ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಭಾರತದ ಹೆದ್ದಾರಿಗಳಲ್ಲಿರುವ ಟೋಲ್ ಮೂಲಕ ಸಾಗುವ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಟೋಲ್ ಪ್ಲಾಜಾಗಳಲ್ಲಿರುವ ಎಲ್ಲಾ ಲೇನ್‌ಗಳನ್ನು ಫಾಸ್ಟ್‌ಟ್ಯಾಗ್ ಲೇನ್‌ಗಳಾಗಿ ಬದಲಿಸಲಾಗಿದೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಫಾಸ್ಟ್‌ಟ್ಯಾಗ್ ಲೇನ್‌ಗಳು ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ದಟ್ಟಣೆಯನ್ನು ಕಡಿಮೆ ಮಾಡುವುದರಿಂದ ವಾಹನಗಳು ಹೆಚ್ಚು ಸಮಯ ಕಾಯಬೇಕಾಗಿಲ್ಲ ಎಂದು ಹೇಳಲಾಗಿತ್ತು. ಆದರೆ ಈಗಿನ ಪರಿಸ್ಥಿತಿಯು ಇದಕ್ಕೆ ವಿರುದ್ಧವಾಗಿದೆ. ಕೆಲವು ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ. ಕೆಲವು ಕಡೆ ವಾಹನಗಳು ಗಂಟೆಗಟ್ಟಲೇ ಕಾಯುವಂತಾಗಿದೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಕೆಲವು ಟೋಲ್ ಪ್ಲಾಜಾಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿರುವುದೇ ಇದಕ್ಕೆ ಮುಖ್ಯ ಕಾರಣ. ಈ ಸಮಸ್ಯೆಗಳನ್ನು ಸರಿಪಡಿಸಲು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತನ್ನ ಕೈಲಾದ ಪ್ರಯತ್ನವನ್ನು ಮಾಡುತ್ತಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) ಟೋಲ್ ಗೇಟ್ ಆಪರೇಟರ್‌ಗಳಿಗೆ ವಾಹನಗಳು ಟೋಲ್ ಪ್ಲಾಜಾಗಳನ್ನು ಉಚಿತವಾಗಿ ದಾಟಲು ಅವಕಾಶ ನೀಡಬೇಕೆಂದು ಸೂಚನೆ ನೀಡುವ ಸಾಧ್ಯತೆಗಳಿವೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದರೆ ಟೋಲ್ ಶುಲ್ಕವನ್ನು ಪಾವತಿಸದೆ ಹೊರಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಇದರಿಂದ ವಾಹನ ಸವಾರರು ನಿಟ್ಟುಸಿರು ಬಿಡಲಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಸ್ಟಾರ್ಟ್ ಅಪ್ ಕಂಪನಿಯಾದ ಬುಲ್ಲಿ ಟೆಕ್ನಾಲಜೀಸ್, ಭಾರತದಾದ್ಯಂತ 400ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿನ ಸಂಚಾರವನ್ನು ಮೇಲ್ವಿಚಾರಣೆ ಮಾಡುತ್ತದೆ. ಈ ಕಂಪನಿಯು ನೀಡಿರುವ ಮಾಹಿತಿಯ ಪ್ರಕಾರ ಕಾನ್ಪುರದ ಅಲಿಯಾಪುರ ಟೋಲ್ ಪ್ಲಾಜಾದಲ್ಲಿ ಕಾಯುವ ಅವಧಿಯು ನಿನ್ನೆ ಸಂಜೆ 7 ಗಂಟೆ ವೇಳೆಗೆ 27 ನಿಮಿಷಗಳಾಗಿತ್ತು ಎಂದು ತಿಳಿದುಬಂದಿದೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಅಂದರೆ ಸುಮಾರು ಅರ್ಧ ಗಂಟೆ ಕಾಯಬೇಕಾಗುತ್ತದೆ. ಇಷ್ಟು ಹೊತ್ತು ಕಾಯುವುದರಿಂದ ವಾಹನ ಸವಾರರಿಗೆ ಹಲವು ವಿಧದಲ್ಲಿ ನಷ್ಟ ಸಂಭವಿಸುತ್ತದೆ.