ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾದಂತೆ, ಪರಿಸರ ಮಾಲಿನ್ಯ ಸಮಸ್ಯೆಯು ಕಡಿಮೆಯಾಗಲಿದೆ. ಜೊತೆಗೆ ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವೂ ಸಹ ಕಡಿಮೆಯಾಗಲಿದೆ. ಆದರೆ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದ ಕಾರಣ, ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಮೂಲ ಸೌಕರ್ಯ ಒದಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸುವ ಸಲುವಾಗಿ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿರುವುದರಿಂದ ಸಾಕಷ್ಟು ಸಂಖ್ಯೆಯ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಆದರೆ ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಬೇರೆ ದಾರಿ ಕಾಣದೇ ಅನಿವಾರ್ಯವಾಗಿ ಪೆಟ್ರೋಲ್, ಡೀಸೆಲ್ ವಾಹನಗಳನ್ನೇ ಬಳಸುತ್ತಿದ್ದಾರೆ. ಸಚಿವ ನಿತಿನ್ ಗಡ್ಕರಿ ರವರ ಈ ಹೇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವವರಿಗೆ ಸಂತಸವನ್ನುಂಟು ಮಾಡಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಮೂಲಕ ಇವಿಗಳಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಹೊಸ ಸ್ಟಾರ್ಟ್ ಅಪ್‌ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮ ಸ್ವಾಗತವನ್ನು ಪಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಬ್ಯಾಟರಿ ಸೇರಿದಂತೆ ಎಲೆಕ್ಟ್ರಿಕ್ ವಾಹನಗಳ ಬಿಡಿ ಭಾಗಗಳನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ, ಕಡಿಮೆ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಅಗತ್ಯವಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಆಟೋ ಮೊಬೈಲ್ ಕ್ಷೇತ್ರದ ಬಗ್ಗೆಯೂ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಕೋವಿಡ್ 19 ಕಾರಣದಿಂದಾಗಿ ಇತರ ಕ್ಷೇತ್ರಗಳಂತೆ ಆಟೋ ಮೊಬೈಲ್ ಕ್ಷೇತ್ರವು ಸಹ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಆಟೋ ಮೊಬೈಲ್ ಉದ್ಯಮವು ಚೇತರಿಸಿ ಕೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಹಬ್ಬಗಳು ಹತ್ತಿರವಾಗುತ್ತಿರುವುದರಿಂದ ಆಟೋ ಮೊಬೈಲ್ ಕಂಪನಿಗಳು ಮತ್ತಷ್ಟು ಬೆಳವಣಿಗೆಯನ್ನು ಕಾಣಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಭಾರತದ ಆಟೋ ಮೊಬೈಲ್ ಮಾರುಕಟ್ಟೆಗೆ ವಿವಿಧ ಅಂತರಾಷ್ಟ್ರೀಯ ಕಂಪನಿಗಳು ಪ್ರವೇಶಿಸುತ್ತಿರುವುದು ಸಂತಸ ತಂದಿದೆ. ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಹೆಚ್ಚಿಸಲು ಸ್ಥಳೀಯ ಉದ್ದಿಮೆದಾರರಿಗೆ ದೊಡ್ಡ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದರು. ಸಚಿವ ನಿತಿನ್ ಗಡ್ಕರಿ ರವರು ಹೇಳಿದಂತೆ ವಿವಿಧ ಅಂತಾರಾಷ್ಟ್ರೀಯ ಆಟೋ ಮೊಬೈಲ್ ಕಂಪನಿಗಳು ಭಾರತೀಯ ಮಾರುಕಟ್ಟೆಗೆ ಕಾಲಿಡುತ್ತಿವೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

MG Motor ಹಾಗೂ Kia Motors ಕಂಪನಿಗಳು ದೇಶಿಯ ಮಾರುಕಟ್ಟೆಗೆ ಕಾಲಿಟ್ಟು ಪ್ರಚಂಡ ಯಶಸ್ಸನ್ನು ಗಳಿಸಿವೆ. ಇದೇ ವೇಳೆ Ford ನಂತಹ ಕಂಪನಿಗಳು ಭಾರತದಿಂದ ಹೊರಗೆ ಹೋಗುತ್ತಿರುವುದನ್ನು ಅಲ್ಲಗಳೆಯುವಂತಿಲ್ಲ. ದೇಶದಲ್ಲಿರುವ ಕೆಲವು ಕಂಪನಿಗಳು ಇಲ್ಲಿನ ಮಾರುಕಟ್ಟೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಇನ್ನೂ ಕೆಲವು ಕಂಪನಿಗಳು ಸರಿಯಾದ ವ್ಯಾಪಾರ ತಂತ್ರಗಳನ್ನು ಅನುಸರಿಸುತ್ತಿಲ್ಲ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಈ ಕಾರಣಕ್ಕೆ ಕೆಲವು ಕಂಪನಿಗಳು ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ಕೇಂದ್ರ ಸರ್ಕಾರವು ಇದನ್ನು ಸರಿಪಡಿಸಬೇಕೆಂದು ಆಟೋ ಮೊಬೈಲ್ ಉದ್ಯಮವು ಒತ್ತಾಯಿಸುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಇನ್ನೂ ಕೆಲವು ಕಂಪನಿಗಳು ಸಂಕಷ್ಟವನ್ನು ಎದುರಿಸುತ್ತಿವೆ. ಆ ಕಂಪನಿಗಳೂ ಸಹ Ford ಕಂಪನಿಯ ರೀತಿಯಲ್ಲಿಯೇ ಭಾರತವನ್ನು ತೊರೆಯುತ್ತವೆಯೇ ಎಂಬ ಭಯ ಗ್ರಾಹಕರು ಹಾಗೂ ಕಾರ್ಮಿಕರನ್ನು ಕಾಡುತ್ತಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿ ಚಕ್ರ ವಾಹನಗಳು ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವು ಹೆಚ್ಚುತ್ತಿದೆ. ಇದರ ಜೊತೆಗೆ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆಗೊಳಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುವುದು ಖಚಿತ. ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿವೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ಈ ನೀತಿಯನ್ವಯ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಹಲವು ಕೊಡುಗೆಗಳನ್ನು ನೀಡಲಾಗುತ್ತದೆ. ಈ ಕೊಡುಗೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ, ರಸ್ತೆ ತೆರಿಗೆಯಲ್ಲಿ ವಿನಾಯಿತಿಯಂತಹ ಕೊಡುಗೆಗಳು ಸೇರಿವೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಲೆ ಎತ್ತಲಿವೆ ಇವಿ ಚಾರ್ಜಿಂಗ್ ಕೇಂದ್ರಗಳು

ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡುತ್ತಿವೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನಿಡುವುದರಲ್ಲಿ ಇತರ ಎಲ್ಲಾ ರಾಜ್ಯ ಸರ್ಕಾರಗಳಿಗಿಂತ ಒಂದು ಹೆಜ್ಜೆ ಮುಂದಿದೆ. ದೆಹಲಿಯಲ್ಲಿ ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ದೆಹಲಿಯ ಹಲವು ಇಲಾಖೆಗಳು ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Nhai to setup ev charging stations along highways says nitin gadkari details
Story first published: Saturday, October 2, 2021, 12:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X