Just In
- 8 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 10 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 12 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 22 hrs ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- News
ರೆಮ್ಡೆಸಿವಿರ್ ಔಷಧಿ ರಫ್ಚು ಮಾಡುವುದಕ್ಕೆ ಕೇಂದ್ರ ಸರ್ಕಾರದ ನಿರ್ಬಂಧ
- Sports
ಎಬಿಡಿಗೂ ಮುನ್ನ ಮ್ಯಾಕ್ಸ್ವೆಲ್ ಬ್ಯಾಟಿಂಗ್ಗೆ ಇಳಿದಿದ್ದೇಕೆ ಎಂದು ಬಹಿರಂಗಪಡಿಸಿದ ಕೊಹ್ಲಿ
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೆ ಜಾರಿಯಾದ ನೈಟ್ ಕರ್ಫ್ಯೂ, ನೂರಾರು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು
ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ತಡೆಗಟ್ಟಲು ಹಲವು ನಗರಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪುಣೆಯಲ್ಲಿ ಪ್ರತಿ ದಿನ ಸಂಜೆ 6ರಿಂದ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಪುಣೆಯ ಸ್ಥಳೀಯ ಆಡಳಿತವು ಕಳೆದ ಎರಡು ದಿನಗಳಲ್ಲಿ ತುರ್ತು ಸೇವೆ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಜನರು ಮನೆಯಿಂದ ಹೊರಬರುವುದಕ್ಕೆ ಪುಣೆ ಆಡಳಿತವು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಮಾತನಾಡಿದ ಪುಣೆ ಪೊಲೀಸ್ ಕಮಿಷನರ್ ರವೀಂದ್ರ ಸಿಸ್ವೆಹ್, ನಗರದಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್ ಜಾರಿಗೊಳಿಸಿ ಪೊಲೀಸ್ ಅಧಿಕಾರಿಗಳು ಎಲ್ಲಾ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಪೊಲೀಸರಿಗೆ ಗಸ್ತು ತಿರುಗಲು ವಜ್ರ ವಾಹನವನ್ನು ನೀಡಲಾಗಿದೆ. ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಸ್ಥಳೀಯ ಆಡಳಿತವು ಏಪ್ರಿಲ್ 6ರಂದು ಜನರಿಗೆ ಮಾಹಿತಿ ನೀಡಿತ್ತು. ಲಾಕ್‌ಡೌನ್ ಅವಧಿಯಲ್ಲಿ ಜನರು ಮನೆಯಿಂದ ಹೊರಬರುವುದನ್ನು ನಿಷೇಧಿಸಲಾಗಿದೆ.

ಆದರೆ ವೈದ್ಯಕೀಯ ಹಾಗೂ ಇನ್ನಿತರ ತುರ್ತು ಸೇವೆಗಳಿಗಾಗಿ ಅನುಮತಿ ನೀಡಲಾಗಿದೆ. ಇದರ ಜೊತೆಗೆ ರೋಗಿಗಳ ಕುಟುಂಬದವರಿಗೆ ಹಾಗೂ ಆಸ್ಪತ್ರೆಗೆ ಸಾಗಿಸಲು ನೆರವಾಗುವವರಿಗೂ ಸಹ ವಿನಾಯಿತಿ ನೀಡಲಾಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಆದರೆ ಈ ರೀತಿ ಹೊರ ಬರುವವರು ಅಗತ್ಯ ಕಾರಣಗಳನ್ನು ಹೊಂದಿರಬೇಕು. ಲಾಕ್‌ಡೌನ್ ಅವಧಿಯಲ್ಲಿ ಜನರು ನಿಯಮಗಳನ್ನು ಉಲ್ಲಂಘಿಸಿ ಹೊರ ಬಂದಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಪೊಲೀಸರ ಪ್ರಕಾರ, ಪರಿಸ್ಥಿತಿಯನ್ನು ನಿಭಾಯಿಸಲು ಪುಣೆಯಲ್ಲಿ 96 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪೊಲೀಸರು ಅನಗತ್ಯವಾಗಿ ಹೊರಗೆ ತಿರುಗಾಡುವವರ ವಿಚಾರಣೆ ನಡೆಸುತ್ತಿದ್ದಾರೆ. ಪುಣೆ ಪೊಲೀಸರು ಈ ವರ್ಷದ ಆರಂಭದಿಂದಲೂ, ಲಾಕ್‌ಡೌನ್ ನಿಯಮಗಳನ್ನುಉಲ್ಲಂಘಿಸಿದವರಿಂದ ರೂ.13.5 ಕೋಟಿ ದಂಡ ವಸೂಲಿ ಮಾಡಿದ್ದಾರೆ.

ಫೇಸ್ ಮಾಸ್ಕ್ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ತಿರುಗಾಡುತ್ತಿದ್ದ 814 ಜನರಿಂದ ಪೊಲೀಸರು ಒಟ್ಟು ರೂ.4.82 ಲಕ್ಷ ವಸೂಲಿ ಮಾಡಿದ್ದಾರೆ. ಇದುವರೆಗೆ ಪುಣೆ ಪೊಲೀಸರು ನಗರದ 2.78 ಲಕ್ಷ ಜನರಿಗೆ ಚಲನ್ ನೀಡಿದ್ದು ಒಟ್ಟು ರೂ.13.5 ಕೋಟಿ ದಂಡ ವಸೂಲಿ ಮಾಡಿದ್ದಾರೆ.
MOST READ: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಳೆದ ವರ್ಷ ಲಾಕ್‌ಡೌನ್ ಅವಧಿಯಲ್ಲಿಯೂ ಪುಣೆ ಪೊಲೀಸರು ಸಾವಿರಾರು ವಾಹನಗಳನ್ನು ವಶಪಡಿಸಿಕೊಂಡಿದ್ದರು. ದಾಖಲೆಗಳನ್ನು ಪರಿಶೀಲಿಸಿ ದಂಡ ವಸೂಲಿ ಮಾಡಿದ ನಂತರ ವಶಪಡಿಸಿಕೊಂಡಿದ್ದ ವಾಹನಗಳನ್ನು ವಾಪಸ್ ನೀಡಿದರು. ಈ ಬಾರಿಯೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.