ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ದೇಶಾದ್ಯಂತ ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚಿನ ಮಟ್ಟದಲ್ಲಿ ಏರಿಕೆಯಾಗಿದ್ದು, ದ್ವಿಚಕ್ರ ವಾಹನಗಳ ಸವಾರಿ ವೇಳೆ ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ ದಂಡದ ಜೊತೆ ಮತ್ತೊಂದು ಕಡ್ಡಾಯ ನಿಯಮವನ್ನು ಜಾರಿಗೆ ತರಲಾಗಿದೆ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಬೈಕ್ ಸವಾರಿ ವೇಳೆ ಸವಾರ ಮತ್ತು ಹಿಂಬದಿಯ ಸವಾರರಿಗೆ ಬಹುತೇಕ ರಾಜ್ಯಗಳಲ್ಲಿ ಹೆಲ್ಮೆಟ್ ಬಳಕೆಯು ಕಡ್ಡಾಯವಾಗಿದ್ದರೂ ಕೂಡಾ ದಿನನಿತ್ಯ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕಾಗಿಯೇ ದಂಡದ ಮೊತ್ತವನ್ನು ಹೆಚ್ಚಳ ಮಾಡಲಾಗಿದ್ದರೂ ಕೂಡಾ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಹೆಲ್ಮೆಟ್ ಬಳಕೆಯನ್ನು ಪರಿಣಾಮಕಾರಿ ಜಾರಿಗೆ ತರಲು ವಿವಿಧ ರಾಜ್ಯಗಳಲ್ಲಿ ನೋ ಹೆಲ್ಮೆಟ್ ನೋ ಪೆಟ್ರೋಲ್ ನಿಯಮವನ್ನು ಅಳವಡಿಸಿಕೊಂಡಿವೆ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಯಾರು ಹೆಲ್ಮೆಟ್ ಬಳಕೆ ಮಾಡುವುದಿಲ್ಲವೋ ಅಂತಹ ಬೈಕ್ ಮಾಲೀಕರಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್ ಹಾಕಲಾಗುವುದಿಲ್ಲ. ಇದು ಈಗಾಗಲೇ ದೇಶದ ಪ್ರಮುಖ ನಗರಗಳಲ್ಲಿ ಅಭಿಯಾನ ಮಾದರಿಯಲ್ಲಿ ಅಳವಡಿಸಿಕೊಳ್ಳಲಾಗಿದ್ದು, ಇದೀಗ ಈ ವಿಚಾರವಾಗಿ ಕೋಲ್ಕತ್ತಾ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾದ್ದಾರೆ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಹೆಲ್ಮೆಟ್ ಬಳಕೆಯನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ವಾಹನ ಸವಾರರಿಗೆ ಮನವಿ ಮಾಡುತ್ತಿರುವ ಕೋಲ್ಕತ್ತಾ ಪೊಲೀಸರು ಮುಂದಿನ ವಾರದಿಂದ ಕಠಿಣ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದು, ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ ಯಾವುದೇ ಕಾರಣಕ್ಕೂ ಪೆಟ್ರೋಲ್ ಹಾಕದಂತೆ ನಗರ ಪ್ರದೇಶದಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರಿಗೂ ಸೂಚನೆ ನೀಡಲಾಗಿದೆ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಡಿಸೆಂಬರ್ 8ರಿಂದ ಮುಂದಿನ 60 ದಿನಗಳ ತನಕ ಕಡ್ಡಾಯವಾಗಿ ಹೊಸ ನಿಯಮ ಪಾಲನೆ ಮಾಡುವಂತೆ ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಿರುವ ಕೋಲ್ಕತ್ತಾ ಪೊಲೀಸರು ಹೆಲ್ಮೆಟ್ ಬಳಕೆ ಮಾಡುವ ಗ್ರಾಹಕರಿಗೆ ಮಾತ್ರವೇ ಪೆಟ್ರೋಲ್ ಹಾಕುವಂತೆ ಆದೇಶ ಹೊರಡಿಸಿದೆ. ಪೊಲೀಸರ ಸೂಚನೆಯಂತೆ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ನೋ ಹೆಲ್ಮೆಟ್ ನೋ ಪೆಟ್ರೋಲ್ ಬೋರ್ಡ್ ಹಾಕಿರುವ ಪೆಟ್ರೋಲ್ ಬಂಕ್ ಮಾಲೀಕರು ಹೆಲ್ಮೆಟ್ ಇಲ್ಲದ ವಾಹನ ಸವಾರರಿಗೆ ಪೆಟ್ರೋಲ್ ಹಾಕಲು ನಿರಾಕರಿಸುತ್ತಿದ್ದಾರೆ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಕೋಲ್ಕತ್ತಾದಲ್ಲಿ ಮಾತ್ರವಲ್ಲ ದೇಶದ ಪ್ರಮುಖ ನಗರಗಳಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಅವಶ್ಯಕತೆಯಿದ್ದು, ಹೆಲ್ಮೆಟ್ ಬಳಕೆಯಿಂದ ಆಗಬಹುದಾದ ಪ್ರಾಣಿಹಾನಿಯನ್ನು ತಡೆಯಲು ಸಾಕಷ್ಟು ಸಹಕಾರಿಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಇನ್ನು ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಬೈಕ್ ಸವಾರರ ಸವಾರರ ಜೊತೆಗೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದ್ದರೂ ದಂಡದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಕಳಪೆ ಹೆಲ್ಮೆಟ್‌ಗಳ ಬಳಕೆಯು ಹೆಚ್ಚಳವಾಗಿದ್ದು, ಇವು ಬೈಕ್ ಸವಾರರಿಗೆ ರಕ್ಷಣೆ ನೀಡುವ ಬದಲಾಗಿ ಪ್ರಾಣಕ್ಕೆ ಕುತ್ತು ತರುತ್ತಿವೆ ಎಂದರೆ ತಪ್ಪಾಗುವುದಿಲ್ಲ.

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ. ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ 'ನೋ ಹೆಲ್ಮೆಟ್ ನೋ ಪೆಟ್ರೋಲ್' ನಿಯಮ ಜಾರಿ

ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್‌ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ.

Most Read Articles

Kannada
English summary
No Helmet No Petrol Rule To Be Imposed Back In Kolkata.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X