10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ನಿಸ್ಸಾನ್ ಮ್ಯಾಗ್ನೆಟ್ ಭಾರತದಲ್ಲಿ ಮಾರಾಟವಾಗುವ ಕಡಿಮೆ ಬೆಲೆಯ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ. ಕಡಿಮೆ ವೆಚ್ಚ ಹಾಗೂ ಕಡಿಮೆ ಮೆಂಟೆನೆನ್ಸ್ ಕಾರಣಕ್ಕೆ ಈ ಕಾರು ಹೆಚ್ಚು ಬೇಡಿಕೆಯನ್ನು ಹೊಂದಿದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಮ್ಯಾಗ್ನೆಟ್ ಕಾರು ಗ್ರಾಹಕರಿಗೆ ಹಾಗೂ ಹೊಸ ಮ್ಯಾಗ್ನೆಟ್ ಕಾರು ಖರೀದಿಸಲು ಬಯಸುವವರಿಗೆ ಆಘಾತ ನೀಡುವಂತಹ ಘಟನೆಯೊಂದು ವರದಿಯಾಗಿದೆ. ಆಂಧ್ರಪ್ರದೇಶದ ಇಂದಿರಾ ಹರ್ಷ ವಿದೇಶದಲ್ಲಿ ನೆಲೆಸಿದ್ದರು. ಇತ್ತೀಚೆಗೆ ಅವರು ತಮ್ಮ ತವರಿಗೆ ಮರಳಿದ್ದಾರೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಅವರ ಮ್ಯಾಗ್ನೆಟ್ ಕಾರಿಗೆ ಎಪಿಎಸ್ಆರ್‌ಟಿ‌ಸಿ ಒಡೆತನದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಅವರ ಮ್ಯಾಗ್ನೈಟ್ ಕಾರಿಗೆ ತೀವ್ರ ಪ್ರಮಾಣದ ಹಾನಿ ಸಂಭವಿಸಿದೆ. ಕಾರಿನ ಮುಂಭಾಗವು ತೀವ್ರವಾಗಿ ಹಾನಿಗೊಳಗಾಗಿತ್ತು.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಎಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು ಎಂದರೆ ಇದು ಮ್ಯಾಗ್ನೆಟ್ ಕಾರು ಎಂದು ಗುರುತಿಸಲು ಸಾಧ್ಯವಾಗದಷ್ಟು ಹಾನಿಯಾಗಿತ್ತು. ಅಪಘಾತದಲ್ಲಿ ಗಂಭೀರ ಗಾಯಗಳಾದ ಕಾರಣಕ್ಕೆ ಇಂದಿರಾ ಹರ್ಷ ಅವರು ಕೆಲವು ದಿನಗಳವರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಇಂದಿರಾರವರು ಆಸ್ಪತ್ರೆಯಲ್ಲಿದ್ದ ವೇಳೆ ಅವರ ಸಹೋದರ ಕಾರನ್ನು ಸರ್ವೀಸ್ ಸೆಂಟರ್'ಗೆ ಕೊಂಡೊಯ್ದು ವಿಮೆ ಪಡೆಯುವ ಎಲ್ಲ ಕೆಲಸಗಳನ್ನು ನೋಡಿಕೊಂಡಿದ್ದಾರೆ. ಚೇತರಿಸಿಕೊಂಡ ಇಂದಿರಾ ಹರ್ಷ ಕೂಡಾ ಇತ್ತೀಚೆಗೆ ಮನೆಗೆ ಮರಳಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಆಗ ಸರ್ವೀಸ್ ಸೆಂಟರ್ ನೀಡಿದ ಬಿಲ್ ನೋಡಿ ಬೆಚ್ಚಿ ಬಿದ್ದಿದ್ದಾರೆ. ನಿಸ್ಸಾನ್ ಸರ್ವೀಸ್ ಸೆಂಟರ್ ರೂ.20,75,640ಗಳ ಬಿಲ್ ನೀಡಿದೆ. ಇಂದಿರಾ ಹರ್ಷ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಟರ್ಬೊ ಎಕ್ಸ್‌ವಿ ಪ್ರೀಮಿಯಂ ಸಿವಿಟಿ ಮಾದರಿಯನ್ನು ಬಳಸುತ್ತಿದ್ದಾರೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಈ ಕಾರು ರೂ.10 ಲಕ್ಷಗಳಿಗಿಂತ ಕಡಿಮೆ ಬೆಲೆಯನ್ನು ಹೊಂದಿದೆ. ಆದರೆ ಸರ್ವೀಸ್ ಸೆಂಟರ್ ಸುಮಾರು ರೂ.21 ಲಕ್ಷಗಳ ಬಿಲ್ ನೀಡಿದೆ. ಈ ಘಟನೆಯಿಂದಾಗಿ ಎಲ್ಲಾ ಮ್ಯಾಗ್ನೆಟ್ ಕಾರು ಗ್ರಾಹಕರು ಬೆಚ್ಚಿ ಬಿದ್ದಿರುವುದು ಸುಳ್ಳಲ್ಲ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ನಿರ್ವಹಣಾ ವೆಚ್ಚ ಕಡಿಮೆ ಎಂಬ ಕಾರಣಕ್ಕೆ ಸಾಕಷ್ಟು ಜನರು ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಖರೀದಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ನಿಸ್ಸಾನ್ ಸರ್ವೀಸ್ ಸೆಂಟರ್ ಕಾರಿನ ಬೆಲೆಗಿಂತ 100%ನಷ್ಟು ಹೆಚ್ಚು ಬಿಲ್ ಮಾಡಿದೆ ಎಂದು ಇಂದಿರಾ ಹರ್ಷ ಹೇಳಿದರು.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಈ ಬಿಲ್‌ನಲ್ಲಿ ಕಾರನ್ನು ಸರ್ವೀಸ್ ಸೆಂಟರ್'ಗೆ ಬಿಟ್ಟ ನಂತರದಿಂದ ರಿಪೇರಿ ಆಗುವವರೆಗೆ ಸುಮಾರು ರೂ.21 ಲಕ್ಷ ಖರ್ಚಾಗಿದೆ ಎಂದು ಹೇಳಲಾಗಿದೆ. ಕಂಪನಿಯು ಈ ಬಿಲ್'ನಲ್ಲಿ ಹಾನಿಗೊಳಗಾದ ಬಿಡಿಭಾಗಗಳ ಶುಲ್ಕ ಹಾಗೂ ಲೇಬರ್ ಚಾರ್ಜ್'ಗಳನ್ನು ಸಹ ಸೇರಿಸಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಕಾರನ್ನು ಒಟ್ಟಾರೆಯಾಗಿ ರಿಪೇರಿ ಮಾಡಲು ಇಷ್ಟು ಮೊತ್ತದ ಬಿಲ್ ನೀಡಲಾಗಿದೆ. ಭಾರತದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆ ರೂ.5.59 ಲಕ್ಷಗಳಿಂದ ರೂ.9.90 ಲಕ್ಷಗಳಾಗಿದೆ. ನಿಸ್ಸಾನ್ ಮ್ಯಾಗ್ನೈಟ್ ಕಾರಿನಲ್ಲಿ ಹಲವಾರು ಫೀಚರ್'ಗಳನ್ನು ಅಳವಡಿಸಲಾಗಿದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ನಯವಾದ ವಿನ್ಯಾಸ, ಹೈಟೆಕ್ ಫೀಚರ್ ಹಾಗೂ ಶಕ್ತಿಯುತ ಎಂಜಿನ್ ಅನ್ನು ಸಹ ಹೊಂದಿದೆ. ನಿಸ್ಸಾನ್ ಮ್ಯಾಗ್ನೆಟ್ ಕಾರು ಬುಕ್ಕಿಂಗ್'ನಲ್ಲಿ ಹೊಸ ದಾಖಲೆ ಬರೆದಿದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಮೊದಲ ತಿಂಗಳಿನಲ್ಲೇ ಸುಮಾರು 30 ಸಾವಿರ ಬುಕ್ಕಿಂಗ್ ಪಡೆದುಕೊಂಡಿತ್ತು. ಇನ್ನುಳಿದ ಮೂರುವರೆ ತಿಂಗಳ ಅವಧಿಯಲ್ಲಿ 20 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ. ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

More from DriveSpark

Article Published On: Friday, April 23, 2021, 10:07 [IST]
English summary
Nissan service center gives 21 lakh rupees bill for 10 lakh rupees car. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+