ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯೊಂದಿಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗುತ್ತಿದೆ. ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಲು ಭಾರೀ ಬೆಲೆ ತೆರಬೇಕಾಗುತ್ತದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಿಸಲಾಗುವುದು ಎಂದು ವರದಿಗಳಾಗಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) ಟೋಲ್ ಶುಲ್ಕಗಳನ್ನು 5%ನಷ್ಟು ಹೆಚ್ಚಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಇದರಿಂದಾಗಿ ದೈನಂದಿನ ಅವಶ್ಯಕತೆಗಳ ಬೆಲೆಗಳು ಗಗನಕ್ಕೇರಿವೆ. ಬೆಲೆ ಏರಿಕೆಯಿಂದಾಗಿ ಬಡವರು, ಮಧ್ಯಮ ವರ್ಗದವರು ತತ್ತರಿಸುತ್ತಿದ್ದಾರೆ. ಈಗ ಎನ್‌ಹೆಚ್‌ಎಐ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಹಾಕಲು ಮುಂದಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕವನ್ನು ಹೆಚ್ಚಿಸುತ್ತದೆ. ಇದರನ್ವಯ ಪ್ರತಿ ವರ್ಷದ ಏಪ್ರಿಲ್ 1ರಿಂದ ಟೋಲ್ ಶುಲ್ಕಗಳು ಏರಿಕೆಯಾಗುತ್ತವೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಈ ಬಾರಿ ರೂ.5ರಿಂದ ರೂ.30ರವರೆಗೆ ಟೋಲ್ ಶುಲ್ಕ ಏರಿಕೆ ಮಾಡುವ ಸಾಧ್ಯತೆಗಳಿವೆ. ಟೋಲ್ ಶುಲ್ಕ ಪಾವತಿ ವಿಧಾನವನ್ನು ಸರಳಗೊಳಿಸುವ ಸಲುವಾಗಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಇತರ ಎಲ್ಲಾ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಫಾಸ್ಟ್‌ಟ್ಯಾಗ್ ಹೊಂದಿಲ್ಲದೇ ಟೋಲ್ ಪ್ಲಾಜಾ ಮೂಲಕ ಸಾಗುವ ವಾಹನಗಳಿಗೆ ದುಪ್ಪಟ್ಟು ಟೋಲ್ ಶುಲ್ಕ ವಿಧಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಾಹನ ಮಾಲೀಕರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್'ಗಳನ್ನು ಅಳವಡಿಸಿಕೊಂಡಿದ್ದಾರೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ನಂತರ ಪ್ರತಿದಿನ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಸಂಗ್ರಹವಾಗುವ ಟೋಲ್ ಶುಲ್ಕದಲ್ಲಿ ಏರಿಕೆ ಕಂಡು ಬಂದಿದೆ. ಈಗ ಟೋಲ್ ಶುಲ್ಕ ಏರಿಕೆ ಸುದ್ದಿಯು ವಾಹನ ಸವಾರರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಫಾಸ್ಟ್‌ಟ್ಯಾಗ್'ಗಳು ಟೋಲ್ ಪ್ಲಾಜಾಗಳಲ್ಲಿ ಗಂಟೆಗಟ್ಟಲೇ ಕಾಯುವ ಸಮಯವನ್ನು ಕಡಿಮೆ ಮಾಡುತ್ತವೆ. ಇದರಿಂದ ವಾಹನ ಸವಾರರು ಇಂಧನವನ್ನು ಉಳಿಸಬಹುದು ಎಂದು ಇತ್ತೀಚಿಗಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪ್ರಯಾಣ

ಇದರ ಜೊತೆಗೆ ಇಂಧನ ಕೊರತೆಯ ಅಂಕಿಅಂಶಗಳನ್ನು ಸಹ ಬಿಡುಗಡೆಗೊಳಿಸಿದ್ದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ ದಿನ ಟೋಲ್ ಮೂಲಕ ರೂ.104 ಕೋಟಿ ಸಂಗ್ರಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಬಳಕೆಯನ್ನು ಫೆಬ್ರವರಿ 16ರಿಂದ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಹೆಚ್‌ಟಿ ಆಟೋ ವರದಿ ಮಾಡಿದೆ.

Most Read Articles

Kannada
English summary
NHAI to increase toll price by 5 percent from April 1st. Read in Kannada.
Story first published: Monday, March 15, 2021, 20:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X