ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಪಾಠ ಕಲಿಯಲು ಶಾಲೆಗೆ ದ್ವಿಚಕ್ರ ವಾಹನಗಳಲ್ಲಿ ಹೋಗುವ ಮಕ್ಕಳಿಂದ ಅವರ ಪೋಷಕರು ಪಾಠ ಕಲಿಯಬೇಕಾಗುತ್ತದೆ. ಮಕ್ಕಳು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೊಲೀಸರು ಅವರ ಪೋಷಕರಿಗೆ ಪಾಠ ಕಲಿಸಿದ್ದಾರೆ.

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಈಗ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಂಚಾರಿ ನಿಯಮ ಉಲ್ಲಂಘನೆಗಳನ್ನು ಕಡಿಮೆ ಮಾಡುವಉದ್ದೇಶದಿಂದ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಶಾಲಾ ಮಕ್ಕಳು ಶಾಲೆಗೆ ತೆರಳಲು ಸ್ಕೂಟರ್ ಬಳಸಿದ ಕಾರಣಕ್ಕೆ ಅವರ ತಂದೆ ತಾಯಿಗೆ ದಂಡ ವಿಧಿಸಿದ ಘಟನೆ ಒಡಿಶಾದಲ್ಲಿ ನಡೆದಿದೆ. ಸಂಚಾರ ನಿಯಮಗಳ ಅನ್ವಯ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಕೆಲವು ರಾಜ್ಯಗಳಲ್ಲಿ 18 ವರ್ಷ ಕಡಿಮೆ ವಯಸ್ಸಿನವರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದಿಲ್ಲ. ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಯಾವುದೇ ವ್ಯಕ್ತಿ ವಾಹನ ಚಾಲನೆ ಮಾಡುವಂತಿಲ್ಲ.

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಈ ಕಾರಣಕ್ಕೆ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಸ್ಕೂಟರ್‌ನಲ್ಲಿ ಶಾಲೆಗೆ ಹೋದ ವಿದ್ಯಾರ್ಥಿಗಳ ಪೋಷಕರಿಗೆ ಒಡಿಶಾ ರಾಜ್ಯ ಪೊಲೀಸರು ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ. ನಾಲ್ಕು ವಿದ್ಯಾರ್ಥಿಗಳ ಪೋಷಕರಿಗೆ ದಂಡ ವಿಧಿಸಲಾಗಿದೆ ಎಂದು ಕಳಿಂಗ ಟಿವಿ ವರದಿ ಮಾಡಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಈ ನಾಲ್ವರು ವಿದ್ಯಾರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಸ್ಕೂಟರ್ ಹಾಗೂ ಬೈಕ್ ಚಾಲನೆ ಮಾಡಿದ್ದಾರೆ. ಈ ಕಾರಣಕ್ಕೆ ಒಡಿಶಾ ಪೊಲೀಸರು ಈ ವಿದ್ಯಾರ್ಥಿಗಳು ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಅವರ ಪೋಷಕರಿಗೆ ರೂ.1 ಲಕ್ಷ ದಂಡ ವಿಧಿಸಿದ್ದಾರೆ.

ಕರೋನಾ ವೈರಸ್ ದೇಶದಲ್ಲಿ ಮತ್ತೆ ವೇಗವಾಗಿ ಹರಡುತ್ತಿದೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ಪಾಸ್ ವ್ಯವಸ್ಥೆಯನ್ನು ಪುನಃ ಜಾರಿಗೆ ತರಲಾಗಿದೆ. ಜನರು ಸಾರ್ವಜನಿಕ ಸಾರಿಗೆ ಬಳಸಿದರೆ ಕರೋನಾ ವೈರಸ್ ಹರಡಬಹುದೆಂಬ ಕಾರಣಕ್ಕೆ ಸ್ವಂತ ವಾಹನಗಳನ್ನು ಬಳಸುತ್ತಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರಣಕ್ಕೆ ಕೆಲವು ಪೋಷಕರು ತಮ್ಮ ವಾಹನಗಳಲ್ಲಿಯೇ ಮಕ್ಕಳನ್ನು ಶಾಲೆಗೆ ಬಿಡುತ್ತಾರೆ. ಇನ್ನೂ ಕೆಲವರು ಮಕ್ಕಳಿಗೆ ವಾಹನವನ್ನು ಕೊಟ್ಟು ಶಾಲೆಗೆ ಕಳುಹಿಸುತ್ತಿದ್ದಾರೆ. ಈ ರೀತಿ ಮಾಡಿದರೆ ಭಾರೀ ಪ್ರಮಾಣದ ದಂಡ ವಿಧಿಸಬಹುದೆಂಬ ಅರಿವು ಅವರಿಗಿಲ್ಲ.

ಮಕ್ಕಳು ಮಾಡಿದ ತಪ್ಪಿಗೆ ಒಂದು ಲಕ್ಷ ರೂಪಾಯಿ ದಂಡ ತೆತ್ತ ಪೋಷಕರು

ಇವುಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಿಯಮಗಳ ಅನ್ವಯ ಡ್ರೈವಿಂಗ್ ಲೈಸೆನ್ಸ್ ಇಲ್ಲದ ಮಕ್ಕಳಿಗೆ ದ್ವಿಚಕ್ರ ವಾಹನಗಳನ್ನು ನೀಡುವ ಪೋಷಕರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.

Most Read Articles

Kannada
English summary
Odisha police imposes one lakh rupees fine on parents of four students. Read in Kannada.
Story first published: Saturday, March 13, 2021, 9:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X