ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ವಿಶ್ವದಲ್ಲಿ ಪ್ರತಿ ದಿನ ಸಾವಿರಾರು ರಸ್ತೆ ಅಪಘಾತಗಳು ಸಂಭವಿಸುತ್ತವೆ. ಪ್ರಪಂಚದಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಭಾರತವೂ ಸಹ ಸೇರಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಲಾಗಿದೆ. ಈ ರಸ್ತೆ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ. ಸಿಗ್ನಲ್ ಜಂಪ್, ಕುಡಿದು ವಾಹನ ಚಾಲನೆ ಮಾಡುವುದು, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ಕೆಲವು ಪ್ರಮುಖ ಸಂಚಾರಿ ನಿಯಮ ಉಲ್ಲಂಘನೆಗಳಾಗಿವೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಚರಿಸುವ ವಾಹನಗಳ ಗರಿಷ್ಠ ವೇಗ ಮಿತಿ ತುಸು ಕಡಿಮೆ ಎಂದೇ ಹೇಳಬಹುದು. ನಮ್ಮ ದೇಶದಲ್ಲಿ ಕೆಲವೇ ಕೆಲವು ಜನರು ಮಾತ್ರ ನಿಗದಿತ ವೇಗದಲ್ಲಿ ಅಥವಾ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ವಾಹನ ಚಲಾಯಿಸುತ್ತಾರೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಭಾರತದಲ್ಲಿ ಕೆಲವೆಡೆ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ರಸ್ತೆಗಳಲ್ಲಿ ಸ್ಪೀಡ್ ಬ್ರೆಕರ್'ಗಳನ್ನು ಅಳವಡಿಸಲಾಗಿರುತ್ತದೆ. ಕೇಂದ್ರ ಸರ್ಕಾರವು ಎಲ್ಲಾ ರೀತಿಯ ರಸ್ತೆಗಳಲ್ಲಿ ನಿಗದಿ ಪಡಿಸಿರುವ ವೇಗದ ಮಿತಿಗಿಂತ 20 ಕಿ.ಮೀ ಹೆಚ್ಚು ವೇಗದಲ್ಲಿ ಪ್ರಯಾಣಿಸಲು ಅನುಕೂಲ ಕಲ್ಪಿಸಲು ಚಿಂತನೆ ನಡೆಸುತ್ತಿದೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಈ ಬಗ್ಗೆ ಸುಳಿವು ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಪರಿಶೀಲನಾ ಸಭೆಯ ನಂತರ ನಿತಿನ್ ಗಡ್ಕರಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಈ ಪರಿಶೀಲನಾ ಸಭೆಯಲ್ಲಿ ವೇಗ ಮಿತಿಯನ್ನು ಹೆಚ್ಚಿಸುವ ಬಗ್ಗೆ ಸಲಹೆ ನೀಡುವಂತೆ ಸಚಿವರು ಅಧಿಕಾರಿಗಳನ್ನು ಕೋರಿದರು.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಸದ್ಯಕ್ಕೆ ಕಾರುಗಳಿಗೆ ಹೆದ್ದಾರಿಗಳಲ್ಲಿ ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದಲ್ಲಿ ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸಲು ಅವಕಾಶ ನೀಡಲಾಗಿದೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ಇದೇ ವೇಳೆ ಆಯಾ ರಾಜ್ಯ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿರುವ ರಸ್ತೆಗಳಲ್ಲಿ ವಿವಿಧ ವಾಹನಗಳ ಸಂಚಾರಕ್ಕೆ ವಿವಿಧ ವೇಗದ ಮಿತಿಗಳನ್ನು ನಿಗದಿಪಡಿಸಿವೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ಚಲಿಸುವ ಗರಿಷ್ಠ ವೇಗವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ನಗರದಲ್ಲಿರುವ ಹೆದ್ದಾರಿಗಳಲ್ಲಿ 40 ಕಿ.ಮೀಗಿಂತ ಹೆಚ್ಚು ವೇಗದಲ್ಲಿ ವಾಹನ ಚಾಲನೆ ಮಾಡುವ ವಾಹನ ಸವಾರರಿಗೆ ದಂಡ ವಿಧಿಸುವ ಹೊಸ ಕಾನೂನನ್ನು ಕಳೆದ ವರ್ಷದಿಂದ ಜಾರಿಗೆ ತರಲಾಗಿದೆ.

ವಾಹನಗಳ ವೇಗದ ಮಿತಿ ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ ಕೇಂದ್ರ ಸಚಿವ

ವಾಹನಗಳ ವೇಗದ ಮಿತಿಯನ್ನು ಹೆಚ್ಚಿಸುವುದು ಸೂಕ್ತವೇ ಆದರೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಸರ್ಕಾರವು ವಾಹನಗಳ ಗರಿಷ್ಠ ವೇಗದ ಮಿತಿಗಳನ್ನು ಮತ್ತಷ್ಟು ಕಠಿಣಗೊಳಿಸಬೇಕಾಗಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Nitin Gadkari hints about vehicles speed limit increase. Read in Kannada.
Story first published: Friday, July 16, 2021, 12:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X