Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ಅಮೆಜೊನಿಯಾ -1 ಹಾಗೂ 18 ಉಪಗ್ರಹಗಳು ಯಶಸ್ವಿ ಉಡಾವಣೆ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ಮುಂದೆ ಫಾಸ್ಟ್‌ಟ್ಯಾಗ್'ಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಹೊಂದುವ ಅಗತ್ಯವೇ ಇಲ್ಲ
ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ (ಕನಿಷ್ಠ ಮೊತ್ತ) ಇರಬೇಕೆಂಬ ನಿಯಮವನ್ನು ತೆಗೆದುಹಾಕುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) ತಿಳಿಸಿದೆ. ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಅಡೆತಡೆಯಿಲ್ಲದೆ ಚಲಿಸುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ವಾಹನಗಳು ಯಾವುದೇ ಅಡೆತಡೆಯಿಲ್ಲದೇ ಸಾಗುವಂತೆ ಮಾಡಲು ಫಾಸ್ಟ್‌ಟ್ಯಾಗ್ ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇರಬೇಕೆಂಬ ನಿಯಮವನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದೆ.

ಭದ್ರತಾ ಠೇವಣಿ ಮೊತ್ತದ ಜೊತೆಗೆ, ಫಾಸ್ಟ್‌ಟ್ಯಾಗ್ ಒದಗಿಸುವ ಬ್ಯಾಂಕುಗಳು ಫಾಸ್ಟ್‌ಟ್ಯಾಗ್ ಖಾತೆ / ವ್ಯಾಲೆಟ್ ಜೊತೆಗೆ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲವೆಂದು ಹೇಳಲಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಬ್ಯಾಂಕುಗಳು ನಿರ್ದಿಷ್ಟ ಮೊತ್ತವನ್ನು ಭದ್ರತಾ ಠೇವಣಿಯೊಂದಿಗೆ ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಳ್ಳುತ್ತಿದ್ದವು. ಇದರಿಂದಾಗಿ ಫಾಸ್ಟ್‌ಟ್ಯಾಗ್ ಖಾತೆ / ವ್ಯಾಲೆಟ್'ನಲ್ಲಿ ಸಾಕಷ್ಟು ಮೊತ್ತವಿದ್ದರೂ ಸಹ ಹೆಚ್ಚಿನ ಬಳಕೆದಾರರಿಗೆ ಟೋಲ್ ಪ್ಲಾಜಾಗಳಲ್ಲಿ ಪ್ರವೇಶವನ್ನು ನಿರಾಕರಿಸಲಾಗುತ್ತಿತ್ತು.

ಇದರಿಂದ ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾಗುತ್ತಿತ್ತು. ಈ ಸಮಸ್ಯೆಗಳನ್ನು ಬಗೆಹರಿಸಲು ಮಿನಿಮಮ್ ಬ್ಯಾಲೆನ್ಸ್ ಉಳಿಸಿಕೊಳ್ಳುವ ಅಗತ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಎನ್‌ಹೆಚ್‌ಎಐ ಹೇಳಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಇದರಿಂದಾಗಿ ಫಾಸ್ಟ್‌ಟ್ಯಾಗ್ ಖಾತೆಯಲ್ಲಿರುವ ಮೊತ್ತವು ಶೂನ್ಯವಾಗದ ಹೊರತು ಬಳಕೆದಾರರು ಟೋಲ್ ಪ್ಲಾಜಾಗಳ ಮೂಲಕ ಹಾದುಹೋಗಬಹುದು. ಅಂದರೆ ಫಾಸ್ಟ್‌ಟ್ಯಾಗ್ ಖಾತೆಯಲ್ಲಿ ಕಡಿಮೆ ಹಣವಿದ್ದರೂ ಬಳಕೆದಾರರು ಟೋಲ್ ಪ್ಲಾಜಾ ಮೂಲಕ ಹಾದು ಹೋಗಬಹುದು.

ಟೋಲ್ ಪ್ಲಾಜಾ ಮೂಲಕ ಹಾದುಹೋದ ನಂತರ ಫಾಸ್ಟ್‌ಟ್ಯಾಗ್ ಖಾತೆಯಲ್ಲಿನ ಮೊತ್ತವು ಶೂನ್ಯವಾದರೆ ಬ್ಯಾಂಕುಗಳು ಭದ್ರತಾ ಠೇವಣಿಯಿಂದ ಹಣವನ್ನು ಕಡಿತಗೊಳಿಸಬಹುದು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮುಂದಿನ ಬಾರಿ ಫಾಸ್ಟ್‌ಟ್ಯಾಗ್ ಬಳಕೆದಾರರು ರೀಚಾರ್ಜ್ ಮಾಡುವಾಗ ಕಡಿತಗೊಂಡಿರುವ ಭದ್ರತಾ ಠೇವಣಿ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಎನ್‌ಹೆಚ್‌ಎಐನ ಈ ಕ್ರಮದಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಅಡೆತಡೆಯಿಲ್ಲದ ಸಂಚರಿಸಲು ಸಾಧ್ಯವಾಗಲಿದೆ.

ಇದರಿಂದ ವಾಹನ ಸವಾರರಿಗೆ ಸಮಯದ ಉಳಿತಾಯವಾಗುತ್ತದೆ. ಭಾರತದಲ್ಲಿರುವ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಸದ್ಯಕ್ಕೆ ಟೋಲ್ ಶುಲ್ಕವನ್ನು ಫಾಸ್ಟ್‌ಟ್ಯಾಗ್ ಮೂಲಕ ಮಾತ್ರವಲ್ಲದೇ ನಗದು ರೂಪದಲ್ಲಿಯೂ ಸ್ವೀಕರಿಸಲಾಗುತ್ತಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಆದರೆ ಫೆಬ್ರವರಿ 15ರಿಂದ ಟೋಲ್ ಪ್ಲಾಜಾ ಮೂಲಕ ಸಾಗುವ ಎಲ್ಲಾ ವಾಹನಗಳು ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ. ಇದಕ್ಕೂ ಮುನ್ನ ಜನವರಿ 1ರಿಂದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ ಎಂದು ಘೋಷಿಸಲಾಗಿತ್ತು.

ಇನ್ನೂ ಬಹುತೇಕ ವಾಹನ ಸವಾರರು ಫಾಸ್ಟ್‌ಟ್ಯಾಗ್ ಖರೀದಿಸದ ಕಾರಣ ಈ ಅವಧಿಯನ್ನು ಫೆಬ್ರವರಿ 15ರವರೆಗೆ ವಿಸ್ತರಿಸಲಾಗಿದೆ. ಫೆಬ್ರವರಿ 15ರ ನಂತರಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಸಲು ಫಾಸ್ಟ್‌ಟ್ಯಾಗ್ ಕಡ್ಡಾಯವಾಗಿದೆ.