ದು ಎಂಜಿ ಆಸ್ಟರ್: ಎರಡು 'ಬಂಡೆ' ಕಂಡ್ರಿ!
ದೇಶೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಟಾಟಾ (Tata), ನೆಕ್ಸಾನ್ ಫೇಸ್‌ಲಿಫ್ಟ್ (Nexon Facelift) ಎಸ್‌ಯುವಿಯನ್ನು ಬಿಡುಗಡೆ ಮಾಡಿತ್ತು. ಸದ್ಯ, ಈ ಕಾರು ಮೊದಲ ಅಪಘಾತಕ್ಕೆ ತುತ್ತಾಗಿದೆ ಎಂದು ವರದಿಯಾಗಿದೆ. ಆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಫೇಸ್‌ಲಿಫ್ಟ್ ಆವೃತ್ತಿಯು ವಿನ್ಯಾಸ ಹಾಗೂ ವೈಶಿಷ್ಟ್ಯದಲ್ಲಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ. ಆದರೆ, ಹಿಂದಿನ ಮಾದರಿಗೆ ಹೋಲಿಕೆಯಾಗುವ ಪ್ಲಾಟ್‌ಫಾರ್ಮ್ ಹೊಂದಿದೆ. ಆ ಕಾರು, ಸುರಕ್ಷತೆಯ ವಿಚಾರದಲ್ಲಿ ಅತ್ಯುತ್ತಮವಾಗಿತ್ತು. ಗ್ಲೋಬಲ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿತ್ತು. ಈಗ ನೇರವಾಗಿ ವಿಷಯಕ್ಕೆ ಬರೋಣ. ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಕಾರಿಗೆ ಹಿಂಬದಿಯಿಂದ ಎಂಜಿ ಆಸ್ಟರ್ ಡಿಕ್ಕಿಯಾಗಿದೆ.

ಆದರೆ, ಇದು ಪುಟ್ಟ ಅಪಘಾತವಷ್ಟೇ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟಾಟಾ ನೆಕ್ಸಾನ್ ಕಾರನ್ನು ಪಾರ್ಕಿಂಗ್ ಮಾಡಲು ಅದರ ಚಾಲಕ ತಿರುವನ್ನು ತೆಗೆದುಕೊಳ್ಳಬೇಕಾದರೆ, ವೇಗವಾಗಿ ಬಂದ ಎಂಜಿ ಆಸ್ಟರ್ ಎಸ್‌ಯುವಿ ಹಿಂಭಾಗದಿಂದ ಗುದ್ದಿದೆ. ಆ ಕ್ಷಣ ಆಸ್ಟರ್ ಚಾಲಕನಿಗೆ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಘಟನೆ ನಡೆದ ನಿಖರವಾದ ಸ್ಥಳದ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.
ಈ ಅಪಘಾತದ ಪರಿಣಾಮ ಎರಡು ಕಾರುಗಳಿಗೆ ಕೊಂಚ ಹಾನಿಯಾಗಿದೆ. ಎಂಜಿ ಆಸ್ಟರ್‌ನ ಫ್ರಂಟ್ ಫೆಂಡರ್ ಸ್ವಲ್ಪ ಜಖಂಗೊಂಡಿದೆ. ನೆಕ್ಸಾನ್ ಕಾರಿನ ಟೈಲ್‌ಗೇಟ್ ಮತ್ತು ಬಂಪರ್‌ಗೆ ಹಾನಿಯಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಇವರೆಡು ಕಾರುಗಳು ಸುರಕ್ಷತೆಯ ದೃಷ್ಟಿಯಿಂದ ಸಾಕಷ್ಟು ಅತ್ಯಾಧುನಿಕವಾಗಿದ್ದು, ಹಲವು ಸೇಫ್ಟಿ ಫೀಚರ್ಸ್ ಹೊಂದಿವೆ.
ಎಂಜಿ ಆಸ್ಟರ್ ಎಸ್‌ಯುವಿ, ಸುರಕ್ಷತೆ ಸಲುವಾಗಿ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದರೂ, ಗ್ಲೋಬಲ್ ಎನ್‌ಸಿಎಪಿ ಸೇರಿದಂತೆ ಯಾವುದೇ ಸೇಫ್ಟಿ ರೇಟಿಂಗ್ ಏಜೆನ್ಸಿಗಳಿಂದ ಪರೀಕ್ಷೆಗೆ ಒಳಪಟ್ಟಿಲ್ಲ. ಈ ಕಾರು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ರೇರ್ ಡಿಸ್ಕ್ ಬ್ರೇಕ್ ಅನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಕೂಡ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಬ್ಲೈಂಡ್ ವ್ಯೂ ಮಾನಿಟರ್ ಹಾಗೂ 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಭಾರತದ ಮಾರುಕಟ್ಟೆಯಲ್ಲಿ ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ರೂ. 8.10 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಅವುಗಳೆಂದರೆ, 1.2 - ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.5-ಲೀಟರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಎಎಂಟಿ, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಈ ಕಾರು, ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ದೊಡ್ಡದಾದ 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕನೆಕ್ಟ್ ಕಾರ್ ಟೆಕ್, ವೈರ್‌ಲೆಸ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇನ್ನು, ವಿನ್ಯಾಸದ ದೃಷ್ಟಿಯಿಂದಲ್ಲೂ ಹೊಸದಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಹಾಗೂ ನವೀಕರಿಸಿದ ಬಂಪರ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications