Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೈಟೆಕ್ ಕಾರುಗಳ್ಳರ ಹೆಡೆ ಮುರಿ ಕಟ್ಟಿದ ನೋಯ್ಡಾ ಪೊಲೀಸರು
ಭಾರತದಲ್ಲಿ ವಾಹನ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ವಾಹನಗಳ ಕಳ್ಳತನವನ್ನು ತಡೆಗಟ್ಟಲು ವಾಹನ ತಯಾರಕ ಕಂಪನಿಗಳು ಹೊಸ ಹೊಸ ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸುತ್ತಿವೆ.

ವಾಹನಗಳ್ಳರು ಸಹ ವಾಹನಗಳ ಕಳ್ಳತನಕ್ಕೆ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುತ್ತಿದ್ದಾರೆ. ವಾಹನ ತಯಾರಕ ಕಂಪನಿಗಳು ಹೊಸ ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸಿದಂತೆಲ್ಲಾ ವಾಹನಗಳ್ಳರು ಹೊಸ ತಂತ್ರಜ್ಞಾನಗಳ ಮೂಲಕವೇ ಕದಿಯುತ್ತಿದ್ದಾರೆ. ತಮ್ಮ ವಾಹನಗಳು ಕಳುವಾಗದಂತೆ ತಡೆಯುವುದು ವಾಹನ ಮಾಲೀಕರಿಗೆ ನಿಜಕ್ಕೂ ಸವಾಲಾಗಿದೆ.

ಲಾಕ್ ಡೌನ್ ವೇಳೆಯಲ್ಲಿ ವಾಹನ ಕಳ್ಳತನ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿತ್ತು. ಅನ್ ಲಾಕ್ ನಂತರ ವಾಹನ ಕಳ್ಳತನದ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಿದೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಇತ್ತೀಚಿಗೆ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 58 ಪೊಲೀಸರು ಆರು ಸದಸ್ಯರ ವಾಹನಗಳ್ಳರ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರಿಂದ 13 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಗ್ಯಾಂಗ್ ಇದುವರೆಗೂ 100ಕ್ಕೂ ಹೆಚ್ಚು ವಾಹನಗಳನ್ನು ಕಳುವು ಮಾಡಿದೆ ಎಂದು ನೋಯ್ಡಾ ಉಪ ಪೊಲೀಸ್ ಆಯುಕ್ತ ರಾಜೇಶ್ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಗ್ಯಾಂಗ್ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಕಳುವು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಈ ಹೈಟೆಕ್ ಕಾರುಗಳ್ಳರು ಕಾರುಗಳಲ್ಲಿರುವ ಎಲೆಕ್ಟ್ರಾನಿಕ್ ಸಾಧನಗಳನ್ನು ದುರುಪಯೋಗಪಡಿಸಿಕೊಂಡು ಕಾರುಗಳನ್ನು ಕಳುವು ಮಾಡುತ್ತಿದ್ದರು. ಕದ್ದ ವಾಹನಗಳನ್ನು ಕಾಶ್ಮೀರದಲ್ಲಿ ಮಾರಾಟ ಮಾಡಿರುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಆರು ಜನರಲ್ಲಿ ಇಬ್ಬರು ಕಿಂಗ್ ಪಿನ್ ಗಳು ಸೇರಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಒಬ್ಬ ಮೀರತ್ ಮೂಲದವನು. ಮತ್ತೊಬ್ಬ ಕಾಶ್ಮೀರಕ್ಕೆ ಸೇರಿದವನು. ಈ ಗ್ಯಾಂಗ್ ನ ಸದಸ್ಯರು ವಾಹನಗಳನ್ನು ಕದ್ದ ತಕ್ಷಣ ವಾಹನದ ನೋಂದಣಿ ಸಂಖ್ಯೆ, ನಂಬರ್ ಪ್ಲೇಟ್ ಹಾಗೂ ಬಣ್ಣವನ್ನು ಬದಲಿಸುತ್ತಿದ್ದರು.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಗ್ಯಾಂಗ್‌ನ ಮತ್ತಿಬ್ಬರು ಸದಸ್ಯರು ತಲೆಮರೆಸಿಕೊಂಡಿದ್ದು, ಪೊಲೀಸರು ಆ ಇಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ. ಅವರನ್ನೂ ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಮಾಲೀಕರು ಹೆಚ್ಚು ಜಾಗರೂಕರಾಗಿದ್ದರೆ ಮಾತ್ರ ವಾಹನಗಳ್ಳರಿಂದ ತಮ್ಮ ಕಾರುಗಳನ್ನು ರಕ್ಷಿಸಿಕೊಳ್ಳಬಹುದು. ಇಲ್ಲದಿದ್ದರೆ ದುಬಾರಿ ಬೆಲೆಯ ಕಾರುಗಳನ್ನು ಕಳೆದು ಕೊಳ್ಳಬೇಕಾಗುತ್ತದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಕಳವು ಮಾಡಲಾದ ಕಾರುಗಳನ್ನು ಪತ್ತೆಹಚ್ಚಲು ಹಲವಾರು ಸಾಧನಗಳಿವೆ. ಅವುಗಳನ್ನು ಕಾರುಗಳಲ್ಲಿ ಅಳವಡಿಸಿಕೊಳ್ಳುವುದು ಒಳ್ಳೆಯದು. ಈ ಸಾಧನಗಳು ಕಳುವಾದ ವಾಹನಗಳನ್ನು ಪತ್ತೆ ಹಚ್ಚಲು ನೆರವಾಗುತ್ತವೆ.

ಇದರ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಖರೀದಿಸುವಾಗ ಹೆಚ್ಚು ಜಾಗರೂಕರಾಗಿರುವುದು ಅವಶ್ಯಕ. ಇಲ್ಲದಿದ್ದರೆ ಕದ್ದ ಕಾರುಗಳನ್ನು ಖರೀದಿಸುವ ಸಾಧ್ಯತೆಗಳಿರುತ್ತವೆ. ಈ ಕಾರುಗಳನ್ನು ಖರೀದಿಸಿದರೆ ಮುಂದೆ ಅಪಾಯಕ್ಕೆ ಸಿಲುಕುವುದು ಖಚಿತ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.