ರೈಲು ಹಳಿತಪ್ಪಲು ಮುಖ್ಯ ಕಾರಣ ಬಹಿರಂಗಪಡಿಸಿದ ರೈಲ್ವೆ ಅಧಿಕಾರಿಗಳು... ಹೆಚ್ಚಾಯ್ತು ಸಾವಿನ ಸಂಖ್ಯೆ
ಒಡಿಶಾದ ಬಹನಾಗಾ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 300 ಜನರು ಸಾವನ್ನಪ್ಪಿದ್ದು, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಇದು ದೋಷಯುಕ್ತ ಟ್ರ್ಯಾಕ್‌ನಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ವಿವರವಾದ ತನಿಖೆಯು ಅಪಘಾತಕ್ಕೆ ನಿಖರ ಕಾರಣವನ್ನು ತಿಳಿಸಲಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಘಟನೆಯ ಬಗ್ಗೆ ತನಿಖೆ ನಡೆಸಲಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಉನ್ನತ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದ ನಂತರ ಈ ಅಪಘಾತ ಸಂಭವಿಸಿದೆ.

ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ಬಿದ್ದಿದ್ದ ಬೋಗಿಗಳಿಗೆ ಡಿಕ್ಕಿ ಹೊಡೆದು ತನ್ನದೇ ಬೋಗಿಗಳು ಮಗುಚಿ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಗೂಡ್ಸ್ ರೈಲು ಕೂಡ ಡಿಕ್ಕಿ ಹೊಡೆದಿದೆ. ಡಿಕ್ಕಿ ಸಂಭವಿಸಿದಾಗ ಎರಡೂ ರೈಲುಗಳು ಅತಿವೇಗದಲ್ಲಿ ಚಲಿಸುತ್ತಿದ್ದವು, ದೋಷಯುಕ್ತ ಟ್ರ್ಯಾಕ್‌ನಿಂದ ಮೊದಲ ರೈಲು ಹಳಿ ತಪ್ಪಿದೆ ಎಂದು ಹೇಳಲಾಗುತ್ತಿದೆ.
ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂಜೆ 6.50 ರಿಂದ 7.10 ರ ನಡುವೆ ಭಾರಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದು ಭಾರತದಲ್ಲೇ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದಾಗಿದೆ. ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.

- ಪಶ್ಚಿಮ ಬಂಗಾಳ ಸರ್ಕಾರದ ತುರ್ತು ನಿಯಂತ್ರಣ ಕೊಠಡಿ ಸಂಖ್ಯೆ: 033- 22143526/ 22535185
- ರೈಲ್‌ಮದದ್ ಸಹಾಯವಾಣಿ: 044- 25354771
- ಖರಗ್‌ಪುರ ನಿಲ್ದಾಣದ ಸಹಾಯವಾಣಿ ಸಂಖ್ಯೆಗಳು: 8972073925, 9332392339
- ಹೌರಾ ನಿಲ್ದಾಣದ ಸಹಾಯವಾಣಿ ಸಂಖ್ಯೆ: 033 - 26382217
- ಶಾಲಿಮಾರ್ ಠಾಣೆಯ ಸಹಾಯವಾಣಿ ಸಂಖ್ಯೆ: 9903370746
- ಬಾಲಸೋರ್ ನಿಲ್ದಾಣದ ಸಹಾಯವಾಣಿ ಸಂಖ್ಯೆ: 8249591559, 7978418322
- ಒಡಿಶಾ ಸರ್ಕಾರದ ಸಹಾಯವಾಣಿ ಸಂಖ್ಯೆ : 06782-262286
- ಚೆನ್ನೈ ರೈಲು ನಿಲ್ದಾಣದ ಸಹಾಯವಾಣಿ ಸಂಖ್ಯೆ: 044- 25330952
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಲೋಹಾಟಿ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಒಡಿಶಾದಲ್ಲಿ ರೈಲು ಅಪಘಾತದ ನಂತರ ಶನಿವಾರ (ಇಂದು) ನಿಗದಿಯಾಗಿದ್ದ ಬಹುನಿರೀಕ್ಷಿತ ಮುಂಬೈ- ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಲೋಕಾರ್ಪಣೆ ಸಮಾರಂಭವನ್ನು ರದ್ದುಗೊಳಿಸಲಾಗಿದೆ. ಮುಂಬೈ- ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕಚೇರಿಯಿಂದ ಇಂದು ಬೆಳಿಗ್ಗೆ 10:30 ಕ್ಕೆ ವಾಸ್ತವಿಕವಾಗಿ ಉದ್ಘಾಟಿಸಬೇಕಿತ್ತು.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸಂಬಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಕೂಡ ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications








