Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಾಣವಾಗುತ್ತಿದೆ ಈ ನಗರದ ರಸ್ತೆ
ಪೆಟ್ರೋಲ್, ಡೀಸೆಲ್ ವಾಹನಗಳ ರೀತಿಯಲ್ಲಿಯೇ ಪ್ಲಾಸ್ಟಿಕ್ ತ್ಯಾಜ್ಯವು ಸಹ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈ ಕಾರಣಕ್ಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಲು ವಿಶ್ವದ ಹಲವು ದೇಶಗಳು ಪ್ರಯತ್ನಿಸುತ್ತಿವೆ. ಭಾರತವೂ ಸಹ ಇದಕ್ಕೆ ಹೊರತಾಗಿಲ್ಲ.

ಭಾರತದಲ್ಲಿ ಪ್ಲಾಸ್ಟಿಕ್ ಕವರ್ ಮಾರಾಟ ಮಾಡುವುದನ್ನು ನಿಷೇಧಿಸುವಂತಹ ಆದೇಶಗಳನ್ನು ಕಾಲಕಾಲಕ್ಕೆ ಜಾರಿಗೊಳಿಸಲಾಗುತ್ತಿದೆ. ಆದರೆ ಅದರ ಪೂರ್ಣ ಅನುಷ್ಠಾನದಲ್ಲಿ ವಿವಿಧ ಸಮಸ್ಯೆಗಳಿವೆ. ಆದ್ದರಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡುವ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಿ ನೆದರ್‌ಲ್ಯಾಂಡ್ಸ್ ಸೇರಿದಂತೆ ವಿಶ್ವದ ವಿವಿಧ ದೇಶಗಳಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಹಲವು ದೇಶಗಳಲ್ಲಿ ಭವಿಷ್ಯದಲ್ಲಿ ರಸ್ತೆಗಳನ್ನು ಮರುಬಳಕೆಯ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸುವ ನಿರೀಕ್ಷೆಗಳಿವೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಭಾರತದಲ್ಲಿಯೂ ಈ ಬಗ್ಗೆ ಗಮನ ಹರಿಸಲಾಗುತ್ತಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ, ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಭಾರತದಲ್ಲಿ ಈ ರೀತಿಯ ರಸ್ತೆಯನ್ನು ನಿರ್ಮಿಸುತ್ತಿರುವುದು ಇದೇ ಮೊದಲು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಯೋಜನೆಯನ್ನು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಿರ್ವಹಿಸುತ್ತಿದೆ. 500 ಮೀಟರ್ ದೂರದ ಈ ರಸ್ತೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಈ ಯೋಜನೆ ಯಶಸ್ವಿಯಾದರೆ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಹೇಳಿರುವ ಅಧಿಕಾರಿಗಳು ಈ ಪ್ರಾಯೋಗಿಕ ಹಂತದಲ್ಲಿ ಒಟ್ಟು 35 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಲಾಗಿದೆ ಎಂದು ಹೇಳಿದ್ದಾರೆ.

ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಲಾದ ರಸ್ತೆಯ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಲಾಗುವುದು. ಈ ರಸ್ತೆ ನಿರ್ಮಾಣ ಕಾರ್ಯವು ತೃಪ್ತಿದಾಯಕ ಫಲಿತಾಂಶಗಳನ್ನು ನೀಡಿದರೆ ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುತ್ತದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ಯೋಜನೆಯನ್ನು ಆರಂಭಿಸಲಾಗಿದೆ. ಭಾರತದಲ್ಲಿ ಪ್ರತಿದಿನ ಸುಮಾರು 26 ಸಾವಿರ ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಇದರಿಂದಾಗಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಪ್ಲಾಸ್ಟಿಕ್ ತ್ಯಾಜ್ಯವನ್ನು ಉತ್ಪಾದಿಸುವ ದೇಶಗಳಲ್ಲಿ ಒಂದಾಗಿದೆ.

ನೋಯ್ಡಾದಲ್ಲಿ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯು ಯಶಸ್ವಿಯಾದರೆ ಭಾರತದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಅಧಿಕಾರಿಗಳುಹೇಳಿದಂತೆ ಪರಿಹರಿಸಬಹುದು. ಈ ಯೋಜನೆಯು ಸದ್ಯಕ್ಕೆ ಭಾರತದಾದ್ಯಂತ ಎಲ್ಲರ ಗಮನ ಸೆಳೆಯುತ್ತಿದೆ.
ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.