ದೇಶದ ಇತರ ಟೋಲ್ ಪ್ಲಾಜಾಗಳಲ್ಲಿ ಈ ಪರಿಸ್ಥಿತಿ ಇಲ್ಲದಿದ್ದರೂ ಸುಮಾರು 9-10 ನಿಮಿಷಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಕೆಲವು ಟೋಲ್ ಪ್ಲಾಜಾಗಳ ಆಪರೇಟರ್‌ಗಳ ಪ್ರಕಾರ, ಸದ್ಯಕ್ಕೆ 85%-90%ನಷ್ಟು ವ್ಯವಹಾರಗಳು ಫಾಸ್ಟ್‌ಟ್ಯಾಗ್ ಮೂಲಕ ನಡೆಯುತ್ತಿವೆ. ಉಳಿದ ವ್ಯವಹಾರವುನಗದು ರೂಪದಲ್ಲಿ ನಡೆಯುತ್ತಿದೆ. ನಗದು ವಹಿವಾಟು ಕೂಡ ವಾಹನ ದಟ್ಟಣೆಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಫಾಸ್ಟ್‌ಟ್ಯಾಗ್ ಹೊಂದಿಲ್ಲದ ವಾಹನಗಳಿಗೆ ಎರಡು ಪಟ್ಟು ಹೆಚ್ಚು ಶುಲ್ಕ ವಿಧಿಸಲಾಗುತ್ತದೆ. ಆದರೆ ಈ ವಹಿವಾಟು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆ ಸಮಯದಲ್ಲಿ ಇತರ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ಎಲ್ಲಾ ವಾಹನಗಳು ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡರೆ ವಾಹನ ದಟ್ಟಣೆ ಉಂಟಾಗುವುದು ತಪ್ಪುತ್ತದೆ ಎಂದು ಆಪರೇಟರ್‌ಗಳು ತಿಳಿಸಿದ್ದಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಇದರ ಜೊತೆಗೆ ಟೋಲ್ ಪ್ಲಾಜಾಗಳಲ್ಲಿರುವ ಸ್ಕ್ಯಾನರ್'ಗಳು ಆರ್‌ಎಫ್‌ಐಡಿ ಟ್ಯಾಗ್‌ಗಳನ್ನು ಸರಿಯಾಗಿ ಸ್ಕ್ಯಾನ್ ಮಾಡದ ಕಾರಣ ಟೋಲ್ ಗೇಟ್'ಗಳು ತೆರೆಯುವುದಿಲ್ಲ. ಇನ್ನೂ ಕೆಲವು ವಾಹನ ಸವಾರರು ತಮ್ಮ ಫಾಸ್ಟ್‌ಟ್ಯಾಗ್ ಖಾತೆಗಳಲ್ಲಿ ಸಾಕಷ್ಟು ಹಣವಿದ್ದರೂ ಬಾಕಿ ಇಲ್ಲ ಎಂದು ತೋರಿಸುತ್ತಿದೆ ಎಂದು ದೂರುತ್ತಾರೆ.

ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಲು ಮುಂದಾದ ಎನ್‌ಹೆಚ್‌ಎಐ

ಈ ಎಲ್ಲಾ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶೀಘ್ರದಲ್ಲೇ ಸರಿಪಡಿಸುವುದಾಗಿ ತಿಳಿಸಿದೆ. ಇಲ್ಲದಿದ್ದರೆ ವಾಹನ ಸವಾರರು ಟೋಲ್ ಪ್ಲಾಜಾಗಳಲ್ಲಿ ಗಂಟೆ ಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಮುಂದುವರೆಯಲಿದೆ.

Most Read Articles

Kannada
English summary
NHAI to give good news for motorists waiting in long queues at toll plazas. Read in Kannada.
Story first published: Friday, February 19, 2021, 17:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X